ಕರ್ನಾಟಕಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಿದ್ದು, ರಮೇಶ್ ಜಾರಕಿಹೊಳಿ ಹಾಗೂ ಯತ್ನಾಳ್ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ್ದು ಹೀಗೆ...

ಬೆಂಗಳೂರು, (ಮಾ. 19): ಎರಡು ವಿಧಾನಸಭಾ ಹಾಗೂ ಒಂದು ಲೋಕಸಭಾ ಚುನಾವಣೆ ಎದುರಾಗಿದ್ದರಿಂದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಕರ್ನಾಟಕಕ್ಕೆ ಆಗಮಿಸಿದ್ದಾರೆ.

ಕುಮಾರ ಕೃಪಾ ಅತಿಥಿ ಗೃಹದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದ 6 ಸಚಿವರು ತೇಜೋವಧೆಯ‌ ಷಡ್ಯಂತ್ರದಿಂದ ಪಾರಾಗಲು ಕೋರ್ಟ್​​ಗೆ ಹೋಗಿದ್ದರಲ್ಲಿ ತಪ್ಪೇನಿಲ್ಲ ಎಂದು ಅರುಣ್ ಸಿಂಗ್ ಸಮರ್ಥಿಸಿಕೊಂಡರು. 

CD ಕೇಸ್: ರಮೇಶ್ ಜಾರಕಿಹೊಳಿಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಬಿಜೆಪಿ

 ಕೋರ್ಟ್‌ನಿಂದ ಸಚಿವರು ತಡೆಯಾಜ್ಞೆ ತಂದರೆ ಕಾಂಗ್ರೆಸ್​ಗೆ ಏನು ಸಮಸ್ಯೆ ಎಂಬುದು ಅರ್ಥವಾಗದು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ವ್ಯವಸ್ಥಿತ ಪಿತೂರಿಯಿದೆ. ಆದರೂ ಅರೋಪ ಕೇಳಿ ಬಂದ 24 ತಾಸಿನಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇಂತಹ ನೈತಿಕ ಹೊಣೆಗಾರಿಕೆ ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಕಾಂಗ್ರೆಸ್ ನಲ್ಲಿ ಇಂತಹದ್ದು ಕಾಣಸಿಗದು ಎಂದರು.

ಯತ್ನಾಳ್ ಬಗ್ಗೆ ಪ್ರತಿಕ್ರಿಯಿಸಿದ ಅರುಣ್ ಸಿಂಗ್, ಶಾಸಕ ಬಸನಗೌಡ ಪಾಟೀಲ್ ಹೇಳಿಕೆಗಳನ್ನು ನಾವಂತೂ ಗಂಭೀರವಾಗಿ ಪರಿಗಣಿಸಿಲ್ಲ. ಪಕ್ಷದ ಕಾರ್ಯಕರ್ತರಿಗೂ ಇದು ಡೋಂಟ್ ಕೇರ್. ನೀವು (ಮಾಧ್ಯಮದವರು) ಆದ್ಯತೆ ಕೊಡಬೇಡಿ ಎಂದು ಹೇಳಿದರು.

ಯತ್ನಾಳ್ ವಿರುದ್ಧ ಶಿಸ್ತು ಕ್ತಮದ ಕುರಿತು ನಿರ್ದಿಷ್ಟವಾಗಿ ಯಾವುದೇ ಉತ್ತರ ನೀಡದ ಸಿಂಗ್, ಬಹಿರಂಗ ಹೇಳಿಕೆ ಕೊಡುವುದನ್ನು ನಿಲ್ಲಿಸಲಿ ಎಂದು ಸೂಚಿಸಿದರು.