ಕಮಲ ಪಾಳಯಕ್ಕೆ ಆಘಾತ: ಬಿಜೆಪಿ ನಾಯಕರು ಕಾಂಗ್ರೆಸ್‌ಗೆ ಸೇರ್ಪಡೆ..!
ಬಿಜೆಪಿಯ ಅಧಿಕೃತ ಅಧ್ಯಕ್ಷೆ ಅಭ್ಯರ್ಥಿಯ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿದ ಮಾಲತಿ ಸಂದೀಪ್ ಅವರು ಕಾಂಗ್ರೆಸ್ ಬೆಂಬಲದಿಂದ ಅಧ್ಯಕ್ಷರಾಗಿದ್ದಾರೆ. ಅದೇ ರೀತಿ ಗಿರೀಶ್ ಸುವರ್ಣ ಬಿಜೆಪಿ ಬೆಂಬಲದಲ್ಲಿ ಮೂರು ಬಾರಿ ಗ್ರಾ.ಪಂ. ಸದಸ್ಯರಾಗಿದ್ದಾರೆ. ಅವರಿಬ್ಬರೂ ಬಿಜೆಪಿ ತ್ಯಜಿಸಿ ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದರು.
ಉಡುಪಿ(ಡಿ.01): ಉದ್ಯಾವರ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಅಧಿಕೃತ ಅಧ್ಯಕ್ಷ ಅಭ್ಯರ್ಥಿಯ ಸೋಲಿಗೆ ಕಾರಣರಾಗಿದ್ದ ಪಂಚಾಯಿತಿ ಸದಸ್ಯರಿಬ್ಬರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿಯ ಅಧಿಕೃತ ಅಧ್ಯಕ್ಷೆ ಅಭ್ಯರ್ಥಿಯ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿದ ಮಾಲತಿ ಸಂದೀಪ್ ಅವರು ಕಾಂಗ್ರೆಸ್ ಬೆಂಬಲದಿಂದ ಅಧ್ಯಕ್ಷರಾಗಿದ್ದಾರೆ. ಅದೇ ರೀತಿ ಗಿರೀಶ್ ಸುವರ್ಣ ಬಿಜೆಪಿ ಬೆಂಬಲದಲ್ಲಿ ಮೂರು ಬಾರಿ ಗ್ರಾ.ಪಂ. ಸದಸ್ಯರಾಗಿದ್ದಾರೆ. ಅವರಿಬ್ಬರೂ ಬಿಜೆಪಿ ತ್ಯಜಿಸಿ ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದರು.
ಪ್ರಧಾನಿ ಮೋದಿ ಯೋಜನೆಗೆ ಸಿದ್ದರಾಮಯ್ಯ ತಡೆ: ಶೋಭಾ ಕರಂದ್ಲಾಜೆ ಕಿಡಿ
ಅವರನ್ನು ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕಾಪು ಬ್ಲಾಕ್ ಕಾಂಗ್ರೆಸ್ ಉತ್ತರ ವಲಯ ಅಧ್ಯಕ್ಷ ಸಂತೋಷ್ ಕುಲಾಲ್, ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ರೋಯ್ಸ್ ಫರ್ನಾoಡೀಸ್ ಮುಂತಾದವರು ಪಕ್ಷಕ್ಕೆ ಸ್ವಾಗತಿಸಿದರು.