Asianet Suvarna News Asianet Suvarna News

ಪರಿಷತ್‌ ಚುನಾವಣೆ 2024: ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಮನ್ವಯ ಸಭೆ

ಇತರೆ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಉಭಯ ನಾಯಕರ ಪ್ರವಾಸ, ಪ್ರಚಾರ ಕಾರ್ಯಗಳ ಕುರಿತು ಚರ್ಚಿಸಿ ರಣತಂತ್ರ ರೂಪಿಸಲಾಗುತ್ತದೆ. ಆಡಳಿತಾರೂಢ ಕಾಂಗ್ರೆಸ್ ಮಣಿಸುವ ಸಂಬಂಧ ಕಾರ್ಯತಂತ್ರ ರೂಪಿಸಲಾಗುತ್ತದೆ. ಅಲ್ಲದೇ, ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಹಿರಂಗ ವಿಚಾರದ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ. 
 

BJP JDS Alliance Coordination Meeting will be Held on May 26th For Council Elections 2024 grg
Author
First Published May 26, 2024, 8:02 AM IST

ಬೆಂಗಳೂರು(ಮೇ.26):  ವಿಧಾನಪರಿಷತ್‌ ಚುನಾವಣೆಗೆ ಸಂಬಂಧಿಸಿ ಬೆಂಗಳೂರು ಪದವೀಧರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಅ.ದೇವೇಗೌಡ ಪರ ಪ್ರಚಾರ ಕೈಗೊಳ್ಳಲು ಜೆಡಿಎಸ್ -ಬಿಜೆಪಿ ಮೈತ್ರಿ ಪಕ್ಷಗಳ ಸಮನ್ವಯ ಸಭೆ ಭಾನುವಾರ ನಡೆಯಲಿದೆ. 

ಇದೇ ವೇಳೆ ಇತರೆ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಬಗ್ಗೆಯೂ ಚರ್ಚಿಸುವ ಸಾಧ್ಯತೆ ಇದೆ. ಜೆಡಿಎಸ್ ಕಚೇರಿ ಜೆ.ಪಿ. ಭವನದಲ್ಲಿ ಭಾನುವಾರ ಬೆಳಗ್ಗೆ 11ಕ್ಕೆ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ವಿಧಾನಸಭೆ ಪ್ರತಿ ಪಕ್ಷ ನಾಯಕ ಆ‌ರ್.ಅಶೋಕ್ ನೇತೃತ್ವದಲ್ಲಿ ಸಭೆ ನಡೆಯಲಿದೆ. 

ದಿಲ್ಲೀಲೇ ಎಂಎಲ್ಸಿ ಅಭ್ಯರ್ಥಿಗಳ ಆಯ್ಕೆ ಮುಗಿಸಲು ಕಾಂಗ್ರೆಸ್‌ ತಂತ್ರ

ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೇರಿದಂತೆ ಇತರೆ ನಾಯಕರು ಭಾಗವಹಿಸಲಿದ್ದಾರೆ. ಬೆಂಗಳೂರು ಪದವೀಧರ ಕ್ಷೇತ್ರದ ಅಭ್ಯರ್ಥಿ ಅ. ದೇವೇಗೌಡ ಅವರು ಜೆಡಿಎಸ್ -ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿದ್ದಾರೆ. ಅವರ ಗೆಲುವಿಗೆ ಅಗತ್ಯ ರಾಜತಾಂತ್ರಿಕ ಕುರಿತು ಸಮಾಲೋಚನೆ ನಡೆಸಲಾಗುವುದು. 

ಬೆಂಗಳೂರು ಪದವೀಧರ ಕ್ಷೇತ್ರದ ಅಭ್ಯರ್ಥಿಯ ಪರವಾಗಿ ಪ್ರಮುಖ ಸಭೆ ಇದಾಗಿದೆ. ಅ.ದೇವೇಗೌಡ ಗೆಲುವಿಗೆ ಉಭಯ ಪಕ್ಷಗಳ ನಾಯಕರು ಹಾಗೂ ಕಾರ್ಯಕರ್ತರು ಪ್ರಚಾರದಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ಸಮಾಲೋಚನೆ ನಡೆಸಲಾಗುವುದು ಎಂದು ಹೇಳಲಾಗಿದೆ. 

ಇದೇ ವೇಳೆ ಇತರೆ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಉಭಯ ನಾಯಕರ ಪ್ರವಾಸ, ಪ್ರಚಾರ ಕಾರ್ಯಗಳ ಕುರಿತು ಚರ್ಚಿಸಿ ರಣತಂತ್ರ ರೂಪಿಸಲಾಗುತ್ತದೆ. ಆಡಳಿತಾರೂಢ ಕಾಂಗ್ರೆಸ್ ಮಣಿಸುವ ಸಂಬಂಧ ಕಾರ್ಯತಂತ್ರ ರೂಪಿಸಲಾಗುತ್ತದೆ. ಅಲ್ಲದೇ, ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಹಿರಂಗ ವಿಚಾರದ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಪ್ರಕರಣದಿಂದ ಪಕ್ಷಗಳ ಮೇಲಿನ ಪರಿಣಾಮಗಳ ಕುರಿತು ಸಮಾಲೋಚನೆ ನಡೆಸಲಾಗುತ್ತದೆ ಎನ್ನಲಾಗಿದೆ.

Latest Videos
Follow Us:
Download App:
  • android
  • ios