Asianet Suvarna News Asianet Suvarna News

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ಪರವಾದ ಏಕೈಕ ಪಕ್ಷ ಬಿಜೆಪಿ: ಸಂಸದ ಯದುವೀರ ಒಡೆಯರ್‌

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಪರವಾಗಿ ಕೆಲಸ ಮಾಡುತ್ತಿರುವ ಏಕೈಕ ಪಕ್ಷ ಬಿಜೆಪಿಯಾಗಿದ್ದು, ನಾವೆಲ್ಲ ಪಕ್ಷದ ಸಿದ್ಧಾಂತಕ್ಕೆ ಅನುಗುಣವಾಗಿ ಕೆಲಸ ಮಾಡಬೇಕು ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು. 

BJP is the only pro constitutional party in a democratic system says mp yaduveer wadiyar gvd
Author
First Published Sep 6, 2024, 5:56 PM IST | Last Updated Sep 6, 2024, 5:56 PM IST

ಮೈಸೂರು (ಸೆ.06): ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಪರವಾಗಿ ಕೆಲಸ ಮಾಡುತ್ತಿರುವ ಏಕೈಕ ಪಕ್ಷ ಬಿಜೆಪಿಯಾಗಿದ್ದು, ನಾವೆಲ್ಲ ಪಕ್ಷದ ಸಿದ್ಧಾಂತಕ್ಕೆ ಅನುಗುಣವಾಗಿ ಕೆಲಸ ಮಾಡಬೇಕು ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು. ನಗರದ ಬಿಜೆಪಿ ಕಚೇರಿ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಭಾರತದ ಅಭಿವೃದ್ಧಿ ಹೊಂದುವುದು ಬಿಜೆಪಿಯಿಂದ ಮಾತ್ರ ಸಾಧ್ಯ. ಇದಕ್ಕಾಗಿ ಪಕ್ಷದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ನೋಂದಣಿ ಮಾಡಿಸಿ, ಸದಸ್ಯರ ಬಲ ಹೆಚ್ಚಿಸಬೇಕು. ಇದಕ್ಕಾಗಿ ಪಕ್ಷದ ಸದಸ್ಯರೆಲ್ಲರೂ ಶ್ರಮಿಸೋಣ. ಭಾರತವನ್ನು ಇಂದು ಇಡೀ ವಿಶ್ವವೇ ಗಮನಿಸುತ್ತಿದೆ. ಇದಕ್ಕೆ ಪ್ರಧಾನಿ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಕಾರಣ. ಭಾರತವನ್ನು ವಿಶ್ವದ ದೊಡ್ಡ ಆರ್ಥಿಕ ಶಕ್ತಿಯ ದೇಶವನ್ನಾಗಿಸಲು ಮೋದಿ ಅವರು ಪ್ರಯತ್ನಿಸುತ್ತಿದ್ದಾರೆ ಎಂದರು.

ಬಯಲುಸೀಮೆಯನ್ನು ಬಂಗಾರದ ಸೀಮೆ ಮಾಡುವ ಶುಭ ಘಳಿಗೆ: ಡಿ.ಕೆ.ಶಿವಕುಮಾರ್

ಬಿಜೆಪಿಯಲ್ಲಿ ಮಾತ್ರ ಸಾಮಾನ್ಯ ಕಾರ್ಯಕರ್ತನೂ ಉನ್ನತ ಸ್ಥಾನಕ್ಕೆ ಏರಬಹುದು. ಬಿಜೆಪಿಯಲ್ಲಿ ಕುಟುಂಬ ರಾಜಕೀಯಕ್ಕಿಂತ ದೇಶ ಮೊದಲು ಎಂಬ ಧ್ಯೇಯ ಹೊಂದಿದ್ದೇವೆ. ದೇಶದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಮತ್ತು ಸದಸ್ಯರ ಸಂಖ್ಯೆ ಹೆಚ್ಚಬೇಕು. ಈ ನಿಟ್ಟಿನಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿ ಮನೆ ಮನೆಗೆ ಭೇಟಿ ನೀಡಿ ಪಕ್ಷದ ಸಿದ್ಧಾಂತ, ಗುರಿಯನ್ನು ತಿಳಿಸಿ ಸದಸ್ಯರನ್ನಾಗಿ ಮಾಡಬೇಕು. ಇದಕ್ಕಾಗಿ ಎಲ್ಲರೂ ಶ್ರಮಿಸೋಣ ಎಂದು ಅವರು ಕರೆ ನೀಡಿದರು.

ಶಾಸಕ ಟಿ.ಎಸ್. ಶ್ರೀವತ್ಸ ಮಾತನಾಡಿ, ಪ್ರತಿ ಬೂತ್‌ ನಲ್ಲಿ 300 ಮಂದಿ ಹೊಸ ಸದಸ್ಯರ ನೋಂದಣಿಗೆ ಗುರಿ ನೀಡಲಾಗಿದೆ. ಇದಕ್ಕಾಗಿ ಪ್ರತಿ ಬೂತ್‌ ನಲ್ಲೂ 6 ಜನರ ತಂಡ ರಚಿಸಿದ್ದು, ಪ್ರತಿಯೊಬ್ಬರು ಬೂತ್‌ ನಲ್ಲಿ ಓಡಾಡಿದರೆ ಗುರಿ ಮುಟ್ಟುವುದು ಅಸಾಧ್ಯವಲ್ಲ. ನೋಂದಣಿ ಜತೆಗೆ ಮತದಾರರ ಪಟ್ಟಿ ಪರಿಷ್ಕರಣೆಯ ಕೆಲಸವೂ ಆಗಬೇಕಿದೆ. ನಗರಪಾಲಿಕೆ ಚುನಾವಣೆ ಮುಂದಿಟ್ಟು ಕೆಲಸ ಮಾಡಿ ಎಂದು ಹೇಳಿದರು.

ಬಿಜೆಪಿ ನಗರಾಧಕ್ಷ ಎಲ್. ನಾಗೇಂದ್ರ ಮಾತನಾಡಿ, ಈ ಬಾರಿ ಮೈಸೂರು ನಗರದಲ್ಲಿ ಅತಿ ಹೆಚ್ಚು ಸದಸ್ಯತ್ವ ನೋಂದಣಿ ಆಗಬೇಕಿದೆ. ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಬಿಜೆಪಿಯ ಹೆಬ್ಬಾಗಿಲಾಗಿದೆ. ಅದಕ್ಕೆ ಪೂರಕವಾಗಿ ನಾವೆಲ್ಲ ಕೆಲಸ ಮಾಡಬೇಕು. ಕಾಂಗ್ರೆಸ್ ಸುಳ್ಳು ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದಿದೆ. ಒಂದೇ ವರ್ಷದಲ್ಲಿ ಮೂರ್ನಾಲ್ಕು ಹಗರಣ ಬೆಳಕಿಗೆ ಬಂದಿದ್ದು, ಸರ್ಕಾರದ ಭಷ್ಟಾಚಾರವನ್ನು ರಾಜ್ಯದ ಜನರೇ ಗುರುತಿಸಿದ್ದಾರೆ ಎಂದರು.

ಹೈಕೋರ್ಟ್ ತೀರ್ಪೋ, ಅಜೆಂಡಾವೋ: ಸರ್ಕಾರಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನೆ

ಸೆ. 9ಕ್ಕೆ ನ್ಯಾಯಾಲಯದ ತೀರ್ಪಿನ ನಂತರ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾದ ಅನಿವಾರ್ಯತೆ ಇದೆ. ಹಾಗಾಗಿ ಚುನಾವಣೆ ಯಾವಾಗ ಬೇಕಾದರೂ ಬರುವ ಸಾಧ್ಯತೆ ಇದ್ದು, ಸ್ಥಳೀಯ ಚುನಾವಣೆಯಲ್ಲಿ ಕಾರ್ಯಕರ್ತರಿಗೆ ಶಕ್ತಿ ತುಂಬಲು ಈ ಸದಸ್ಯತ್ಯ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ ಎಂದು ಅವರು ಹೇಳಿದರು. ಬಿಜೆಪಿ ರಾಜ್ಯ ಉಪಾಧಕ್ಷ ಎಂ. ರಾಜೇಂದ್ರ, ವಕ್ತಾರ ಎಂ.ಜಿ. ಮಹೇಶ್, ಮಾಜಿ ಮೇಯರ್‌ ಗಳಾದ ಸಂದೇಶ್ ಸ್ವಾಮಿ, ಶಿವಕುಮಾರ್, ವಿಧಾನ ಪರಿಷತ್‌ ಮಾಜಿ ಸದಸ್ಯ ತೋಂಟದಾರ್ಯ, ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಪಿ.ಮಂಜುನಾಥ್, ಮುಖಂಡರಾದ ಮಂಗಳಾ ಸೋಮಶೇಖರ್, ಫಣೀಶ್, ಎಚ್.ಜಿ. ಗಿರಿಧರ್, ಕೇಬಲ್‌ ಮಹೇಶ್‌, ಮಹೇಶ್‌ರಾಜೆ ಅರಸ್‌ ಮೊದಲಾದವರು ಇದ್ದರು.

Latest Videos
Follow Us:
Download App:
  • android
  • ios