ವಿಧಾನಸಭಾ ಚುನಾವಣೆಯ ಭಾಗವಾಗಿ ನಡೆಸಿದ ಜನಸಂಕಲ್ಪ ಯಾತ್ರೆ ಯಶಸ್ವಿಯಾದ ಬೆನ್ನಲ್ಲೇ ಮತ್ತೊಂದು ಸುತ್ತಿನ ಜನಸಂಕಲ್ಪ ಯಾತ್ರೆ ನಡೆಸಲು ಆಡಳಿತರೂಢ ಬಿಜೆಪಿ ತೀರ್ಮಾನಿಸಿದೆ. ವಿಧಾನಮಂಡಲದ ಅಧಿವೇಶನದ ಬಳಿಕ ಯಾತ್ರೆ ಕೈಗೊಳ್ಳುವ ಸಾಧ್ಯತೆ ಇದೆ.

ಬೆಂಗಳೂರು (ಫೆ.5) : ವಿಧಾನಸಭಾ ಚುನಾವಣೆಯ ಭಾಗವಾಗಿ ನಡೆಸಿದ ಜನಸಂಕಲ್ಪ ಯಾತ್ರೆ ಯಶಸ್ವಿಯಾದ ಬೆನ್ನಲ್ಲೇ ಮತ್ತೊಂದು ಸುತ್ತಿನ ಜನಸಂಕಲ್ಪ ಯಾತ್ರೆ ನಡೆಸಲು ಆಡಳಿತರೂಢ ಬಿಜೆಪಿ ತೀರ್ಮಾನಿಸಿದೆ. ವಿಧಾನಮಂಡಲದ ಅಧಿವೇಶನದ ಬಳಿಕ ಯಾತ್ರೆ ಕೈಗೊಳ್ಳುವ ಸಾಧ್ಯತೆ ಇದೆ.

ನಾಲ್ಕು ತಂಡಗಳಾಗಿ ಜನಸಂಕಲ್ಪ ಯಾತ್ರೆ ನಡೆಸಲು ನಿರ್ಧರಿಸಲಾಗಿದೆ. ಆದರೆ, ಯಾತ್ರೆ ನಡೆಸುವ ದಿನಾಂಕ ಇನ್ನೂ ನಿಗದಿ ಮಾಡಿಲ್ಲ. ಅಧಿವೇಶನ ಮುಗಿದ ಬಳಿಕ ಅಂದರೆ ಫೆ.25 ಅಥವಾ 26ರಿಂದ ಪ್ರಾರಂಭಿಸುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್‌ ನೇತೃತ್ವದಲ್ಲಿ ನಾಲ್ಕು ತಂಡಗಳಾಗಿ ಯಾತ್ರೆ ನಡೆಯಲಿದೆ. ಯಾತ್ರೆಯ ವೇಳೆ ಕೆಲವೆಡೆ ರಾಷ್ಟ್ರೀಯ ಮುಖಂಡರು ಭಾಗವಹಿಸಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿವೆ.

ಸಿದ್ದರಾಮಯ್ಯನವರೇ ನಿಮ್ಮ ಕೊನೆಯ ಚುನಾವಣೆಯಲ್ಲಿ ನೀವು ಗೆಲ್ಲಿ: ಸುಧಾಕರ್

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ನಡೆದ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಹಾಗೂ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್‌.ಸಂತೋಷ್‌ ನಡುವೆ ಉಭಯಕುಶಲೋಪರಿ.

ಏ.10-12ಕ್ಕೆ ಮುನ್ನ ಚುನಾವಣೆ: ಬಿಎಸ್‌ವೈ

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆ ಏ.10-12ಕ್ಕೂ ಮುನ್ನವೇ ಚುನಾವಣೆ ನಡೆಸುವ ಸಂಭವ ಇದೆ. ಬಿಜೆಪಿ 130-140 ಸ್ಥಾನಗಳನ್ನು ಪಡೆದು ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಶನಿವಾರ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು.

ಎಲ್ಲಿಂದ ಯಾತ್ರೆ?

1. ರಾಜಧಾನಿ ಬೆಂಗಳೂರಲ್ಲಿರುವ ನಾಡಪ್ರಭು ಕೆಂಪೇಗೌಡ ಪ್ರತಿಮೆಯಿಂದ

2. ಚಾಮರಾಜನಗರ ಜಿಲ್ಲೆಯ ತೀರ್ಥಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ

3. ಬೆಳಗಾವಿ ಜಿಲ್ಲೆ ಬೈಲಹೊಂಗಲದ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ

4. ಬೀದರ್‌ ಜಿಲ್ಲೆ ಬಸವಕಲ್ಯಾಣದ ಬಸವಣ್ಣನ ಅನುಭವ ಮಂಟಪದಿಂದ

ಎಲ್ಲಿಂದ ಯಾತ್ರೆ ಶುರು?:

ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಪ್ರತಿಮೆಯಿಂದ, ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಿಂದ, ಬೆಳಗಾವಿಯ ಬೈಲಹೊಂಗಲದ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ಮತ್ತು ಬೀದರ್‌ ಜಿಲ್ಲೆ ಬಸವ ಕಲ್ಯಾಣದ ಅನುಭವ ಮಂಟಪದಿಂದ ಯಾತ್ರೆ ಶುರು ಮಾಡಲು ಬಿಜೆಪಿ ಚರ್ಚೆ ನಡೆಸಿದೆ. ನಗರದ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿಯ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿಯೂ ಈ ಕುರಿತು ಸಮಾಲೋಚನೆ ನಡೆಸಲಾಗಿದೆ. ಮುಂದಿನ ಎರಡು ತಿಂಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಯಾತ್ರೆ ನಡೆಸಲಾಗುತ್ತದೆ. ಬಿಜೆಪಿಯ ಎಲ್ಲಾ ಮೋರ್ಚಾಗಳಿಂದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸಮಾವೇಶ ನಡೆಸಿ ಸರ್ಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಲಾಗುತ್ತದೆ ಎನ್ನಲಾಗಿದೆ.

ನಗರದಲ್ಲಿ ನಡೆದ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿಯೂ ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮಾತನಾಡಿ, ನಾಲ್ಕು ತಂಡಗಳಲ್ಲಿ ವಿಜಯ ಸಂಕಲ್ಪ ಯಾತ್ರೆ ಮುಂದುವರಿಸಲು ತೀರ್ಮಾನಿಸಲಾಗಿದೆ. ಪಕ್ಷದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಶಾಸಕರ ಸ್ಥಾನ ಗೆದ್ದು ಮತ್ತೊಮ್ಮೆ ಸರ್ಕಾರ ರಚನೆ ಮಾಡಲಿದೆ. ರಾಜ್ಯದ ಜನತೆಯ ಮನಸ್ಸಿನಲ್ಲಿ ಬಿಜೆಪಿ ಪರ ಅಲೆ ಇದೆ ಎಂದು ಹೇಳಿದ್ದಾರೆ.

ರಾಜ್ಯದ ಡಬಲ್‌ ಎಂಜಿನ್‌ ಸರ್ಕಾರ ಅದ್ಭುತವಾಗಿ ಕೆಲಸ ನಿರ್ವಹಿಸುತ್ತಿದೆ. ಒಬ್ಬೊಬ್ಬ ಶಾಸಕರ ಕ್ಷೇತ್ರಕ್ಕೆ ಒಂದೊಂದು ಸಾವಿರ ಕೋಟಿ ರು.ಗಿಂತ ಹೆಚ್ಚು ಅನುದಾನ ಬಂದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಲು ಅತ್ಯಂತ ಸಮರ್ಥವಾಗಿ ಕಾರ್ಯ ಮಾಡುತ್ತಿವೆ. ರೈತ ವಿದ್ಯಾನಿಧಿಯಿಂದ 11 ಲಕ್ಷ ವಿದ್ಯಾರ್ಥಿಗಳಿಗೆ ಪ್ರಯೋಜನ ಸಿಕ್ಕಿದೆ. ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಕೇಂದ್ರ ಆರು ಸಾವಿರ ರು. ಮತ್ತು ರಾಜ್ಯ ಸರ್ಕಾರ ನಾಲ್ಕು ಸಾವಿರ ರು. ಕೊಡುತ್ತಿದೆ. ದೇಶದಲ್ಲಿಯೇ ಮೊದಲ ಬಾರಿಗೆ ಬಂಜಾರ ಸಮುದಾಯಕ್ಕೆ 50 ಸಾವಿರ ಹಕ್ಕುಪತ್ರಗಳನ್ನು ಹಂಚಲಾಗಿದೆ. ಗೋವುಗಳಿಗೆ ಆಂಬ್ಯುಲೆನ್ಸ್‌ ಆರಂಭಿಸಿದ ಪ್ರಥಮ ಸರ್ಕಾರವಾಗಿ ಗುರುತಿಸಿಕೊಂಡಿದೆ ಎಂದು ಬಿಜೆಪಿ ಸರ್ಕಾರದ ಸಾಧನೆಗಳನ್ನು ವಿವರಿಸಿದರು.

ಚುನಾವಣೆ ಗೆಲ್ಲಲು ಬಿಜೆಪಿಯಿಂದ ರಥಯಾತ್ರೆ, ಕಾಂಗ್ರೆಸ್‌ನಲ್ಲಿ ಹೆಚ್ಚಾಯ್ತಾ ಅಸಾಮಾಧಾನ ಕಿಡಿ?

ವಿಶ್ವ ಇವತ್ತು ಭಾರತದ ಕಡೆ ನೋಡುತ್ತಿದೆ. ಒಂದು ಕಾಲದಲ್ಲಿ ಹಾವಾಡಿಗರ ದೇಶ, ಭಿಕ್ಷುಕರ ದೇಶ, ಸಾಲಗಾರರ ದೇಶ ಎಂದು ಕರೆಸಿಕೊಂಡಿದ್ದ ಭಾರತ ಇಂದು ಅಭಿವೃದ್ಧಿ ಶೀಲ, ಸಶಕ್ತ ದೇಶವಾಗಿ ಹೊರಹೊಮ್ಮಿದೆ. ಉಕ್ರೇನ್‌-ರಷ್ಯಾ ನಡುವಿನ ಯುದ್ಧ ನಿಲ್ಲಿಸಿ ಅಲ್ಲಿದ್ದ ನಮ್ಮ ವಿದ್ಯಾರ್ಥಿಗಳನ್ನು ಕರೆತರುವ ಸಾಮರ್ಥ್ಯ ಅನಾವರಣಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಶಕ್ತ ಭಾರತ ನಿರ್ಮಾಣಕ್ಕೆ ಪೂರಕ ಎನಿಸಿದ ದೂರದೃಷ್ಟಿಯ ಬಜೆಟ್‌ ಮಂಡಿಸಿದೆ. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರು. ನೀಡಿದ ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಅಭಿನಂದನೆಗಳು ಎಂದರು.