‘ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟಅನುದಾನದ ಪೈಕಿ 11 ಸಾವಿರ ಕೋಟಿ ರು.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿ ದಲಿತರನ್ನು ವಂಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರ ಕ್ಷಮೆ ಕೇಳಬೇಕು’ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಒತ್ತಾಯಿಸಿದ್ದಾರೆ.
ಬೆಂಗಳೂರು (ಆ.02): ‘ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟಅನುದಾನದ ಪೈಕಿ 11 ಸಾವಿರ ಕೋಟಿ ರು.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿ ದಲಿತರನ್ನು ವಂಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರ ಕ್ಷಮೆ ಕೇಳಬೇಕು’ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರದ ಈ ಕ್ರಮ ವಿರೋಧಿಸಿ ಪಕ್ಷದ ಎಸ್‌ಸಿ ಮೋರ್ಚಾ ಮತ್ತು ಎಸ್‌ಟಿ ಮೋರ್ಚಾಗಳ ವತಿಯಿಂದ ಮುಂದಿನ ದಿನಗಳಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದೂ ಅವರು ಎಚ್ಚರಿಸಿದ್ದಾರೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಸಿಪಿ, ಟಿಎಸ್‌ಪಿ (ಪರಿಶಿಷ್ಟಜಾತಿ ಮತ್ತು ಪಂಗಡ ವರ್ಗದ ಅಭಿವೃದ್ಧಿಗಾಗಿ ವಿಶೇಷ ಘಟಕ ಯೋಜನೆ) ಅಡಿ 34,293 ಕೋಟಿ ರು. ತೆಗೆದಿಟ್ಟಿದ್ದು ಯಾಕೆ ಮತ್ತು ಅದನ್ನು ಬೇರೆ ಉದ್ದೇಶಕ್ಕೆ ಕೊಡುವುದು ಯಾಕೆ ಎಂದು ಖಾರವಾಗಿ ಪ್ರಶ್ನಿಸಿದರು.
Gruha Jyoti Scheme: ಆಗಸ್ಟ್ ಮೊದಲನೇ ದಿನದಿಂದಲೇ ಶೂನ್ಯ ಬಿಲ್ ವಿತರಣೆ ಶುರು
ರಾಜ್ಯ ಸರ್ಕಾರ ಅವೈಜ್ಞಾನಿಕವಾಗಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಲು ರಾಜ್ಯದ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದ್ದು, ರಾಜ್ಯದ ಅಭಿವೃದ್ಧಿಯ ಕತೆ ಅಯೋಮಯವಾಗಲಿದೆ. ಎಸ್‌ಸಿಪಿ ಟಿಎಸ್‌ಪಿ ಕಾಯ್ದೆಯಡಿ ಎಸ್ಸಿ-ಎಸ್ಟಿಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟಅನುದಾನದಲ್ಲಿ ಸುಮಾರು 11 ಸಾವಿರ ಕೋಟಿ ರು. ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ವರ್ಗಾವಣೆ ಮಾಡುತ್ತಿದ್ದು, ಎಸ್ಸಿ-ಎಸ್ಟಿಸಮುದಾಯದ ಅಭಿವೃದ್ಧಿಗೆ ಮಾರಕವಾಗಲಿದೆ.
ಟೋಪಿ ಹಾಕುವ ಕೆಲಸ: ಮಾಜಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, ಐದು ಗ್ಯಾರಂಟಿಗಳ ಜಾರಿಗಾಗಿ 50 ಸಾವಿರ ಕೋಟಿ ರು. ಖರ್ಚು ಮಾಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಈಗಾಗಲೇ ಜುಲೈ ಮುಗಿದಿದೆ. 50 ಸಾವಿರ ಕೋಟಿ ರು. ಕೊಡಲು ಹೋಗಿ ಜನರಿಗೆ 75 ಸಾವಿರ ಕೋಟಿ ರು. ಟೋಪಿ ಹಾಕುವ ಕೆಲಸವನ್ನು ಮಾಡುತ್ತಿದೆ. ಇದು ಖಂಡನೀಯ. ಇಂಥ ಮೋಸದಾಟ ಒಪ್ಪಲಸಾಧ್ಯ ಎಂದು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್‌ಸಿಪಿ-ಟಿಎಸ್‌ಪಿಯ 11 ಸಾವಿರ ಕೋಟಿ ರು. ಹಣವನ್ನು ಬೇರೆ ಉದ್ದೇಶಕ್ಕೆ ಬಳಸಲು ಒಪ್ಪಿಗೆ ನೀಡಿದ್ದಾರೆ.
ರಾಜ್ಯದಲ್ಲಿ ಆನ್‌ಲೈನ್ ಗೇಮ್, ಬೆಟ್ಟಿಂಗ್ ನಿಷೇಧ ಚಿಂತನೆ: ಸಿಎಂ ಸಿದ್ದರಾಮಯ್ಯ
ಸಂವಿಧಾನದ ಆಶಯ ಏನು?: ಈ ದೇಶದಲ್ಲಿರುವ ದೀನದಲಿತರು, ಬಡವರು, ಶಿಕ್ಷಣ ವಂಚಿತರು, ಉದ್ಯೋಗದಲ್ಲಿ ಅವಕಾಶ ವಂಚಿತರು, ಕಡು ಬಡವರನ್ನು ಮೇಲೆತ್ತುವ ಕಾರ್ಯಕ್ರಮಗಳನ್ನು ಮಾಡಬೇಕು. ಮುಖ್ಯವಾಗಿ ಶಿಕ್ಷಣಕ್ಕೆ ಆದ್ಯತೆ ಕೊಡಬೇಕು. ಬಸ್ಸಿನಲ್ಲಿ ಪುಕ್ಕಟೆ ಪ್ರಯಾಣ, ಉಚಿತ ವಿದ್ಯುತ್ ನೀಡಿದ್ದಾಗಿ ಹೇಳಿಕೊಂಡು ಅದನ್ನೆಲ್ಲ ಎಸ್‌ಸಿ, ಎಸ್‌ಟಿ ಖಾತೆಗೆ ಹಾಕುವುದು ಮೋಸದಾಟ ಎಂದು ಟೀಕಿಸಿದ ಅವರು, ಇದನ್ನು ಮಾಡಿದ್ದೇ ಆದರೆ, ನಾವು ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
