ದೇಶಕ್ಕೆ ಪ್ರಧಾನಿ ಮೋದಿ ಅನಿವಾರ್ಯ: ನಂಜೇಗೌಡ
ಸಾಮಾನ್ಯ ಜನರಿಂದ ಪ್ರಶೆಂಸೆ ಪಡೆದುಕೊಳ್ಳುವುದು ಅಷ್ಟು ಸುಲಭದ ಮಾತಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಮನೆ ಮನೆ ಮಾತಾಗಿದ್ದಾರೆ. ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಬೇಕು ಎಂದ ಬಿಜೆಪಿ ರಾಜ್ಯ ರೈತ ಮೋರ್ಚ ಉಪಾಧ್ಯಕ್ಷ ಕೆ.ಎಸ್. ನಂಜುಂಡೇಗೌಡ
ಶ್ರೀರಂಗಪಟ್ಟಣ(ಮಾ.15): ಸಮಾಜದಲ್ಲಿ ನೆಮ್ಮದಿಯಿಂದ ಬದುಕುವ ಜೊತೆಗೆ ದೇಶ ಅಭಿವೃದ್ಧಿಯಾಗಬೇಕಾದರೆ ಪ್ರಧಾನಿ ನರೇಂದ್ರ ಮೋದಿಯವರು ಅನಿವಾರ್ಯ ಎಂಬುದು ಜನಸಾಮಾನ್ಯರಲ್ಲಿದೆ ಎಂದು ಮುಖಂಡ, ಬಿಜೆಪಿ ರಾಜ್ಯ ರೈತ ಮೋರ್ಚ ಉಪಾಧ್ಯಕ್ಷ ಕೆ.ಎಸ್. ನಂಜುಂಡೇಗೌಡ ಹೇಳಿದರು.
ಪಟ್ಟಣದ ಬ್ರಾಹ್ಮಣ ಮಹಾಸಭಾದಲ್ಲಿ ನಡೆದ ಫಲಾನುಭವಿಗಳ ಸಂಪರ್ಕ ಅಭಿಯಾನ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಸಾಮಾನ್ಯ ಜನರಿಂದ ಪ್ರಶೆಂಸೆ ಪಡೆದುಕೊಳ್ಳುವುದು ಅಷ್ಟು ಸುಲಭದ ಮಾತಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಮನೆ ಮನೆ ಮಾತಾಗಿದ್ದಾರೆ. ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಬೇಕು ಎಂದರು.
ಕುಮಾರಣ್ಣಗೆ 21ಕ್ಕೆ ಸರ್ಜರಿ ನಿಗದಿಯಾಗಿದೆ. ಸರ್ಜರಿ ಬಳಿಕ ಹೆಚ್ಚು ಓಡಾಡೋಕೆ ಆಗೊಲ್ಲ: ನಿಖಿಲ್
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಸಿದ್ದರಾಮಯ್ಯ ಮಾತನಾಡಿ, ಬಿಜೆಪಿ ಪಕ್ಷದಲ್ಲಿ ರಾಷ್ಟ್ರಾದ್ಯಂತ 25 ಕೋಟಿ ಪದಾಧಿಕಾರಿಗಳು ಹಾಗೂ 2 ಕೋಟಿ ಕಾರ್ಯಕರ್ತರು ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ಪ್ರತಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ನಡೆಯುತ್ತಿದೆ ಎಂಬುದು ತಿಳಿಯುತ್ತಿದೆ ಎಂದು ಹೇಳಿದರು.
ಕಿಸಾನ್ ಸಮ್ಮಾನ್, ಫಸಲ್ ಭೀಮಾ, ಮಾತೃವಂದನಾ, ಸಂಧ್ಯಾಸುರಕ್ಷಾ, ಸುಕನ್ಯಾ ಯೋಜನೆ ಸೇರಿ ಹಲವು ಯೋಜನೆಗಳಿಂದ ರಾಜ್ಯದಲ್ಲಿ ಸುಮಾರು 34 ಲಕ್ಷ ಫಲಾನುಭವಿಗಳಿದ್ದಾರೆ ಎಂದು ತಿಳಿಸಿದರು.
ತಾಲೂಕು ಅಧ್ಯಕ್ಷ ಪಿಹಳ್ಳಿ ರಮೇಶ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಮನೆ ಮನೆಗೆ ತಲುಪಿಸಲು ಕಾರ್ಯಾಗಾರ ನಡೆಸಲಾಗುತ್ತಿದೆ. ಪ್ರತಿಯೊಬ್ಬ ಕಟ್ಟ ಕಡೆಯ ಕಾರ್ಯಕರ್ತನೂ ಸಹ ಬೂತ್ ಮಟ್ಟದಿಂದ ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಮನವಿ ಮಾಡಿದರು.
ಈ ವೇಳೆ ಜಿಲ್ಲಾ ಸಂಚಾಲಕ ಮದ್ದೂರು ಸತೀಶ್, ಮಂಡಲ ಸಂಚಾಲಕ ಕಿರಣ್ ಕುಮಾರ್ ಸಿಂಗ್, ಪುರಸಭಾ ಸದಸ್ಯೆ ಪೂರ್ಣಿಮ ಸೇರಿ ನೂರಾರು ಫಲಾನುಭವಿಗಳು ಇದ್ದರು.