Asianet Suvarna News Asianet Suvarna News

ಕಾಂಗ್ರೆಸ್‌ ಸರ್ಕಾರ ಬೀಳುತ್ತೆ ಎಂಬ ಭ್ರಮೆಯಲ್ಲಿದೆ ಬಿಜೆಪಿ: ಜಗದೀಶ್‌ ಶೆಟ್ಟರ್‌

ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ನೈತಿಕತೆ ಇಲ್ಲ. ಅವರು ಇಂದಿಗೂ ಸರ್ಕಾರ ಬೀಳುತ್ತದೆ ಎಂಬ ಭ್ರಮೆಯಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ವಿಪ ಸದಸ್ಯ ಜಗದೀಶ್‌ ಶೆಟ್ಟರ್‌ ಕಿಡಿಕಾರಿದರು. 

BJP is under illusion that Congress government will fall Says Jagadish Shettar gvd
Author
First Published Dec 11, 2023, 4:00 AM IST

ಹುಬ್ಬಳ್ಳಿ (ಡಿ.11): ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ನೈತಿಕತೆ ಇಲ್ಲ. ಅವರು ಇಂದಿಗೂ ಸರ್ಕಾರ ಬೀಳುತ್ತದೆ ಎಂಬ ಭ್ರಮೆಯಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ವಿಪ ಸದಸ್ಯ ಜಗದೀಶ್‌ ಶೆಟ್ಟರ್‌ ಕಿಡಿಕಾರಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ 40 ಪರ್ಸೆಂಟ್‌ ಸರ್ಕಾರ ಎಂಬ ಕಾರಣದಿಂದ ಅಧಿಕಾರ ಕಳೆದುಕೊಂಡಿತು. ನಾವು ಭ್ರಷ್ಟಾಚಾರ ಮಾಡಿಲ್ಲ ಅಂತ ಸಾಬೀತುಪಡಿಸಲು ಅವರಿಗೆ ಆಗಲಿಲ್ಲ. ಚುನಾವಣೆಯಲ್ಲಿ ಬಿಜೆಪಿಯವರು ಕೋಟ್ಯಂತರ ರುಪಾಯಿ ಖರ್ಚು ಮಾಡುತ್ತಾರಲ್ಲ, ಅವರೇನು ಸತ್ಯ ಹರಿಶ್ಚಂದ್ರರಾ? ಆ ದುಡ್ಡು ಎಲ್ಲಿಂದ ಬರುತ್ತೆ ತಿಳಿಸಲಿ ಎಂದರು.

ಲೋಕಸಭೆ ಚುನಾವಣೆಯ ನಂತರ ಕಾಂಗ್ರೆಸ್‌ ಸರ್ಕಾರ ಇರುವುದಿಲ್ಲವಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಬಿಜೆಪಿಯವರಿಗೆ ಅಧಿಕಾರ ಕಳೆದುಕೊಂಡ ಮೇಲೆ ಸಹಿಸಿಕೊಳ್ಳಲು ಆಗುತ್ತಿಲ್ಲ. 130 ಸ್ಥಾನಗಳಲ್ಲಿ ಬರುತ್ತೇವೆ ಅಂತ 60 ಸ್ಥಾನಕ್ಕೆ ಇಳಿದರು. ಅವರೀಗ ನೀರಿನಿಂದ ಹೊರ ಬಿದ್ದ ಮೀನಿನಂತಾಗಿದ್ದಾರೆ. ಮೊದಲು ಬಿಜೆಪಿಯವರು ತಮ್ಮ ಮನೆಯನ್ನು ಸರಿಪಡಿಸಿಕೊಳ್ಳಲಿ ಎಂದರು. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ‘ಜೈ ಶ್ರೀರಾಮ್’ ಘೋಷಣೆ ಕುರಿತು ಪ್ರತಿಕ್ರಿಯಿಸಿ, ಅದಕ್ಕೇ ರಾಜಕಾರಣ ಎನ್ನುವುದು. ಈ ರಾಜಕಾರಣದಲ್ಲಿ ಯಾವಾಗ ಏನಾಗುತ್ತದೆ ಎನ್ನುವುದು ಗೊತ್ತಾಗುವುದಿಲ್ಲ. ಎಚ್‌.ಡಿ. ಕುಮಾರಸ್ವಾಮಿ ಅವರು ಕೂಡ ಪರಿವರ್ತನೆಯಾಗಿದ್ದಾರೆ ಎಂದು ಲೇವಡಿ ಮಾಡಿದರು.

ರಾಜ್ಯದ ದುಸ್ಥಿತಿಗೆ ಪ್ರಧಾನಿ ಮೋದಿಯೇ ಕಾರಣ: ಜಗದೀಶ್‌ ಶೆಟ್ಟರ್‌

ಮುಸ್ಲಿಂ ಹಿತರಕ್ಷಣೆ ಹೇಳಿಕೆ ಸಮರ್ಥಿಸಿಕೊಂಡ ಶೆಟ್ಟರ: ಮುಸ್ಲಿಂರ ಹಿತರಕ್ಷಣೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆ ವಿಷಯವನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಪ ಸದಸ್ಯ ಜಗದೀಶ ಶೆಟ್ಟರ ಸಮರ್ಥಿಸಿಕೊಂಡಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಅರ್ಥವೇ ಆಗುತ್ತಿಲ್ಲ, ಮುಖ್ಯಮಂತ್ರಿಗಳು ನೀಡಿದ ಹೇಳಿಕೆ ನಾನು ನೋಡಿದ್ದೇನೆ. ಮುಸ್ಲಿಂ ಹಿತರಕ್ಷಣೆ ಮಾಡುತ್ತೇವೆ ಎಂದಿದ್ದಾರೆ. ಬೇರೆ ಬೇರೆ ಸಮಾಜದ ಕಾರ್ಯಕ್ರಮಕ್ಕೆ ಹೋದಾಗ ಅವರವರ ಹಿತರಕ್ಷಣೆ ಮಾಡುತ್ತೇನೆ ಎಂದು ಹೇಳುವುದು ಸಹಜ. ನಿಮ್ಮ ಹಿತರಕ್ಷಣೆ ಮಾಡುವುದಿಲ್ಲ ಎಂದು ಹೇಳಲು ಆಗುತ್ತದೆಯೇ? ಅದನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ. 

ಪ್ರಧಾನಿ ಮೋದಿಗೆ ಬೈಯದಿದ್ದರೆ ಸಿದ್ದರಾಮಯ್ಯಗೆ ಊಟ ರುಚಿಸಲ್ಲ: ಪ್ರಲ್ಹಾದ್‌ ಜೋಶಿ

ಅದನ್ನು ಬಿಟ್ಟು ಬಿಡಿ. ಇದಕ್ಕೆಲ್ಲ ಸಿದ್ದರಾಮಯ್ಯ ಅವರೇ ಸಮರ್ಥರಿದ್ದಾರೆ. ಅವರೇ ಅದಕ್ಕೆ ಸಮರ್ಪಕ ಉತ್ತರ ನೀಡಲಿದ್ದಾರೆ ಎಂದರು. ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರವಾಗಿ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ಆಗಲೇಬೇಕು. ವಿರೋಧ ಪಕ್ಷದವರ ಮೇಲೆ ಕೂಡ ಸಾಕಷ್ಟು ಜವಾಬ್ದಾರಿ ಇದೆ. ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಪ್ರತಿಪಕ್ಷದವರು ಧ್ವನಿ ಎತ್ತಿದರೆ ಖಂಡಿತವಾಗಿ ಚರ್ಚೆ ಆಗುತ್ತದೆ ಎಂದರು. ರಾಜ್ಯಾಧ್ಯಕ್ಷ ನೇಮಕ ನಂತರ ಬಸನಗೌಡ ಪಾಟೀಲ ಯತ್ನಾಳ್ ಅಸಮಾಧಾನ ವಿಚಾರವಾಗಿ ಮಾತನಾಡಿ, ಅವರವರೇ ಅದರ ಬಗ್ಗೆ ಮಾತನಾಡಬೇಕು. ನಾನು ಅದರ ಬಗ್ಗೆ ಏನು ಮಾತನಾಡಲಿ? ನಾನು ಹಿಂದೇನೂ ಸಾಕಷ್ಟು ಬಾರಿ ಹೇಳಿದ್ದೇನೆ. ಪದೇ ಪದೇ ಹೇಳುವುದರಲ್ಲಿ ಅರ್ಥವಿಲ್ಲ ಎಂದರು.

Follow Us:
Download App:
  • android
  • ios