ಕಾಂಗ್ರೆಸ್‌ ಏಕೆ ಮೀಸಲು ಹೆಚ್ಚಿಸಲಿಲ್ಲ: ಅರುಣ್‌ ಸಿಂಗ್‌ ಪ್ರಶ್ನೆ

ಕಾಂಗ್ರೆಸ್‌ ಪಕ್ಷ ಬಡವರು, ಶೋಷಿತರ ಕಲ್ಯಾಣಕ್ಕಾಗಿ ಏನನ್ನೂ ಮಾಡಿಲ್ಲ ಎಂದು ಕರ್ನಾಟಕದ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಟೀಕಿಸಿದ್ದಾರೆ. ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

BJP Karnataka Incharge Arun Singh Outraged Against Congress Over Reservation gvd

ಬೆಂಗಳೂರು (ಮಾ.27): ಕಾಂಗ್ರೆಸ್‌ ಪಕ್ಷ ಬಡವರು, ಶೋಷಿತರ ಕಲ್ಯಾಣಕ್ಕಾಗಿ ಏನನ್ನೂ ಮಾಡಿಲ್ಲ ಎಂದು ಕರ್ನಾಟಕದ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಟೀಕಿಸಿದ್ದಾರೆ. ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳು ಸೇರಿದಂತೆ ವಿವಿಧ ಸಮುದಾಯಕ್ಕೆ ನ್ಯಾಯ ಕೊಡುವ ಮಾತನಾಡುವ ಬಿಜೆಪಿ ಈಗ ಅದನ್ನೇ ಅನುಷ್ಠಾನಕ್ಕೆ ತಂದಿದೆ. 

ಹಲವು ದಶಕಗಳ ಬೇಡಿಕೆಯನ್ನು ಈಡೇರಿಸಿದೆ. ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳ ಮೀಸಲಾತಿಯನ್ನು ಹೆಚ್ಚಿಸಿದೆ. ಕಾಂಗ್ರೆಸ್‌ ತನ್ನ ಅಧಿಕಾರದ ಅವಧಿಯಲ್ಲಿ ಈ ಕೆಲಸ ಮಾಡಲಿಲ್ಲ ಏಕೆ ಎಂದು ಪ್ರಶ್ನಿಸಿದರು. ಕರ್ನಾಟಕದ ಜನತೆ ಕಾಂಗ್ರೆಸ್‌ ಪಕ್ಷವನ್ನೂ ಕ್ಷಮಿಸುವುದಿಲ್ಲ. ಕಾಂಗ್ರೆಸ್‌ ಪಕ್ಷದವರಿಗೆ ಚುನಾವಣೆಗೆ ಸಂಬಂಧಿಸಿ ಯಾವುದೇ ವಿಚಾರಗಳಿಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಕಾಂಗ್ರೆಸ್‌ ಪಕ್ಷವು ಕರ್ನಾಟಕದ ಜನತೆಗೆ ಏನು ಕೊಟ್ಟಿದೆ? ಅವರು ಏನೂ ಮಾಡಲೇ ಇಲ್ಲ. 

ಕಳ್ಳರನ್ನು ಕಳ್ಳರು ಎನ್ನುವುದಕ್ಕೂ ವಾಕ್‌ ಸ್ವಾತಂತ್ರ್ಯ ಇಲ್ಲವೇ: ಸಿದ್ದರಾಮಯ್ಯ ಕಿಡಿ

ಅದಕ್ಕಾಗಿಯೇ ಅವರು ಮೌನವಾಗಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದ್ದಾಗ ಕೇವಲ ತುಷ್ಟೀಕರಣ ನಡೆಯುತ್ತಿತ್ತು. ಭ್ರಷ್ಟಾಚಾರ ಗರಿಷ್ಠ ಪ್ರಮಾಣದಲ್ಲಿತ್ತು ಎಂದು ಆರೋಪಿಸಿದ ಅವರು, ಸಿದ್ದರಾಮಯ್ಯ ತಮ್ಮ ಸಾಧನೆಗಳನ್ನು ಜನರ ಮುಂದಿಡಬೇಕು. ಆಗ ನಾವು ಕೂಡ ನಮ್ಮ ಸಾಧನೆಗಳನ್ನು ಜನರ ಮುಂದಿಡಲು ಸಿದ್ಧರಿದ್ದೇವೆ ಎಂದು ಕಾಂಗ್ರೆಸ್‌ಗೆ ಸವಾಲು ಹಾಕಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಮಾಜಿ ಸಚಿವ ಕಟ್ಟಾಸುಬ್ರಹ್ಮಣ್ಯ ನಾಯ್ಡು ಹಾಗೂ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಬಿ.ನಾರಾಯಣ ಮತ್ತಿತರರು ಉಪಸ್ಥಿತರಿದ್ದರು.

ರಾಹುಲ್‌ ಗಾಂಧಿಯನ್ನು ದೇಶದ ಜನ ಕ್ಷಮಿಸಲ್ಲ: ಭಾರತದಲ್ಲಿ ಸಂವಿಧಾನ ಆತಂಕದಲ್ಲಿದೆ, ಪ್ರಜಾಪ್ರಭುತ್ವವನ್ನು ಉಳಿಸುವಂತೆ ಅಮೇರಿಕಾ, ಯೂರೋಪ್‌ನಲ್ಲಿ ಕೇಳುತ್ತಿರುವ ಎಐಸಿಸಿ ಮುಖಂಡ ರಾಹುಲ್‌ ಗಾಂಧಿಯನ್ನು ದೇಶದ ಜನತೆ ಎಂದಿಗೂ ಸಹಿಸುವುದೂ ಇಲ್ಲ, ಕ್ಷಮಿಸುವುದೂ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ವಾಗ್ದಾಳಿ ನಡೆಸಿದರು. ನಗರದ ಜಿಎಂಐಟಿ ಸಮೀಪ ಮಾ.25ರಂದು ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವ ಐತಿಹಾಸಿಕ ಸಮಾವೇಶ, ರೋಡ್‌ ಶೋ ಸಿದ್ಧತೆ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ವಿದೇಶಗಳ ಬಾಗಿಲಿಗೆ ಹೋಗಿ ಭಾರತದಲ್ಲಿ ಸಂವಿಧಾನ ಅಪಾಯದಲ್ಲಿದೆ.

ಪ್ರಜಾಪ್ರಭುತ್ವವನ್ನು ಉಳಿಸಿ ಎಂಬುದಾಗಿ ಬೇಡುತ್ತಿರುವ ರಾಹುಲ್‌ ಗಾಂಧಿಯನ್ನು ಜನತೆ ಕ್ಷಮಿಸುವುದಿಲ್ಲ. ಅವರಿಗೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದರು. ಭಾರತ್‌ ಜೋಡೋ ಯಾತ್ರೆ ಮಾಡಿದ ರಾಹುಲ್‌ ಗಾಂಧಿ ನಂತರ ವಿದೇಶಗಳಿಗೆ ಹೋಗಿ ಭಾರತದ ಮಾನ ಕಳೆಯುವ ಕೆಲಸ ಮಾಡುತ್ತಿದ್ದಾರೆ. ರಾಹುಲ್‌ ಗಾಂಧಿ ವಿದೇಶಗಳಲ್ಲಿ ಭಾರತಕ್ಕೆ ಅಪಮಾನ ಮಾಡುತ್ತಿದ್ದಾರೆ. ಅಮೇರಿಕಾ, ಯುರೋಪ್‌ ದೇಶಗಳಲ್ಲಿ ಭಾರತದ ಬಗ್ಗೆ ಆಡುತ್ತಿರುವ ಮಾತುಗಳನ್ನು ಜನತೆ ಗಮನಿಸುತ್ತಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್‌ ನಾಯಕರಿಗೆ ಕರ್ನಾಟಕವೇ ಎಟಿಎಂ: ಕೇಂದ್ರ ಗೃಹ ಸಚಿವ ಅಮಿತ್‌ ಶಾ

ದೇಶಕ್ಕೆ ಅಪಮಾನ ಮಾಡುತ್ತಿರುವ ರಾಹುಲ್‌ ಗಾಂಧಿ ಹಾಗೂ ಇತರರಿಂದಾಗಿಯೇ ಕಾಂಗ್ರೆಸ್‌ ದೇಶಾದ್ಯಂತ ಕುಸಿಯುತ್ತಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲೂ ಕಾಂಗ್ರೆಸ್ಸನ್ನು ಜನತೆ ತಿರಸ್ಕರಿಸಲಿದ್ದಾರೆ. ಬರಲಿರುವ ಚುನಾವಣೆಯಲ್ಲಿ ರಾಜ್ಯದ ಜನತೆ ಕಾಂಗ್ರೆಸ್ಸಿಗೆ ತಕ್ಕ ಉತ್ತರ ನೀಡಲಿದ್ದಾರೆ. ಎಲ್ಲೆಡೆ ಬಿಜೆಪಿ ಪರ ಅಲೆ ವ್ಯಕ್ತವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿಗೆ ಜನ ಆಶೀರ್ವದಿಸಲಿದ್ದಾರೆ ಎಂದು ಅವರು ಹೇಳಿದರು.

Latest Videos
Follow Us:
Download App:
  • android
  • ios