ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಅವರ ನೂತನ ಕಚೇರಿ ಪೂಜೆ ನೆರವೇರಿದೆ. ಸಿಟಿ ರವಿ ಭಾವುಕ ಫೇಸ್ ಬುಕ್ ಪೋಸ್ಟ್ ನೋಡಿ...
ಬೆಂಗಳೂರು, (ನ.27) : ಪಕ್ಷ ಸಂಘಟನೆ ದೃಷ್ಟಿಯಿಂದ ಸಿ.ಟಿ.ರವಿ ಅವರಿಗೆ ಹೈಕಮಾಂಡ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಿದೆ.
ಈ ಹಿನ್ನೆಲೆಯಲ್ಲಿ ಶುಕ್ರವಾರ ದೆಹಲಿಯಲ್ಲಿ ಸಿ. ಟಿ. ರವಿ ಅವರ ನೂತನ ಕಚೇರಿಯ ಪೂಜೆ ನೆರವೇರಿತು. ಈ ಪೂಜಾ ಕಾರ್ಯಕ್ರಮದಲ್ಲಿ ಕರ್ನಾಟಕದ ಹಲವು ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಿ. ಟಿ. ರವಿ ಅವರಿಗೆ ಅಭಿನಂದನೆಗಳನ್ನ ತಿಳಿಸಿದರು.
ದಿಲ್ಲಿಯಲ್ಲಿ ಕರ್ನಾಟಕ ರಾಜಕೀಯ ಜೋರು: ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ
ಇನ್ನು ಸಿಟಿ ರವಿ ಅವರು ಕಾರ್ಯಕ್ರಮ ಮುಗಿದ ಫೋಟೋಗಳನ್ನ ಹಂಚಿಕೊಂಡು ಭಾವನಾತ್ಮಕ ಮಾತುಗಳನ್ನಾಡಿದ್ದಾರೆ.
'ಸಾಮಾನ್ಯ ರೈತ ಕುಟುಂಬದ ಮಗನೊಬ್ಬ ಇವತ್ತು ದೇಶದ ರಾಜಧಾನಿ ನವದೆಹಲಿಯಲ್ಲಿರುವ ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನಿಂತಿದ್ದಾನೆ' ಎಂದು ನೆನಪು ಮಾಡಿಕೊಂಡಿದ್ದಾರೆ.
'ಇವತ್ತು ದೆಹಲಿಯಲ್ಲಿ ಹೊಸ ರಾಜಕೀಯ ಯಾನವೊಂದು ಆರಂಭವಾಗುತ್ತಿರುವ ಸಮಯದಲ್ಲಿ ಹಳೆಯ ನೆನಪಿನ ಹಾಯಿದೋಣಿಗಳು ನನ್ನ ಭಾವ ಕಡಲಿನಲಿ ತೇಲಿ ಹೋಗುತ್ತಿವೆ. ಹೃದಯ ತುಂಬಿ ಬಂದಿದೆ. ನಿಮಗೆ ನಾನು ಸದಾ ಆಭಾರಿ. ನಿಮ್ಮ ಪ್ರೀತಿಯ ಋಣ ನನ್ನ ಮೇಲಿದೆ. ಜೀವವಿರುವ ತನಕ ನಿಮ್ಮೆಲ್ಲರ ಮನೆ ಮಗನಂತೆ ಸೇವೆ ಮಾಡುವ ಭಾಗ್ಯ ನನ್ನದಾಗಿರಲಿ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.
ಬಂಧುಗಳೇ ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಾಗರವಳ್ಳಿಯ ಸಾಮಾನ್ಯ ರೈತ ಕುಟುಂಬದ ಮಗನೊಬ್ಬ ಇವತ್ತು ದೇಶದ ರಾಜಧಾನಿ ನವದೆಹಲಿಯಲ್ಲಿರುವ ಬಿಜೆಪಿಯ...
Posted by C T Ravi on Friday, November 27, 2020
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Nov 27, 2020, 6:16 PM IST