Asianet Suvarna News Asianet Suvarna News

ಪಬ್ಲಿಸಿಟಿಗಾಗಿ ಬಿಜೆಪಿ ರಾಜಕೀಯ ಮಾಡುತ್ತಿದೆ: ಸಚಿವ ಮಧು ಬಂಗಾರಪ್ಪ ಕಿಡಿ

ಬಿಜೆಪಿಯವರು ಉತ್ತರ ಕರ್ನಾಟಕ ಸಮಸ್ಯೆಯ ಬಗ್ಗೆ ಚರ್ಚೆ ಮಾಡುವ ಬದಲು ಪಬ್ಲಿಸಿಟಿಗಾಗಿ ರಾಜಕೀಯ ಮಾಡುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಿಡಿಕಾರಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. 

BJP is doing politics for publicity Says Minister Madhu Bangarappa gvd
Author
First Published Dec 14, 2023, 5:26 PM IST

ಬೆಳಗಾವಿ (ಡಿ.14): ಬಿಜೆಪಿಯವರು ಉತ್ತರ ಕರ್ನಾಟಕ ಸಮಸ್ಯೆಯ ಬಗ್ಗೆ ಚರ್ಚೆ ಮಾಡುವ ಬದಲು ಪಬ್ಲಿಸಿಟಿಗಾಗಿ ರಾಜಕೀಯ ಮಾಡುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಿಡಿಕಾರಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಉತ್ತರ ಕರ್ನಾಟಕದ ಸಮಸ್ಯೆಯ ಚರ್ಚೆಗೆ ಉತ್ತರ ಕೊಡಲು ಸರ್ಕಾರ ಸಿದ್ಧವಿದೆ. ಆದರೆ ಚರ್ಚೆ ಮಾಡಬೇಕಿದ್ದ ಬಿಜೆಪಿ ಪಬ್ಲಿಸಿಟಿ ಸಲುವಾಗಿ ಬೆಳಗಾವಿ ಅಧಿವೇಶನವನ್ನು ಬಿಜೆಪಿಯವರು ಬಳಸಿಕೊಳ್ಳುತ್ತಿರುವುದು ಖಂಡನೀಯ ಎಂದರು. ಬಿಜೆಪಿಯವರು ಇದೇ ರೀತಿ ಜನರ ಸಮಸ್ಯೆ ಚರ್ಚೆ ಮಾಡುವ ಬದಲು ಪಬ್ಲಿಸಿಟಿ ಸಲುವಾಗಿ ರಾಜಕೀಯ ಮಾಡುತ್ತಿದ್ದರೆ ಮತ್ತೇ ರಾಜ್ಯದ ಜನ ಅವರನ್ನು ವಿರೋಧ ಪಕ್ಷದಲ್ಲಿ ಕುಳಿಸುತ್ತಾರೆ. 

ಸರ್ಕಾರ ರಾಜ್ಯದ ಸಮಸ್ಯೆಯ ಬಗ್ಗೆ ಹೆಚ್ಚಿನ ಆಧ್ಯತೆ ನೀಡಿ ಪರಿಹರಿಸುವ ಕೆಲಸ ಮಾಡುತ್ತಿದ್ದೆ ಎಂದರು. ಗಡಿ ಭಾಗದ ಶಾಲೆಯಲ್ಲಿ ಶಿಕ್ಷಕರ ಕೊರತೆಯ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದೆ. ಗಡಿ ಭಾಗದ ಶಾಲೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಯಾವುದೇ ಕಾರಣಕ್ಕೂ ಶಿಕ್ಷಕರ ಸಮಸ್ಯೆ ಎದುರಾಗದು ಎಂದರು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು ಎನ್ನುವುದು ಸರ್ಕಾರದ ಬಯಕೆ ಇದೆ. ಈ ನಿಟ್ಟಿನಲ್ಲಿ ಸರಕಾರ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಯಾವುದೇ ಕಾರಣಕ್ಕೂ ಶಿಕ್ಷಕರ ಕೊರತೆಯಾಗಲು ಸರ್ಕಾರ ಬಿಡುವುದಿಲ್ಲ ಎಂದರು.

ಅವರಿಬ್ಬರ ಪಾಪದ ಕೊಡ ತುಂಬಿದೆ: ಸೋಮಣ್ಣ, ಯತ್ನಾಳ್ ವಿರುದ್ಧ ರೇಣುಕಾಚಾರ್ಯ ಏಕವಚನದಲ್ಲಿ ವಾಗ್ದಾಳಿ

ಬಿಲ್ಲವ, ಆರ್ಯ, ಈಡಿಗರಲ್ಲಿ ಒಗ್ಗಟ್ಟು ಅಗತ್ಯ: ಬಿಲ್ಲವ, ಆರ್ಯ, ಈಡಿಗ ಸಮಾಜದಲ್ಲಿ ಸಂಘಟನೆಯ ಕೊರತೆಯಿಂದಾಗಿ ಹಿನ್ನಡೆಯಾಗಿದ್ದು ಆರ್ಯ, ಈಡಿಗ ಸೇರಿದಂತೆ 26 ಪಂಗಡಗಳು ಒಗ್ಗಟ್ಟನ್ನು ಪ್ರದರ್ಶಿಸಿದಲ್ಲಿ ಸಮಾಜ ಬಲಯುತವಾಗಲು ಸಾಧ್ಯವೆಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಮೂಲ್ಕಿಯ ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಸಭಾಂಗಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಡಿ.10ರಂದು ಬೆಂಗಳೂರಿನಲ್ಲಿ ಆರ್ಯ, ಈಡಿಗ ಸಂಘದ ಅಮೃತ ಮಹೋತ್ಸವ ಪ್ರಯುಕ್ತ ಸಮಾಜದ ಬೃಹತ್‌ ಸಮಾವೇಶ ನಡೆಯಲಿದ್ದು ಒಗ್ಗಟನ್ನು ಪ್ರದರ್ಶಿಸಿದಲ್ಲಿ ನಾರಾಯಣ ಗುರು ಅಭಿವೃದ್ದಿ ನಿಗಮ ಸೇರಿದಂತೆ ಎಲ್ಲ ಬೇಡಿಕೆಗಳನ್ನು ಪಡೆಯಲು ಸಾಧ್ಯ. 

ಮಹಾನ್‌ ದಾರ್ಶನಿಕರಾದ ನಾರಾಯಣ ಗುರುಗಳು, ಅಂಬೇಡ್ಕರ್‌, ಗಾಂಧಿ, ವಿವೇಕಾನಂದರು ಸೇರಿದಂತೆ ಎಲ್ಲರಿಗೂ ಮಾರ್ಗದರ್ಶಕರಾಗಿದ್ದು ನಾರಾಯಣ ಗುರುಗಳ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಯಶಸ್ಸನ್ನು ಪಡೆಯಲು ಸಾಧ್ಯ ಎಂದರು. ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ಸಂಘಟನೆ ಹಾಗೂ ಒಗ್ಗಟ್ಟಿನ ಮೂಲಕ ಮುಂದಿನ ದಿನಗಳಲ್ಲಿ ಬಿಲ್ಲವ ಸಮಾಜ ಮತ್ತೆ ಎದ್ದು ನಿಲ್ಲಲು ಸಾಧ್ಯವಿದೆ ಎಂದು ಹೇಳಿದರು.

ರಾಜಕೀಯಕ್ಕಾಗಿ ಬಿಜೆಪಿ ಹೋರಾಟ ಮಾಡುತ್ತಿದೆ: ಸಚಿವ ಗುಂಡೂರಾವ್

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷ ಡಾ. ರಾಜ್‌ ಶೇಖರ್‌ ಕೋಟ್ಯಾನ್‌ ಅಧ್ಯಕ್ಷತೆ ವಹಿಸಿದ್ದರು. ಸತ್ಯಜಿತ್‌ ಸುರತ್ಕಲ್‌, ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರ ಕೋಶಾಧಿಕಾರಿ ಪದ್ಮರಾಜ್‌, ಕಟಪಾಡಿ ಕ್ಷೇತ್ರದ ಶಂಕರ ಪೂಜಾರಿ, ಡಿ ಆರ್‌ ರಾಜು ಕಾರ್ಕಳ, ಗೆಜ್ಜೆಗಿರಿ ಕ್ಷೇತ್ರದ ಪಿತಾಂಬರ ಹೆರಾಜೆ, ಪ್ರತಿಭಾ ಕುಳಾಯಿ, ಭಾರತ್‌ ಬ್ಯಾಂಕ್‌ನ ನಿರ್ದೇಶಕ ಭಾಸ್ಕರ ಸಾಲ್ಯಾನ್‌, ಬಿಲ್ಲವ ಮಹಾ ಮಂಡಲದ ಪದಾಧಿಕಾರಿಗಳು ಮತ್ತಿತರರಿದ್ದರು.

Follow Us:
Download App:
  • android
  • ios