ಶಾಸಕ ರಾಮಣ್ಣ ಲಮಾಣಿಗೆ ಟಿಕೆಟ್ ನೀಡುವುದಕ್ಕೆ ಬಿಜೆಪಿ ಮುಖಂಡರ ವಿರೋಧ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಿರಹಟ್ಟಿವಿಧಾನಸಭಾ ಮೀಸಲು ಕ್ಷೇತ್ರದಿಂದ ಹಾಲಿ ಶಾಸಕ ರಾಮಣ್ಣ ಲಮಾಣಿಯವರಿಗೆ ಸ್ಪರ್ಧಿಸಲು ಟಿಕೆಟ್ ನೀಡಬಾರದು ಎಂದು ಶನಿವಾರ ಸಂಜೆ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ ಅವರ ನಿವಾಸದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಸಭೆ ಸೇರಿ ಆಗ್ರಹಿಸಿದರು.
ಲಕ್ಷ್ಮೇಶ್ವರ (ಏ.01): ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಿರಹಟ್ಟಿ ವಿಧಾನಸಭಾ ಮೀಸಲು ಕ್ಷೇತ್ರದಿಂದ ಹಾಲಿ ಶಾಸಕ ರಾಮಣ್ಣ ಲಮಾಣಿಯವರಿಗೆ ಸ್ಪರ್ಧಿಸಲು ಟಿಕೆಟ್ ನೀಡಬಾರದು ಎಂದು ಶನಿವಾರ ಸಂಜೆ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ ಅವರ ನಿವಾಸದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಸಭೆ ಸೇರಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ, ಜಿ.ಪಂ. ಸದಸ್ಯ ಈಶಣ್ಣ ಹುಲ್ಲಳ್ಳಿ, ಮಾಜಿ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ ಅವರು, ಶಿರಹಟ್ಟಿಮತಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ಪ್ರಬಲವಾಗಿದ್ದು, ಮತ್ತೆ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಕಾರ್ಯಕರ್ತರು ನಿರ್ಧರಿಸಿದ್ದಾರೆ. ಆದರೆ ಸದ್ಯ ಹಾಲಿ ಶಾಸಕ ರಾಮಣ್ಣ ಲಮಾಣಿಯವರಿಗೆ ಪಕ್ಷದ ಹೈಕಮಾಂಡ್ ಮತ್ತೆ ಸ್ಪರ್ಧಿಸಲು ಟಿಕೆಟ್ ನೀಡಬಾರದು,
ಅಭ್ಯರ್ಥಿಗಳ ಆಯ್ಕೆ ಬಿಜೆಪಿ ಸಂಸದೀಯ ಸಭೆಯಲ್ಲಿ ಅಂತಿಮ: ಶಾಸಕ ಬಸನಗೌಡ ಯತ್ನಾಳ
ಹಾಲಿ ಶಾಸಕರಿಂದ ಕ್ಷೇತ್ರದಲ್ಲಿ ಕಾರ್ಯಕರ್ತರು ಸಾಕಷ್ಟುನಿರಾಸೆ ಅನುಭವಿಸಿದ್ದು, ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಬೇಕಾದರೆ ಈಗಿರುವ ಆಕಾಂಕ್ಷಿಗಳಲ್ಲಿ ಯಾರಿಗೆ ಟಿಕೆಟ್ ನೀಡಿದರೂ ಸಹ ಒಮ್ಮತದಿಂದ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇವೆ. ಆದರೆ ಪಕ್ಷ ಕಾರ್ಯಕರ್ತರ ಬೇಡಿಕೆಯನ್ನು ಮನ್ನಿಸದೆ ಮತ್ತೆ ಅದೇ ಅಭ್ಯರ್ಥಿಯನ್ನು ಸ್ಪರ್ಧೆಗಿಳಿಸಿದರೆ ಆಕಾಂಕ್ಷಿಗಳಲ್ಲಿ ಓರ್ವ ಅಭ್ಯರ್ಥಿಯನ್ನು ಪಕ್ಷೇತರರಾಗಿ ಸ್ಪರ್ಧಿಸಿ ಆಯ್ಕೆಯಾಗುವಂತೆ ಮಾಡುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಈಶ್ವರಪ್ಪ ಹುಲ್ಲಲ್ಲಿ, ಬಿ.ಡಿ. ಪಲ್ಲೇದ, ತಿಪ್ಪಣ್ಣ ಕೊಂಚಿಗೇರಿ, ಶಿವನಗೌಡ ಕಂಠಿಗೌಡ್ರ, ನಿಂಗಪ್ಪ ಬನ್ನಿ, ವಿಜಯಕುಮಾರ ಹತ್ತಿಕಾಳ, ಸುಭಾಸ ಬಟಗುರ್ಕಿ, ತಿಮ್ಮರಡ್ಡಿ ಅಳವಂಡಿ, ಶ್ರೀನಿವಾಸ ಅಬ್ಬಿಗೇರಿ, ಶಂಕರ ಮರಾಠೆ, ವೈ.ಡಿ. ಪಾಟೀಲ, ರಾಜು ಬಮ್ಮನಕಟ್ಟಿ, ನಾಗರಾಜ ಚಿಂಚಲಿ, ಚನ್ನವೀರಗೌಡ ಪಾಟೀಲ, ರಾಜಣ್ಣ ಕನವಳ್ಳಿ, ಸೋಮಣ್ಣ ಮುಳಗುಂದ ಸೇರಿದಂತೆ ನೂರಾರು ಜನರು ಹಾಜರಿದ್ದರು.
ಬಿಜೆಪಿ ಟಿಕೆಟ್ ವಿಚಾರದಲ್ಲಿ ಗೊಂದಲ ಇಲ್ಲ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಇಂದು ಸಭೆ: ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಆಯ್ಕೆ ವಿಷಯದಲ್ಲಿ ಕಾರ್ಯಕರ್ತರು ಹಾಲಿ ಶಾಸಕರಿಗೆ ಟಿಕೆಟ್ ನೀಡುವುದನ್ನು ವಿರೋಧಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಏ. 2ರಂದು (ಭಾನುವಾರ) ಮುಂಜಾನೆ 11 ಗಂಟೆಗೆ ಪಕ್ಷದ ಕಾರ್ಯಕರ್ತರ ಹಾಗೂ ಮುಖಂಡರ ಸಭೆಯನ್ನು ಸ್ಥಳೀಯ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಕರೆಯಲಾಗಿದೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.