ಸಚಿವ ಸಂಪುಟ ವಿಸ್ತರಣೆ ಆದ ದಿನವೇ ಮೈತ್ರಿ ಸರ್ಕಾರ ಪತನವಾಗಲಿದೆ.ಎಂದು ಬಿಜೆಪಿ ನಾಯಕ, ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ಹುಬ್ಬಳ್ಳಿ, [ನ.30]: ಸಚಿವ ಸಂಪುಟ ವಿಸ್ತರಣೆ ಆದ ದಿನವೇ ಮೈತ್ರಿ ಸರ್ಕಾರ ಪತನವಾಗಲಿದೆ. ಅವರ ಪಕ್ಷದ ‌ಶಾಸಕರುಗಳು‌ ಸಚಿವ ಸಂಪುಟ ವಿಸ್ತರಣೆಗೆ ಕಾಯುತ್ತಿದ್ದಾರೆ ಎಂದು ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು [ಶುಕ್ರವಾರ] ಮಾತನಾಡಿರುವ ಅವರು, ಸಂಪುಟ ವಿಸ್ತರಣೆಯಾಗುತ್ತಿದಂತೆ ಅವರಲ್ಲಿ ಸರ್ಕಾರ ಬೀಳಿಸೋಕೆ ಬಹಳ ಜನ ಕಾಯುತ್ತಿದ್ದಾರೆ. ಬಿಜೆಪಿ ಯಾವುದೇ ಆಪರೇಷನ್ ಕಮಲ ಮಾಡುವುದಿಲ್ಲ.

ರಾಜ್ಯ ಕಾಂಗ್ರೆಸ್‌ ಅತೃಪ್ತಿ ಸ್ಫೋಟ?: ಮುಂಬೈಗೆ ಹೊರಟ 10 ಶಾಸಕರು!

 ರಾಜ್ಯದಲ್ಲಿ ಸರ್ಕಾರ ಇದೆಯಾ? ಅನ್ನೊ ಅನುಮಾನ ಇದೆ. ಆದ್ರೆ ಮಂತ್ರಿ ಸ್ಥಾನಕ್ಕೆ ಆಸೆಪಟ್ಟು ಕಾಂಗ್ರೆಸ್ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.

ಜೆಡಿಎಸ್‌ನವರು ಸಿದ್ದರಾಮಯ್ಯನನ್ನು ಹೀನಾಯವಾಗಿ ಸೋಲಿಸಿದ್ದಾರೆ. ಚಾಮುಂಡೇಶ್ವರಿಯಲ್ಲಿ ಸೋತ ಸಿದ್ದರಾಮಯ್ಯ ಯಾವ ಮುಖ ಇಟ್ಟುಕೊಂಡು ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಕಾಂಗ್ರೆಸ್‌ಗೆ ಇಂತಹ ದು:ಸ್ಥಿತಿ ಎಂದೂ ಬಂದಿರಲಿಲ್ಲ. ಇದು ಸರ್ಕಾರನೇನ್ರೀ, ಯಾವ ಭಾಷೆಯಲ್ಲಿ ಹೇಳಬೇಕೋ ಅರ್ಥವಾಗುತ್ತಿಲ್ಲ. ಇದು ದೇವೇಗೌಡ- ರೇವಣ್ಣ ಸರ್ಕಾರ! ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂದು ಕೆ. ಎಸ್ ಈಶ್ವರಪ್ಪ ಲೇವಡಿ ಮಾಡಿದರು.