ಬಿಜೆಪಿಯಿಂದ ಸರ್ಕಾರಕ್ಕೆ ಮಸಿ ಬಳಿಯುವ ಕೆಲಸ: ಸಚಿವ ಮಹದೇವಪ್ಪ ಆರೋಪ

ಮುಡಾದಿಂದ ಸಿಎಂ ಪತ್ನಿ ಪಾರ್ವತಿ ಅವರಿಗೆ 14 ನಿವೇಶನಗಳ ಮಂಜೂರಾತಿಯಲ್ಲಿ ಯಾವುದೇ ಲೋಪ ಆಗದಿದ್ದರೂ ಬಿಜೆಪಿ ನಾಯಕರು ಹತಾಶೆಯಿಂದ ಹೇಳಿಕೆ ನೀಡಿ ಸರ್ಕಾರಕ್ಕೆ ಮತ್ತು ಮುಖ್ಯಮಂತ್ರಿಗಳಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಆರೋಪಿಸಿದರು. 

BJP is trying to smear the government Says Minister HC Mahadevappa

ಮೈಸೂರು (ಜ.20): ಮುಡಾದಿಂದ ಸಿಎಂ ಪತ್ನಿ ಪಾರ್ವತಿ ಅವರಿಗೆ 14 ನಿವೇಶನಗಳ ಮಂಜೂರಾತಿಯಲ್ಲಿ ಯಾವುದೇ ಲೋಪ ಆಗದಿದ್ದರೂ ಬಿಜೆಪಿ ನಾಯಕರು ಹತಾಶೆಯಿಂದ ಹೇಳಿಕೆ ನೀಡಿ ಸರ್ಕಾರಕ್ಕೆ ಮತ್ತು ಮುಖ್ಯಮಂತ್ರಿಗಳಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇರ ಮತ್ತು ಪರೋಕ್ಷವಾಗಿ ನ್ಯಾಯಾಲಯದಲ್ಲಿ ಸಿಲುಕಿಸುವ ಹುನ್ನಾರ ಮಾಡುತ್ತಿದ್ದಾರೆ. ಲೋಕಾಯುಕ್ತ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ನಿನ್ನೆ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಸಿದ್ದರಾಮಯ್ಯ ಅವರ ಹೆಸರಿಗೆ ಮಳಿ ಬಳಿಯಲು ಮತ್ತು ಸರ್ಕಾರದ ಕಾರ್ಯ ವೈಖರಿಗೆ ಧಕ್ಕೆ ತರುವ ಕೆಲಸ ಮಾಡಲಾಗುತ್ತಿದೆ ಎಂದು ಅವರು ಕಿಡಿಕಾರಿದರು.

14 ನಿವೇಶನಗಳ ಮಂಜೂರಾತಿಗೆ ಸಂಬಂಧಿಸಿದಂತೆ ಏನು ಸಿಕ್ಕಿಲ್ಲ. ಸಿದ್ದರಾಮಯ್ಯ ಅವರ ಹೆಸರನ್ನು ಹಾಳು ಮಾಡುವ ಯತ್ನ ಫಲಿಸುವುದಿಲ್ಲ. ಬಿಜೆಪಿಯವರ ಆಡಳಿತದಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಬಿಜೆಪಿಯವರೇ ಅಧ್ಯಕ್ಷರು. ಅಧಿಕಾರಿಗಳನ್ನು ಅವರೇ ನೇಮಕ ಮಾಡಿದ್ದು. ಹೀಗಾಗಿರುವಾಗ ನಮ್ಮ ಸರ್ಕಾರದ ಪಾತ್ರವೇ ಇಲ್ಲ ಎಂದು ಅವರು ನುಡಿದರು. ಇಡಿ ಅಧಿಕಾರಿಗಳು ಪತ್ರಿಕಾ ಹೇಳಿಕೆ ನೀಡುವ ಉದ್ದೇಶ ಏನಿರಬಹುದು. ನ್ಯಾಯಾಲಯಕ್ಕೆ ಈ ವಿಚಾರ ಬರಲಿದೆ. ಕಾನೂನು ತಜ್ಞರು ಪರಿಶೀಲಿಸುತ್ತಿದ್ದಾರೆ. ಇಡಿ ಅಧಿಕಾರಿಗಳು ಮಾಡಿರುವ ಟ್ವೀಟ್ ಬಗ್ಗೆ ಪರಿಶೀಲಿಸಿ ಮುಂದಿನ ಕಾನೂನು ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದರು.

ಮನುವಾದ ಮಟ್ಟಹಾಕಲು ಮತ್ತೊಂದು ಹೋರಾಟ ಅಗತ್ಯ: ಸಚಿವ ಮಹದೇವಪ್ಪ

ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಅಗತ್ಯ ಕ್ರಮವಹಿಸಲು ಸೂಚನೆ: ಟಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆ. 10 ರಿಂದ 12 ರವರೆಗೆ ಕುಂಭಮೇಳ- 2025ನ್ನು ಹಮ್ಮಿಕೊಳ್ಳಲಾಗಿದೆ. ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು. ನಗರದ ಜಲದರ್ಶಿನಿಯಲ್ಲಿ ನಡೆದ ಕುಂಭ ಮೇಳ -2025 ರ ಆಚರಣೆಯ ಸಂಬಂಧ ಜಲದರ್ಶಿನಿ ಅಥಿತಿ ಗೃಹದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಫೆ. 10 ರಿಂದ 12 ಈವರೆಗೆ ಟಿ. ನರಸೀಪುರದಲ್ಲಿ ಕುಂಭಮೇಳ ನಡೆಯುತ್ತದೆ. ಪ್ರಥಮ ಬಾರಿಗೆ 1989 ರಲ್ಲಿ ಪ್ರಾರಂಭವಾಯಿತು. ಇದು 3 ವರ್ಷಗಳಿಗೆ ಒಮ್ಮೆ ನಡೆಯುವ ಮೇಳ. ಕುಂಭಮೇಳದಲ್ಲಿ ಸ್ವಚ್ಛತೆ ಕಾಪಾಡಬೇಕು. ಪ್ಲಾಸ್ಟಿಕ್ ಮುಕ್ತ ಪ್ರದೇಶ ಎಂದು ಘೋಷಣೆ ಮಾಡಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಬೇಕು ಎಂದು ಅವರು ಸೂಚಿಸಿದರು. ಸಾಂಸ್ಕೃತಿಕ ಹಾಗೂ ಜನಪದ ಸಂಗೀತ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ. ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಬೇಕು. ಕೆ.ಎಸ್.ಆರ್.ಟಿ. ಸಿ ವತಿಯಿಂದ ವಿವಿಧ ಭಾಗಗಳಿಂದ ಹೆಚ್ಚಿನ ಬಸ್ ಗಳ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.

ಸಿಎಂ ಕುರ್ಚಿ ಖಾಲಿ ಇಲ್ಲ, ಸಿದ್ದರಾಮಯ್ಯ ಮುಂದುವರಿಯುತ್ತಾರೆ: ಸಚಿವ ಮಹದೇವಪ್ಪ

ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಮಾತನಾಡಿ, 3 ದಿನವೂ ವಿವಿಧ ಕಾರ್ಯಕ್ರಮಗಳು ಜರುಗುತ್ತವೆ. ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಕಾವೇರಿ ಆರತಿಯನ್ನು ಫೆ. 11 ರಂದು ಮಾಡಲಾಗುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ದೇಶೀಯ ಸಂಸ್ಕೃತಿಯನ್ನು ಬಿಂಬಿಸುವಂತೆ ಮಾಡಬೇಕು. ಸ್ನಾನ ಘಟ್ಟಗಳಲ್ಲಿ ಸ್ವಚ್ಛತೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ನಿಗದಿತ ಸ್ಥಳಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಉಚಿತ ಅನ್ನದಾನ ಮಾಡುವ ಕಡೆ ಸ್ವಚ್ಛತೆ ಕಾಪಾಡಬೇಕು ಎಂದು ಅವರು ತಿಳಿಸಿದರು. ಫೈರ್ ಸೆಪ್ಟಿ ಕೈಗೊಳ್ಳಬೇಕು. ಕುಟೀರಗಳ ಬಳಿ ಭದ್ರತೆ ವ್ಯವಸ್ಥೆ ಕೈಗೊಳ್ಳಬೇಕು. ರಸ್ತೆಗಳು ಉತ್ತವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದರು.

Latest Videos
Follow Us:
Download App:
  • android
  • ios