* ರಾಜ್ಯ ರಾಜಕೀಯದಲ್ಲಿ ಮತ್ತೊಂದು ದಿಢೀರ್ ಬೆಳವಣಿಗೆ* ಸಿಎಂ ರಾಜೀನಾಮೆ ಬೆನ್ನಲ್ಲೇ ಬಿಜೆಪಿ ಬಿರುಸುಗೊಂಡ ರಾಜಕೀಯ ಚಟುವಟಿಕೆಗಳು* ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾರೆ ಬಿಎಲ್ ಸಂತೋಷ್

ಬೆಂಗಳೂರು, (ಜು.26): ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆಯೇ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ.

ಮುಂದಿನ ಮುಖ್ಯಮಂತ್ರಿ ಯಾರನ್ನ ಮಾಡಬೇಕೆಂಬ ಲೆಕ್ಕಾಚಾರದಲ್ಲಿ ಬಿಜೆಪಿ ಹೈಕಮಾಂಡ್ ಇದ್ದು, ಇದಕ್ಕಾಗಿ ಧರ್ಮೇಂದ್ರ ಪ್ರಧಾನ್, ಕರ್ನಾಟಕ ಸಿಎಂ ಆಯ್ಕೆಯ ವೀಕ್ಷಕರಾಗಿ ನೇಮಕ ಮಾಡಲಾಗಿದೆ.

ಆದ್ರೆ, ವೀಕ್ಷಕರ ವೀಕ್ಷಕರ ತಂಡ ರಾಜ್ಯಕ್ಕೆ ಆಗಮಿಸುವ ಮೊದಲೇ ಬಿಎಲ್ ಸಂತೋಷ್ ಇಂದು (ಸೋಮವಾರ) ರಾತ್ರಿ ಬೆಂಗಳೂರಿಗೆ ಆಗಮಿಸುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ. ನಾಳೆ (ಮಂಗಳವಾರ) ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದಾರೆ ಎನ್ನಲಾಗಿದೆ.

ಸಿಎಂ ಸ್ಥಾನಕ್ಕೆ ಬಿ. ಎಲ್. ಸಂತೋಷ್ ಹೆಸರು, ನಾಲ್ವರಿಗೆ ಡಿಸಿಎಂ ಸ್ಥಾನ?

ಈಗಾಗಲೇ ಮುಂದಿನ ಸಿಎಂ ರೇಸ್‌ನಲ್ಲಿ ಪ್ರಲ್ಹಾದ್ ಜೋಶಿ, ಮುರುಗೇಶ್ ನಿರಾಣಿ, ಅರವಿಂದ್ ಬೆಲ್ಲದ್ ಸೇರಿದಂತೆ ಇನ್ನು ಕೆಲ ಹೆಸರುಗಳು ಕೇಳಿಬರುತ್ತಿವೆ. ಇವುಗಳ ನಡುವೆ ಬಿಲ್ ಸಂತೋಷ್ ಅವರ ಹೆಸರು ಸಹ ಚರ್ಚೆಯಲ್ಲಿದೆ. ಇದರ ನಡುವೆ ಇದೀಗ ಬಿಎಲ್ ಸಂತೋಷ್ ಅವರು ಬೆಂಗಳೂರಿಗೆ ಆಗಮಿಸುತ್ತಿರುವುದು ಸಂಚಲನ ಮೂಡಿಸಿದೆ.

ಬಿಲ್‌ ಸಂತೋಷ್ ತಾವೇ ಮುಖ್ಯಮಂತ್ರಿ ಆಗುತ್ತಾರಾ? ಅಥವಾ ಮುಂದಿನ ಸಿಎಂ ಅಭ್ಯರ್ಥಿಯನ್ನು ಆಯ್ಕೆ ಮಾಡ್ತಾರಾ...? ಎನ್ನುವುದು ಕುತೂಹಲ ಕೆರಳಿಸಿದ್ದು, ರಾಜ್ಯ ಬಿಜೆಪಿಯಲ್ಲಿ ಏನೆಲ್ಲಾ ಬೆಳವಣಿಗೆಗಳು ಆಗುತ್ತವೆ ಎನ್ನುವುದನ್ನು ಕಾದುನೋಡಬೇಕಿದೆ.