ಬೆಂಗಳೂರು, (ಡಿ.19): ರಾಜರಾಜೇಶ್ವರಿ ನಗರ ವಿಧಾನಭಾ ಕ್ಷೇತ್ರದಿಂದ ಮುನಿರತ್ನ ಅವರ ಆಯ್ಕೆ ಪ್ರಶ್ನಿಸಿ ಸಲ್ಲಿಸಲಾಗಿರುವ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ 2020ರ ಫ್ರೆಬ್ರವರಿ ಮೊದಲ ವಾರಕ್ಕೆ ಮುಂದೂಡಿದೆ.

ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ್ತಷ್ಟು ಮುಂದಕ್ಕೆ ಹೋದಂತಾಗಿದೆ. 

ಸುಪ್ರೀಂ ತೀರ್ಪು : ಇಬ್ಬರು ಅನರ್ಹರ ಸ್ಥಿತಿ ಅತಂತ್ರ

ಬುಧವಾರ ಬಿಜೆಪಿಯ ಪರಾಜಿತ ಅಭ್ಯರ್ಥಿ ಮುನಿರಾಜುಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಪೀಠ, ಅರ್ಜಿಯ ತುರ್ತು ವಿಚಾರಣೆಗೆ ಅಗತ್ಯವಿಲ್ಲವೆಂದು ಹೇಳಿ ವಿಚಾರಣೆ ಮುಂದೂಡಿದೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಸಾವಿರಾರು ನಕಲಿ ಗುರುತಿನ ಚೀಟಿ ಮತ್ತೆಯಾಗಿದ್ದವು. ಇದರ ವಿರುದ್ಧ ಬಿಜೆಪಿಯ ಪರಾಜಿತ ಅಭ್ಯರ್ಥಿ ಮುನಿರಾಜುಗೌಡ ಕೋರ್ಟ್ ಮೆಟ್ಟಿಲೇರಿದ್ದರು.

ಸಂತೋಷ್‌ ಭೇಟಿಯಾಗಿ ಕೇಸು ಹಿಂಪಡೆಸಲು ಮುನಿರತ್ನ ಯತ್ನ!

ಇದೀಗ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠವು ವಿಚಾರಣೆ ಮುಂದೂಡಿದೆ. ಇದರಿಂದ ಕಾಂಗ್ರೆಸ್ ಅನರ್ಹ ಶಾಸಕ ಮುನಿರತ್ನಗೆ ದಿಕ್ಕುತೋಚದಂತಾಗಿದೆ.

17 ಶಾಸಕರ ಜೊತೆ ಬಿಜೆಪಿಗೆ ಸೇರ್ಪಡೆಯಾಗಿದ್ದ ಮುನಿರತ್ನರನ್ನು ಸ್ಪೀಕರ್‌ ರಮೇಶ್‌ ಕುಮಾರ್‌ ಅನರ್ಹಗೊಳಿಸಿದ್ದರು. ಇದನ್ನು ಸುಪ್ರೀಂ ಕೋರ್ಟ್‌ ಕೂಡ ಎತ್ತಿ ಹಿಡಿದಿತ್ತು.

 ಆದ್ರೆ, ಚುನಾವಣೆ ಆಯೋಗ ಮಾತ್ರ ಮಸ್ಕಿ ಹಾಗೂ ರಾಜರಾಜೇಶ್ವರಿ ಕ್ಷೇತ್ರವನ್ನು ಹೊರತುಪಡಿಸಿ ಇನ್ನುಳಿದ 15 ಕ್ಷೇತ್ರಗಳ ವಿಧಾನಸಭೆಗೆ ಉಪಚುನಾವಣೆ ಘೋಷಿಸಿತ್ತು.

ಅತ್ತ ಶಾಸಕ ಸ್ಥಾನವನ್ನೂ ಕಳೆದುಕೊಂಡು, ಇತ್ತ ಉಪಚುನಾವಣೆಯೂ ನಡೆಯದ ಹಿನ್ನೆಲೆಯಲ್ಲಿ ಮುನಿರತ್ನ ಸ್ಥಿತಿ ತ್ರಿಶಂಕು ಸ್ಥಿತಿಯಲ್ಲಿದ್ದಾರೆ.