ಬಿಜೆಪಿ ಮುಖಂಡ ಸಿಪಿ ಯೋಗೀಶ್ವರ್ ಹಠಾತ್ ದೆಹಲಿಗೆ ತೆರಳಿದ್ದಾರೆ. ಬಿಜೆಪಿ ಮುಖಂಡರನ್ನು ಭೇಟಿಯಾಗಿ ವಿವಿಧ ಚರ್ಚೆ ನಡೆಸಲಿದ್ದಾರೆ.

ನವದೆಹಲಿ (ಆ.17): ವಿಧಾನ ಪರಿಷತ್‌ ಸದಸ್ಯರಾಗಿರುವ ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್‌ ಅವರು ಭಾನುವಾರ ನವದೆಹಲಿಗೆ ಆಗಮಿಸಿದ್ದಾರೆ. 

ಹೊಸದಾಗಿ ಎಂಎಲ್‌ಸಿಯಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಅವರು ಸೋಮವಾರದಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಮತ್ತು ಇತರ ಹಿರಿಯ ಮುಖಂಡರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಂಗ್ಳೂರು ಗಲಭೆ: ಕಾಂಗ್ರೆಸ್ ಶಾಸಕ ಅಖಂಡ ಮನೆಗೆ ಬಿಜೆಪಿ ನಿಯೋಗ....!

ಇತ್ತೀಚೆಗೆ ರಾಜಕೀಯ ಬೆಳವಣಿಗೆಗಳು ಹೆಚ್ಚಾಗುತ್ತಿದ್ದು, ಇದರ ನಡುವೆ ಯಾವ ವಿಚಾರದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನುವುದು ಭೇಟಿ ನಂತರ ಬಹಿರಂಗವಾಗಲಿದೆ.