ತುಮಕೂರು, (ಅ.10):  ಜೆಡಿಎಸ್‌ ಶಾಸಕರಾಗಿದ್ದ ಸತ್ಯನಾರಾಯಣ ಅವರ ಅಕಾಲಿಕ ನಿಧನದಿಂದ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದೆ. ಈ ಬಾರಿ ಶಿರಾದಲ್ಲಿ ಕೇಸರಿ ಬಾವುಟ ಹಾರಿಸಲು ಬೂತ್ ಮಟ್ಟದಲ್ಲಿ ಬಿಜೆಪಿ ಪ್ರಚಾರಕ್ಕಿಳಿದಿದ್ದ ಎನ್‌.ರವಿ ಕುಮಾರ್ ಅವರಿಗೆ ಕೊರೋನಾ ದೃಢಪಟ್ಟಿದೆ.

ವೈದ್ಯರ ಸಲಹೆ ಮೇರೆಗೆ ರವಿ ಅವರು ಹೋಂ ಕ್ವಾರಂಟೈನ್ ಆಗಿದ್ದಾರೆ. ಈ ಬಗ್ಗೆ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸಿದ್ದಾರೆ.

ಶಿರಾ ಬೈ ಎಲೆಕ್ಷನ್‌ಗೆ ಅಭ್ಯರ್ಥಿ ​ಹೆಸ್ರು ಘೋಷಿಸಿದ ಕೆಲವೇ ಗಂಟೆಗಳಲ್ಲಿ JDSಗೆ ಬಿಗ್ ಶಾಕ್

ಅಲ್ಲದೇ ಶಿರಾ ವಿಧಾನಸಭಾ ಕ್ಷೇತ್ರದ ಬಿಜೆಪಿ ನಾಯಕರಿಗೆ ಕೊರೋನಾ ಆತಂಕ ಶುರುವಾಗಿದೆ. ಅಲ್ಲದೇ ಬಿಜೆಪಿಗೆ ಆರಂಭದಲ್ಲಿಯೇ ಆಘಾತವಾಗಿದೆ. ಯಾಕಂದ್ರೆ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್​​​​. ರವಿಕುಮಾರ್, ಶಿರಾ ಬೈ ಎಲೆಕ್ಷನ್ ಜವಾಬ್ದಾರಿ ಹೊತ್ತು ತಳಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡ್ಡಗಿದ್ದರು.

 ತುಮಕೂರು ಜಿಲ್ಲೆ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗುವ ಮೊದಲೇ ಆಡಳಿತಾರೂಢ ಬಿಜೆಪಿ ಹಾಗೂ ಜೆಡಿಎಸ್‌ ತೆರೆಮರೆಯಲ್ಲಿ ಭರದ ಸಿದ್ಧತೆ ಆರಂಭಿಸಿವೆ.

ಕ್ಷೇತ್ರದ 264 ಬೂತ್‌ಗಳಲ್ಲಿ ಬೂತ್‌ ಕಮಿಟಿ, ಪೇಜ್‌ ಪ್ರಮುಖ್‌, ವಾಟ್ಸ್‌ ಆ್ಯಪ್‌ ಗ್ರೂಪ್‌ಗಳನ್ನು ರಚಿಸಲು ಮುಂದಾಗಿದ್ದು, ಇದೇ ತಿಂಗಳ ಅಂತ್ಯದ ವೇಳೆಗೆ ಎಲ್ಲವನ್ನೂ ಪೂರ್ಣಗೊಳಿಸಲು ಉದ್ದೇಶಿಸಿದೆ. ಈಗಾಗಲೇ ಪಕ್ಷದ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಅವರು ಕ್ಷೇತ್ರಕ್ಕೆ ಭೇಟಿ ನೀಡಿ ಸ್ಥಳೀಯ ಮಟ್ಟದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸುವ ಮೂಲಕ ತಳಮಟ್ಟದ ಸಿದ್ಧತೆಗೆ ಚಾಲನೆ ನೀಡಿದ್ದಾರೆ.

"

ಅಭ್ಯರ್ಥಿ ಯಾರೇ ಆಗಲಿ. ಆದರೆ, ಪಕ್ಷದ ಸಂಘಟನೆ ಗಟ್ಟಿಯಾಗಿರಬೇಕು ಎಂಬ ಉದ್ದೇಶದಿಂದ ಸಿದ್ಧತೆ ಆರಂಭಿಸಲಾಗಿದೆ.ಆದ್ರೆ, ಇದೀಗ ರವಿ ಕುಮಾರ್‌ ಅವರಿಗೆ ಕೊರೋನಾ ಸೋಂಕು ತಗುಲಿರುವುದರಿಂದ ಬಿಜೆಪಿ ಆರಂಭಿಕ ಆಘಾತವಾಗಿದೆ.