ಬೆಂಗಳೂರು[ನ.23): ಪ್ರಚಾರ ಕಾರ್ಯ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ದಂಪತಿ ಮತ್ತು ಮಗುವನ್ನು ತಮ್ಮ ಕಾರಿನಲ್ಲಿಯೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವ ಮೂಲಕ ಕಂದಾಯ ಸಚಿವ ಆರ್‌.ಅಶೋಕ್‌ ಮಾನವೀಯತೆ ಮರೆದಿದ್ದಾರೆ.

ಶುಕ್ರವಾರ ಮಧ್ಯಾಹ್ನ ಬಿಜೆಪಿ ಅಭ್ಯರ್ಥಿ ಎಸ್‌.ಟಿ.ಸೋಮಶೇಖರ್‌ ಪರ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಪ್ರಚಾರ ಕಾರ್ಯವನ್ನು ಮುಗಿಸಿ ಮಲ್ಲೇಶ್ವರದಲ್ಲಿನ ಬಿಜೆಪಿ ಕಚೇರಿಗೆ ತೆರಳುತ್ತಿದ್ದರು. ಈ ವೇಳೆ ಕನಕಪುರ ರಸ್ತೆಯಲ್ಲಿ ಗೂಡ್ಸ್‌ ವಾಹನ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿರುವುದನ್ನು ಕಂಡು ವಾಹನ ನಿಲ್ಲಿಸಿದರು.

ಅಲ್ಲಿ ಬೈಕ್‌ನಲ್ಲಿದ್ದ ದಂಪತಿ ಮತ್ತು ಮಗು ಗಾಯಗೊಂಡಿದ್ದರು. ಇದನ್ನು ಕಂಡ ಸಚಿವ ಆರ್‌.ಅಶೋಕ್‌ ಮತ್ತು ಅನರ್ಹ ಶಾಸಕ ಮುನಿರತ್ನ ಅವರು ತಕ್ಷಣ ಗಾಯಗೊಂಡವರನ್ನು ತಮ್ಮ ವಾಹನದಲ್ಲಿಯೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರು.

ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.