ಹತ್ಯೆ ಯತ್ನ ಆರೋಪ, ಪ್ರಭು ಚೌಹಾಣ್‌ ಜತೆ ಚರ್ಚಿಸುವೆ: ಕಟೀಲ್‌

ಮಾಜಿ ಸಚಿವ, ಬಿಜೆಪಿ ಶಾಸಕ ಪ್ರಭು ಚೌಹಾಣ್‌ ಹತ್ಯೆ ಯತ್ನ ಕುರಿತಂತೆ ಅವರ ಜೊತೆ ಮಾತುಕತೆ ನಡೆಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ತಿಳಿಸಿದ್ದಾರೆ. ದೆಹಲಿಯಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. 

Bjp Leader Nalin Kumar Kateel Talks Over Mla Prabhu Chauhan gvd

ನವದೆಹಲಿ (ಆ.11): ಮಾಜಿ ಸಚಿವ, ಬಿಜೆಪಿ ಶಾಸಕ ಪ್ರಭು ಚೌಹಾಣ್‌ ಹತ್ಯೆ ಯತ್ನ ಕುರಿತಂತೆ ಅವರ ಜೊತೆ ಮಾತುಕತೆ ನಡೆಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ತಿಳಿಸಿದ್ದಾರೆ. ದೆಹಲಿಯಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಚೌಹಾಣ್‌ ಹತ್ಯೆ ಯತ್ನ ಕುರಿತು ಪ್ರತಿಕ್ರಿಯಿಸಿ, ನಾನು ಶುಕ್ರವಾರ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದು, ಆ.14ರಂದು ಅವರನ್ನು ಕರೆದು ಈ ಬಗ್ಗೆ ಮಾತುಕತೆ ನಡೆಸುತ್ತೇನೆ. ಹತ್ಯೆಗೆ ಯಾರೇ ಯತ್ನ ನಡೆಸಲಿ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಇದೇ ವೇಳೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದ ಅವರು, ಸಿದ್ದರಾಮಯ್ಯ ಸರ್ಕಾರದಲ್ಲಿ ಗ್ಯಾರಂಟಿಗಳ ಕಾರಣದಿಂದ ಅಭಿವೃದ್ಧಿ ಕುಂಠಿತವಾಗಿದೆ. ಭ್ರಷ್ಟಾಚಾರ ಮಿತಿ ಮೀರಿದೆ. ಕೃಷಿ ಇಲಾಖೆಯಲ್ಲಿ ಭ್ರಷ್ಟಾಚಾರ ಕೇಳಿ ಬಂದಿದ್ದು, ರಾಜ್ಯಪಾಲರಿಗೆ ಈ ಸಂಬಂಧ ದೂರು ನೀಡಲಾಗಿದೆ. ಮಾನ, ಮರ್ಯಾದೆ ಇದ್ದರೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ಕಮಿಷನ್ ಆರೋಪ: ಸರ್ಕಾರಕ್ಕೆ ಆರ್‌.ಅಶೋಕ್‌ 10 ಪ್ರಶ್ನೆ

ರಾಜ್ಯದಲ್ಲಿ ಭ್ರಷ್ಟಾಚಾರದ ಅಂಗಡಿ ಓಪನ್‌: ರಾಜ್ಯದ ಪ್ರತಿ ಇಲಾಖೆಯಲ್ಲೂ ಭ್ರಷ್ಟಾಚಾರ ಮಿತಿಮೀರಿವೆ. ರಾಜ್ಯ ಸರ್ಕಾರದ ಭ್ರಷ್ಟಾಚಾರದ ಅಂಗಡಿ ತೆರೆದಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಭ್ರಷ್ಟಾಚಾರ ಉತ್ತುಂಗಕ್ಕೇರಿದೆ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್‌ ವರಿಷ್ಠ ಎಚ್‌.ಡಿ. ಕುಮಾರಸ್ವಾಮಿ ಸರಿಯಾಗಿಯೇ ಹೇಳಿದ್ದಾರೆ. ಭ್ರಷ್ಟಾಚಾರದಿಂದಾಗಿ ಜನರು ಯಾವುದೇ ಸರ್ಕಾರಿ ಕಚೇರಿಗೆ ಹೋಗುವಂತಿಲ್ಲ. ಅಧಿಕಾರಿಗಳಿಗೆ ಇಂತಿಷ್ಟುಕೋಟಿ ನೀಡಬೇಕೆಂಬ ಟಾರ್ಗೆಟ್‌ ನೀಡಿರುವ ದೂರುಗಳು ಕೇಳಿಬರುತ್ತಿವೆ. ಪ್ರತಿ ಹುದ್ದೆ ಮತ್ತು ಅಧಿಕಾರಿಗಳ ವರ್ಗಾವಣೆಗೆ ದರ ನಿಗದಿಪಡಿಸಲಾಗಿದೆ ಎಂದು ಆರೋಪಿಸಿದರು.

ಕಾಮಗಾರಿಗಳಿಗೆ ಹಿನ್ನಡೆ: ರಾಜ್ಯದ ಯಾವುದೇ ಇಲಾಖೆಯಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆದಿಲ್ಲ. ಅಲ್ಲದೆ, ಗ್ಯಾರಂಟಿ ಯೋಜನೆ ಅನುಷ್ಠಾನದಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಹಿನ್ನಡೆಯಾಗಿದೆ ಎಂದರು. ಗ್ಯಾರಂಟಿ ಯೋಜನೆ ಜಾರಿಯಿಂದ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳುವುದು ಕಷ್ಟಎಂದು ಉಪಮುಖ್ಯಮಂತ್ರಿಯೇ ಹೇಳಿದ್ದಾರೆ. ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ಏನಾಯಿತು ಎಂಬುದನ್ನು ಈಗಾಗಲೇ ನೋಡಿದ್ದೇವೆ. ಸಿದ್ದರಾಮಯ್ಯ ರಾಜ್ಯವನ್ನು ಎಲ್ಲಿಗೆ ಕೊಂಡೊಯ್ಯುತ್ತಿದ್ದಾರೆ ಎಂದು ನಳಿನ್‌ ಕುಮಾರ್‌ ಪ್ರಶ್ನಿಸಿದರು.

ರಾಜ್ಯದ ಮೊದಲ ಮಹಿಳಾ ಕಮಿಷನರ್‌ IPS ರೇಣುಕಾ ಸುಕುಮಾರ್ ಅಧಿಕಾರ ಸ್ವೀಕಾರ!

ಗ್ಯಾರಂಟಿಗಳಿಂದ ರಾಜ್ಯ ಅಭಿವೃದ್ಧಿಯಾಗದು. ಸುದೀರ್ಘ 60 ವರ್ಷಗಳ ಕಾಲ ದೇಶವನ್ನು ಆಳಿದ ಕಾಂಗ್ರೆಸ್‌ನಿಂದ ಹಳ್ಳಿ ಹಳ್ಳಿಗಳಲ್ಲಿ ಶಾಲೆ, ರಸ್ತೆ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಸಾಧ್ಯವಾಗಿಲ್ಲ. ರೈಲ್ವೆ ಇಲಾಖೆಯಲ್ಲೂ ಯಾವುದೇ ಅಭಿವೃದ್ಧಿ ಮಾಡಿಲ್ಲ. ಆದರೆ ಮೋದಿ ಪ್ರಧಾನಿಯಾದ ಮೇಲೆ ಎಲ್ಲವೂ ಬದಲಾಗಿದೆ. ಜನತೆ ಮೋದಿ ಅವರ ಮೇಲೆ ವಿಶ್ವಾಸವಿರಿಸಿದ್ದಾರೆ. ಅಭಿವೃದ್ಧಿ ಕಾರ್ಯಗಳು ವೇಗ ಪಡೆದಿವೆ ಎಂದು ಹೇಳಿದರು.

Latest Videos
Follow Us:
Download App:
  • android
  • ios