ಹಣ ಹಾಗೂ ಹೆಣದ ಮೇಲೆ ಕಾಂಗ್ರೆಸ್ ರಾಜಕಾರಣ: ಎನ್.ರವಿಕುಮಾರ್
ವಿಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ಬಗ್ಗೆ ಕೇಂದ್ರದ ನಾಯಕರು ನಿರ್ಧರಿಸಲಿಸಲಿದ್ದು, ಇಷ್ಟರಲ್ಲೇ ಆಯ್ಕೆ ನಡೆಯುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಹೇಳಿದರು.
ಯಾದಗಿರಿ (ಜು.30): ವಿಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ಬಗ್ಗೆ ಕೇಂದ್ರದ ನಾಯಕರು ನಿರ್ಧರಿಸಲಿಸಲಿದ್ದು, ಇಷ್ಟರಲ್ಲೇ ಆಯ್ಕೆ ನಡೆಯುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಹೇಳಿದರು. ವಿಪಕ್ಷ ನಾಯಕ ನೇಮಕ ವಿಳಂಬ ಕುರಿತು ಯಾದಗಿರಿಯಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಅವರು, ವಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆ ಕೇಂದ್ರ ನಾಯಕರು ನಿರ್ಧಾರ ಮಾಡುತ್ತಾರೆ. ಕೆಲವೇ ದಿನಗಳಲ್ಲಿ ವಿಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಆಗಬಹುದು ಎಂದರು.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ವಿಪಕ್ಷ ನಾಯಕರಾಗುವ ವಿಚಾರ ಈ ಬಗ್ಗೆ ಕೇಂದ್ರ ನಾಯಕರು ನಿರ್ಧರಿಸುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಇನ್ನು, ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯವಿಲ್ಲ ಎಂದ ರವಿಕುಮಾರ, ಕಾಂಗ್ರೆಸ್ ಶಾಸಕರು ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅಭಿವೃದ್ಧಿಗಾಗಿ ಪತ್ರ ಬರೆಯಬೇಕೋ ಇಲ್ಲವೋ ಚರ್ಚೆಯಾಗಿದೆ ಎಂದು ಟೀಕಿಸಿದರು. ಗ್ಯಾರಂಟಿ ಯೋಜನೆಗಳ ಸೌಲಭ್ಯಗಳನ್ನು ಯಾವುದೇ ಷರತ್ತು ಇಲ್ಲದೇ ಸೌಲಭ್ಯ ನೀಡಬೇಕಿದೆ.
ಜನಪರ ಸೇವೆಗೆ ಹಿಂದೇಟು ಹಾಕೋದಿಲ್ಲ: ಶಾಸಕ ಬೇಳೂರು
ಅಭಿವೃದ್ಧಿಗಾಗಿ ಅನುದಾನ ನೀಡದಿದ್ದರೆ ಕಾಂಗ್ರೆಸ್ ಸರಕಾರದ ನಿಲುವೇನು ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ, ಉಡುಪಿಯ ವೀಡಿಯೋ ಪ್ರಕರಣವು ಸರಕಾರ ಮಕ್ಕಳಾಟ ತಮಾಷೆ ಎನ್ನುತ್ತಿದೆ ಎಂದು ಕಿಡಿ ಕಾರಿದರು. ಈ ಸರ್ಕಾರಕ್ಕೆ ಯಾವುದೇ ಗಂಭೀರತೆ ಇಲ್ಲ, ಒಂದು ಕಡೆ ಮಳೆ, ಇನ್ನೊಂದು ಕಡೆ ಇಲ್ಲ, ಮಳೆ ಇಲ್ಲದ ಜಿಲ್ಲೆಗಳನ್ನು ಬರ ಜಿಲ್ಲೆ ಅಂತ ಘೋಷಣೆ ಮಾಡಬೇಕು, ಮಳೆಯಿಂದ ಹಾನಿಯಾದ ಜಿಲ್ಲೆಗಳನ್ನು ಹಸಿರು ಬರವೆಂದು ಸರಕಾರ ಘೋಷಣೆ ಮಾಡಬೇಕು, ಸಚಿವರು ಹಾನಿಯಾದ ಸ್ಥಳಕ್ಕೆ ಭೇಟಿ ನೀಡಬೇಕು ಎಂದರು.
ಉಡುಪಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣ ಕುರಿತ ವೀಡಿಯೋ ಇದ್ದರೆ ತೋರಿಸಿ ಎಂಬ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ರವಿಕುಮಾರ್, ಪ್ರಿಯಾಂಕ ಖರ್ಗೆ ಅವರು ಬಹಳ ಬುದ್ಧಿವಂತರು, ಅವರಿಗೆ ಪ್ರೂಪ್ ಏನು ಇದೆ ಅಂತ ನಾನು ಹೇಳುತ್ತೇನೆ, ಕಳೆದ ಒಂದು ವರ್ಷದಿಂದ ನಡೆಯುತ್ತಿದೆ ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ, ಹೌದು ನಾವು ರೆಕಾರ್ಡ್ ಮಾಡುತ್ತಿದ್ದೆವು ಅಂತ ಪತ್ರ ಬರೆದಿದ್ದಾರೆ, ತಪ್ಪಾಗಿದೆ ಎಂದು ವಿದ್ಯಾರ್ಥಿಗಳು ಕಾಲೇಜ್ ಮ್ಯಾನೆಜ್‌ಮೆಂಟ್ ಗೆ ಪತ್ರ ಬರೆದಿದ್ದಾರೆ. ಇದಕ್ಕಿಂತ ಏನು ಸಾಕ್ಷಿ ಬೇಕು ಪ್ರಿಯಾಂಕ ಖರ್ಗೆಗೆ ಎಂದು ಪ್ರಶ್ನಿಸಿದರು.
ಈ ಬಾರಿ ಮೈಸೂರಿನಲ್ಲಿ ಬಿತ್ತನೆ ಬೀಜದ ಕೊರತೆ ಇಲ್ಲ: ಸಚಿವ ಮಹದೇವಪ್ಪ
ಬಿಜೆಪಿಯವರು ಹೆಣದ ಮೇಲೆ ರಾಜಕಾರಣ ಮಾಡುತ್ತಾರೆ ಎಂಬ ಸಿಎಂ ಸಿದ್ದು ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಹಣ ಮತ್ತು ಹೆಣದ ಮೇಲೆ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ, ಎರಡೇ ತಿಂಗಳಲ್ಲಿ ಕಾಂಗ್ರೆಸ್ ಗೆ ಹಣದ ಅಮಲು ಬಂದಿದೆ, ಕಾಂಗ್ರೆಸ್‌ನವರು ಆಕಾಶದಲ್ಲಿದ್ದಾರೆ, ಸ್ವಲ್ಪ ಅವರು ಭೂಮಿಗೆ ಇಳಿಯಬೇಕು ಎಂದು ವ್ಯಂಗ್ಯವಾಡಿದರು.