ಮುಂಬರುವ ಲೋಕಸಭಾ ಚುನಾವಣೆಗೆ ಮತ್ತೊಮ್ಮೆ ಸ್ಪರ್ಧಿಸುವ ಆಸೆ ಇದೆಯೇ ಎಂಬುದನ್ನು ಕೇಳಿರುವ ಈ ನಾಯಕರು, ಒಂದು ವೇಳೆ ನೀವು ಸ್ಪರ್ಧಿಸದಿದ್ದರೆ ಪರ್ಯಾಯವಾಗಿ ಸಮರ್ಥರಾದವರನ್ನು ಸೂಚಿಸಿ ಎಂದೂ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಬೆಂಗಳೂರು(ಡಿ.28): ಪಕ್ಷದ ವರಿಷ್ಠ ನಾಯಕರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕುತ್ತಿರುವ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಡಿ.ವಿ.ಸದಾನಂದಗೌಡ ಅವರನ್ನು ಸಮಾಧಾನ ಮಾಡುವ ಪ್ರಯತ್ನ ನಡೆದಿದೆ.

ಬುಧವಾರ ಬೆಳಗ್ಗೆ ಪತ್ರಿಕಾಗೋಷ್ಠಿ ನಡೆಸಿ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದ ಸದಾನಂದಗೌಡರ ನಿವಾಸಕ್ಕೆ ಸಂಜೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಮತ್ತು ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಭೇಟಿ ನೀಡಿ ಮಾತುಕತೆ ನಡೆಸಿದರು.

ರಾಜ್ಯ ಬಿಜೆಪಿಯಲ್ಲಿ ಹೇಳೋರಿಲ್ಲ, ಕೇಳೋರಿಲ್ಲ: ಸದಾನಂದಗೌಡ ಅಸಮಾಧಾನ

ಇದೇ ವೇಳೆ ಮುಂಬರುವ ಲೋಕಸಭಾ ಚುನಾವಣೆಗೆ ಮತ್ತೊಮ್ಮೆ ಸ್ಪರ್ಧಿಸುವ ಆಸೆ ಇದೆಯೇ ಎಂಬುದನ್ನು ಕೇಳಿರುವ ಈ ನಾಯಕರು, ಒಂದು ವೇಳೆ ನೀವು ಸ್ಪರ್ಧಿಸದಿದ್ದರೆ ಪರ್ಯಾಯವಾಗಿ ಸಮರ್ಥರಾದವರನ್ನು ಸೂಚಿಸಿ ಎಂದೂ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಪಕ್ಷದ ಕಾರ್ಯಕರ್ತರೂ ಸೇರಿದಂತೆ ಹಾಲಿ ಹಾಗೂ ಮಾಜಿ ಶಾಸಕರ ವಿಶ್ವಾಸ ಗಳಿಸಿರುವ ಸದಾನಂದಗೌಡರನ್ನು ದೂರವಿಟ್ಟು ಚುನಾವಣೆ ಎದುರಿಸಿದರೆ ಸೋಲುವ ಸಾಧ್ಯತೆ ಹೆಚ್ಚು ಎಂಬ ಆತಂಕ ಪಕ್ಷದ ನಾಯಕರನ್ನು ಕಾಡುತ್ತಿದೆ. ಹೀಗಾಗಿ, ಸದಾನಂದಗೌಡರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಲೆಕ್ಕಾಚಾರ ಬಿಜೆಪಿ ನಾಯಕರು ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.