Asianet Suvarna News Asianet Suvarna News

ಕರ್ನಾಟಕದ ಮುಂದಿನ ಸಿಎಂ ಯಾರು? ದಿಲ್ಲಿಯಿಂದಲೇ ಅರುಣ್ ಸಿಂಗ್ ಪ್ರತಿಕ್ರಿಯೆ

* ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು?
* ನವದೆಹಲಿಯಲ್ಲಿ ಅರುಣ್ ಸಿಂಗ್ ಪ್ರತಿಕ್ರಿಯೆ
* ಅರುಣ್ ಸಿಂಗ್ ಕರ್ನಾಟಕ ಬಿಜೆಪಿ ಉಸ್ತುವಾರಿ 

BJP IN charge Arun singh Reacts On Who Karnataka Next CM rbj
Author
Bengaluru, First Published Jul 26, 2021, 4:22 PM IST

ಬೆಂಗಳೂರು, (ಜು.26): ಬಿಎಸ್ ಯಡಿಯೂರಪ್ಪ ಅವರು ಇಂದು (ಸೋಮವಾರ) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕರ್ನಾಟಕದ ಮುಂದಿನ ಸಿಎಂ ಯಾರು ಎನ್ನುವುದು ಭಾರೀ ಚರ್ಚೆಯಾಗುತ್ತಿದೆ. 

ಇನ್ನು ಈ  ಬಗ್ಗೆ ನವದೆಹಲಿಯಲ್ಲಿ ಪ್ರತಿಕ್ರಿಯಿಸಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ , ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಕರ್ನಾಟಕ ಸಿಎಂ ಬಗ್ಗೆ ಚರ್ಚೆ ಮಾಡಲಾಗುವುದು. ಬಳಿಕ, ಕರ್ನಾಟಕ ಸಿಎಂ ಬಗ್ಗೆ ಸಂಸದೀಯ ಮಂಡಳಿ ಸಭೆ ನಿರ್ಧಾರ ಕೈಗೊಳ್ಳುತ್ತದೆ ಎಂದು ಸ್ಪಷ್ಟಪಡಿಸಿದರು.

 ಆದರೆ, ಬಿಜೆಪಿ ಸಂಸದೀಯ ಮಂಡಳಿ ಸಭೆ ಬಗ್ಗೆ ನಿರ್ಧಾರವಾಗಿಲ್ಲ. ಬೆಂಗಳೂರಿಗೆ ನಾನು ತೆರಳುವ ಬಗ್ಗೆಯೂ ಇನ್ನೂ ನಿರ್ಧರಿಸಿಲ್ಲ ಎಂದು ಹೇಳಿದರು.

ಬಿಎಸ್‌ವೈ ರಾಜೀನಾಮೆ: ಕಟೀಲ್‌ಗೆ ಹೈಕಮಾಂಡ್ ಬುಲಾವ್, ರಾಜ್ಯಪಾರನ್ನ ಭೇಟಿಯಾದ ಸ್ಪೀಕರ್

ಬಿಎಸ್‌ವೈ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವುದು ಭಾರೀ ಚರ್ಚೆಯಾಗುತ್ತಿದೆ. ಇನ್ನು ಮುಂದಿನ ಸಿಎಂ ಯಾರು ಎನ್ನುವುದನ್ನು ನೋಡುವುದಾದರೆ ಐದಾರು ಹೆಸರುಗಳು ಕೇಳಿಬರುತ್ತಿವೆ. ಲಿಂಗಾಯತ, ಬ್ರಾಹ್ಮಣ, ಒಕ್ಕಲಿಗ ನಾಯಕರುಗಳು ಸಿಎಂ ರೇಸ್‌ನಲ್ಲಿದ್ದಾರೆ.

ಪ್ರಹ್ಲಾದ್ ಜೋಶಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಸಿಟಿ ರವಿ, ಅರವಿಂದ ಬೆಲ್ಲದ್, ನಳಿನ್ ಕುಮಾರ್ ಕಟೀಲ್ ಹಾಗೂ ಮುರುಗೇಶ್ ನಿರಾಣಿ ಹೆಸರುಗಳು ಕೇಳಿಬರುತ್ತಿದ್ದು, ಹೈಕಮಾಂಡ್‌ ಯಾರಿಗೆ ಮಣೆ ಹಾಕುತ್ತೋ ಎನ್ನುವುದನ್ನು ಕಾದುನೋಡಬೇಕಿದೆ.

ಇನ್ನು ಹೈಕಮಾಂಡ್ ವೀಕ್ಷಣೆ ತಂಡ ಮಂಗಳವಾರ ರಾಜ್ಯಕ್ಕೆ ಆಗಮಿಸಿ ಬಿಜೆಪಿದ ನಾಯಕರ ಜೊತೆ ಚರ್ಚಿಸಿ ಯಾರನ್ನು ಸಿಎಂ ಮಾಡಬೇಕೆಂದು ತೀರ್ಮಾನಿಸಲಿದ್ದಾರೆ.

Follow Us:
Download App:
  • android
  • ios