ಬಸವಕಲ್ಯಾಣ ಕ್ಷೇತ್ರದ ಮಾಜಿ ಶಾಸಕರಾಗಿರುವ ಮಲ್ಲಿಕಾರ್ಜುನ ಖೂಬಾ ಅವರು 2018ರ ವಿಧಾನಸಭಾ ಚುನಾವಣೆ ವೇಳೆ ಜೆಡಿಎಸ್‌ ತೊರೆದು ಬಿಜೆಪಿಗೆ ಹೋಗಿದ್ದರು. 

ಬೆಂಗಳೂರು(ಫೆ.08): ಜೆಡಿಎಸ್‌ ತೊರೆದು ಬಿಜೆಪಿಗೆ ಹೋಗಿದ್ದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಮತ್ತೆ ಜೆಡಿಎಸ್‌ಗೆ ಮರಳಲು ತೀರ್ಮಾನಿಸಿದ್ದು, ಈ ಸಂಬಂಧ ಬಿಡದಿಯ ತೋಟದ ಮನೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಜತೆ ಸಮಾಲೋಚನೆ ನಡೆಸಿದ್ದಾರೆ.

ಬಸವಕಲ್ಯಾಣ ಕ್ಷೇತ್ರದ ಮಾಜಿ ಶಾಸಕರಾಗಿರುವ ಮಲ್ಲಿಕಾರ್ಜುನ ಖೂಬಾ ಅವರು 2018ರ ವಿಧಾನಸಭಾ ಚುನಾವಣೆ ವೇಳೆ ಜೆಡಿಎಸ್‌ ತೊರೆದು ಬಿಜೆಪಿಗೆ ಹೋಗಿದ್ದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಸೋಲನುಭವಿಸಿದ್ದರು. ನಂತರ 2019ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ, ಬಿಜೆಪಿ ಅವರಿಗೆ ಟಿಕೆಟ್‌ ನೀಡದೆ ಶರಣು ಸಲಗರಗೆ ಟಿಕೆಟ್‌ ನೀಡಲಾಗಿತ್ತು. ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ ಸಿಗದೆ ಖೂಬಾ ಬೇಸರಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ತೊರೆದು ಮತ್ತೆ ಜೆಡಿಎಸ್‌ಗೆ ಬರಲು ತೀರ್ಮಾನಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಸಾವರ್ಕರ್‌ ಬೇಕಾ?, ಟಿಪ್ಪು ಬೇಕಾ? ಜನರೇ ನಿರ್ಧರಿಸಲಿ: ಕಟೀಲ್‌

ಖೂಬಾ ಜೆಡಿಎಸ್‌ಗೆ ಮರಳಲು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಹಮತ ಹೊಂದಿದ್ದಾರೆ ಎಂದು ಹೇಳಲಾಗಿದೆ. ಜೆಡಿಎಸ್‌ ಸೇರುವ ಬಗ್ಗೆ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಖೂಬಾ ಹೇಳಿದ್ದಾರೆ. ಆದರೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಎಚ್‌.ಡಿ.ಕುಮಾರಸ್ವಾಮಿ ಈ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದಿದ್ದಾರೆ.