ಕೊಡಗಿನಲ್ಲಿ ಸಿದ್ದರಾಮಯ್ಯಗೆ ಕಪ್ಪು ಬಾವುಟದ ಸ್ವಾಗತ, ಸಿದ್ದುಗೆ ಸಾವರ್ಕರ್ ಭಾವಚಿತ್ರ ನೀಡಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು       

ಕೊಡಗು(ಆ.18): ಒಂದು ದಿನದ ಕೊಡಗು ಜಿಲ್ಲಾ ಪ್ರವಾಸಕ್ಕಾಗಿ ಕೊಡಗಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಕೊಡಗಿನ ಗಡಿ ಭಾಗದ ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಸ್ವಾಗತ ಕೋರಿದ್ದಾರೆ. 

Add Asianetnews Kannada as a Preferred SourcegooglePreferred

ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ನೇತೃತ್ವದಲ್ಲಿ ನೂರಾರು ಸಂಖ್ಯೆಯಲ್ಲಿದ್ದ ಯುವ ಮೋರ್ಚಾ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರವನ್ನು ಕಾರಿನಲ್ಲಿ ಕುಳಿತಿದ್ದ ಸಿದ್ದರಾಮಯ್ಯ ಮಡಿಲಲ್ಲಿಟ್ಟರಲ್ಲದೇ ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಸಿದ್ದರಾಮಯ್ಯ ಅಂತ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಎಂಬ ಕೆಟ್ಟಪದ ಕೇಳಿ ಸಾಕಾಗಿ ಹೋಗಿದೆ: ಈಶ್ವರಪ್ಪ

ರಾಜ್ಯದಲ್ಲಿ ಮತಾಂಧ ಟಿಪ್ಪುವಿನ ಜಯಂತಿ ಆಚರಣೆ ಜಾರಿಗೆ ತಂದು ಅಮಾಯಕರ ಕೊಲೆಗೆ ಕಾರಣರಾದ ಟಿಪ್ಪು ಭಕ್ತ ಸಿದ್ದರಾಮಯ್ಯ ಕೊಡಗಿಗೆ ಕಾಲಿಡುವುದರಿಂದ ಮತ್ತೆ ಕೊಡಗಿನ ಶಾಂತಿ ಭಂಗವಾಗಲಿದ್ದು ಜೊತೆಗೆ ಕೊಡವರನ್ನು ಗೋಮಾಂಸ ಭಕ್ಷಕರೆಂದು ಬಿಂಬಿಸಿರುವ ಹಿಂದೂ ವಿರೋಧಿ ಸಿದ್ದರಾಮಯ್ಯ ಕೊಡಗಿಗೆ ಕಾಲಿಡಲು ಅಯೋಗ್ಯರಾಗಿದ್ದಾರೆಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ತೀವ್ರ ಆಕ್ರೋಶ ವ್ಯಕ್ತ ಪಡಿಸಿದರು. ಈ ಸಂದರ್ಭ ಪೋಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆಗೊಳಿಸಿ ಸಿದ್ದರಾಮಯ್ಯರ ವಾಹನ ಮುಂದೆ ಚಲಿಸಲು ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.