Asianet Suvarna News Asianet Suvarna News

Karnataka Politics: ತಾಕತ್ತಿದ್ದರೆ ಹಾಸನಕ್ಕೆ ರೇವಣ್ಣ ಬಂದು ನಿಲ್ಲಲಿ: ಶಾಸಕ ಪ್ರೀತಮ್‌ ಜೆ. ಗೌಡ

ನಾನು ಇಂದೇ ಹೇಳುತ್ತಿದ್ದೇನೆ ಬರೆದಿಟ್ಟುಕೊಳ್ಳಿ, ನನ್ನ ವಿರುದ್ಧ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಹಾಸನ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದೇ ಆದಲ್ಲಿ 50 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಲ್ಲಿ ನಾನು ಗೆಲ್ಲುತ್ತೇನೆ. ರೇವಣ್ಣ ಅವರಿಗೆ ತಾಕತ್ತಿದ್ದರೆ ಬಂದು ನಿಲ್ಲಲಿ ಎಂದು ಶಾಸಕ ಪ್ರೀತಮ್‌ ಜೆ. ಗೌಡ ಅವರು ಸವಾಲೆಸೆದರು.

BJP Minister Preetham J Gowda Slams on HD Revanna gvd
Author
Bangalore, First Published May 2, 2022, 12:03 AM IST

ಹಾಸನ (ಮೇ.02): ನಾನು ಇಂದೇ ಹೇಳುತ್ತಿದ್ದೇನೆ ಬರೆದಿಟ್ಟುಕೊಳ್ಳಿ, ನನ್ನ ವಿರುದ್ಧ ಮಾಜಿ ಸಚಿವ ಎಚ್‌.ಡಿ. ರೇವಣ್ಣ (HD Revanna) ಹಾಸನ ವಿಧಾನಸಭಾ ಕ್ಷೇತ್ರದಿಂದ (Hassan Assembly Constituency) ಸ್ಪರ್ಧೆ ಮಾಡಿದ್ದೇ ಆದಲ್ಲಿ 50 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಲ್ಲಿ ನಾನು ಗೆಲ್ಲುತ್ತೇನೆ. ರೇವಣ್ಣ ಅವರಿಗೆ ತಾಕತ್ತಿದ್ದರೆ ಬಂದು ನಿಲ್ಲಲಿ ಎಂದು ಶಾಸಕ ಪ್ರೀತಮ್‌ ಜೆ. ಗೌಡ (Preetham J Gowda) ಅವರು ಸವಾಲೆಸೆದರು. ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಶನಿವಾರ ನಡೆದ ನಾಟಕ ಪ್ರದರ್ಶನದಲ್ಲಿ ಪಾಲ್ಗೊಂಡು ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನನ್ನ ವಿರುದ್ಧ ರೇವಣ್ಣ ನಿಂತರೆ, 50 ಸಾವಿರಕ್ಕಿಂತ ಒಂದು ಮತ ಕಡಿಮೆ ನನಗೆ ಬಂದರೂ ಅಂದೇ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ರೀ ಎಲೆಕ್ಷನ್‌ಗೆ ಹೋಗುತ್ತೇನೆ ಎಂದು ಸವಾಲು ಹಾಕಿದರು.

ತಾಕತ್ತಿದ್ದರೆ ನೀವು ಘೋಷಣೆ ಮಾಡಿ, ಪ್ರೀತಮ್‌ ಗೌಡ ವಿರುದ್ಧ ಹಾಸನದಿಂದ ಸ್ಪ​ರ್ಧಿಸುತ್ತೇನೆ ಎಂದು ಎಂದರು. ಹಾಸನದಲ್ಲಿ ಬಂದು ಮುಂದಿನ ಚುನಾವಣೆಯಲ್ಲಿ ಸ್ಪ​ರ್ಧಿಸುವ ಧೈರ್ಯ ಅವರಿಗೆ ಇಲ್ಲ. ಆದ್ದರಿಂದ ಹತಾಶರಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಮತ್ತು ಅಭಿವೃದ್ಧಿಗೆ ತೊಡಕು ಉಂಟುಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ನಾನು ದಾರಿಯಲ್ಲಿ ಹೋಗುವ ದಾಸಯ್ಯ ಅಲ್ಲ. ರೇವಣ್ಣ ಅವರು ಮಕ್ಕಳಂತೆ ಮಾತನಾಡುವುದನ್ನು ಬಿಟ್ಟು ಅವರ ಹುದ್ದೆಗೆ ಗಂಭೀರವಾಗಿ ನಡೆದುಕೊಳ್ಳಬೇಕು. ಡೀಸಿ ಆಫೀಸಿನಲ್ಲಿ ಅಧಿ​ಕಾರಿಗಳನ್ನು ಬಯ್ಯುವ ಇವರು ನಂತರ ಕ್ಷಮೆ ಕೇಳುತ್ತಾರೆ. 

Hassan: 'ದನ ಕಾಯೋನೇ ನೀನು' ಹೇಳಿಕೆಗೆ ಕ್ಷಮೆ ಕೋರಿದ ರೇವಣ್ಣ

ಇಂತಹ ವರ್ತನೆ ಅವರದು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರಿಗೆ 2023ಕ್ಕೆ ಬಡ್ಡಿ ಸಮೇತ ತೀರಿಸುತ್ತೇನೆ. ಮೊದಲು ಅಸಲು ಎಲ್ಲಿದೆ ಅಂತ ಹುಡುಕಲು ಹೇಳಿ ಎಂದು ಟೀಕಿಸಿದ ಪ್ರೀತಂ, ಹಾಸನದಲ್ಲಿ ಚುನಾವಣೆಗೆ ನಿಂತು ಎರಡನೇ ಸ್ಥಾನ ಇರಲಿ, ಮೂರನೇ ಸ್ಥಾನಕ್ಕೆ ಹೋಗುತ್ತಾರೆ. ಗ್ರಾಮ ಪಂಚಾಯಿತಿ ಮೆಂಬರ್‌ಗಳು ಇವರಿಗಿಂತ ಚೆನ್ನಾಗಿ ನಡೆದುಕೊಳ್ಳುತ್ತಾರೆ. ಏಳನೇ, 10ನೇ ತರಗತಿ ಓದಿರೋರು. ಇದೇ ತರ ಆಡುವುದು. ವಿದ್ಯಾಭ್ಯಾಸ ಮಾಡುವುದರಲ್ಲಿ ಎಂತಹ ಕಷ್ಟಇದೆ ಅಂತ ಗೊತ್ತಿರುವುದಿಲ್ಲ. ಅದಕ್ಕೆ ಅಧಿ​ಕಾರಿಗಳೊಂದಿಗೆ ಇಂತಹ ವರ್ತನೆ ಅವರದು ಎಂದು ಟೀಕಿಸಿದರು.

ಹಾವ್ರಾಣಿನೂ ಇಲ್ಲ: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಹೆಸರು ಹೇಳಿ ರಾಜಕಾರಣ ಮಾಡುವವರು ಗಾಳಿಯಲ್ಲಿ ಗುಂಡು ಹೊಡೆಯುವವರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದ ಪ್ರೀತಮ್‌, ನನಗೂ ಒಂದು ಶಕ್ತಿ ಇದೆ ರಾಷ್ಟ್ರೀಯ ಪಕ್ಷದಿಂದ ಶಾಸಕನಾಗಿದ್ದೇನೆ. ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ನಿಮ್ಮ ಕಾರ್ಯಕರ್ತರು ಎಲ್ಲಿದ್ದಾರೆ ..! ಅವರು ಬಹಳ ಹತಾಶರಾಗಿದ್ದಾರೆ ಇರುವವರನ್ನು ಕಾಪಾಡಿಕೊಂಡು ಹೋಗುವುದು ನಿಮಗೆ ಒಳ್ಳೆಯದು ಎಂದು ಸಲಹೆ ನೀಡಿದರು. ಮುಂದಿನ ದಿನಗಳಲ್ಲಿ ಅಸಲು ಬಡ್ಡಿ ಇಲ್ಲದಂತೆ ಖಾಲಿ ಮಾಡಬೇಕಾಗುತ್ತದೆ. ಈ ಹೇಳಿದ ಹಿಟ್ಲರ್‌, ನಡಾಫ್‌ ಎಲ್ಲಾ ಕಳೆದು ಹೋಗಿದ್ದಾರೆ ನನಗೆ ರೇವಣ್ಣ ಯಾವ ಲೆಕ್ಕ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರೀತಮ್‌ ಗೌಡ, ಕೆ.ಆರ್‌ ಪೇಟೆ , ಶಿರಾದಲ್ಲಿ ಅವರೇ ಉಸ್ತುವಾರಿ ಏನಾಯ್ತು ....! ಹಾಸನಕ್ಕೆ ಬಂದರೂ ಇದೇ ಕಥೆಯಾಗುತ್ತದೆ. ಬುಟ್ಟೀಲಿ ಹಾವಿದೆ ಅಂತಾರೆ ಅದರಲ್ಲಿ ಹಾವ್ರಾಣಿನೂ ಇಲ್ಲ ಎಂದು ಲೇವಡಿ ಮಾಡಿದರು.

ಕಾಲೇಜಿಗೆ ಹೋಗುವ ಹುಡುಗ ಮಾತನಾಡಿದರೆ ಉತ್ತರ ಕೊಡ್ತೀನಿ. ಆಚಾರ-ವಿಚಾರ ಸಂಸ್ಕಾರ-ಸಂಸ್ಕೃತಿ ಇಲ್ಲದಂತೆ ಮಾತನಾಡುತ್ತಿರುವವರಿಗೆ ಉತ್ತರ ನೀಡಲು ಸಾಧ್ಯವಿಲ್ಲ. ದೇವೇಗೌಡರ ಮಗ ಅನ್ನೋದು ಬಿಟ್ಟರೆ ಅವರಿಗೆ ಇನ್ಯಾವ ಅರ್ಹತೆಯಿದೆ ಹೇಳಿ. 10ನೇ ತರಗತಿ ಪಾಸಾದವರಿಗೆ ಗೌರವದಿಂದ ನಡೆದುಕೊಳ್ಳಲು ಎಲ್ಲಿ ಬರುತ್ತೆ . ನಾನು ಅವನಲ್ಲ ದೇವರ ದಯೆಯಿಂದ ಡಬಲ್‌ ಡಿಗ್ರಿ ಪಡೆದಿದ್ದೇನೆ. ಇನ್ನಾದರೂ ರೇವಣ್ಣ ಅವರು ಗೌರವದಿಂದ ಇರಲಿ ಎಂದು ಪ್ರೀತಮ್‌ ವ್ಯಂಗ್ಯವಾಡಿದರು. ಜೆಡಿಎಸ್‌ನ ಮಾಜಿ ಸಚಿವರು ಮ್ಯೂಸಿಯಂ ಮಾಡುತ್ತೇವೆ ಅಂತ ಹೇಳಿ ಹುಡಾದಿಂದ ಜಾಗ ತೆಗೆದುಕೊಳ್ಳುತ್ತಾರೆ. ನಂತರ ಅಲ್ಲಿ ಎರಡು ಕಲ್ಯಾಣ ಮಂಟಪ ಕಟ್ಟಿತಿಂಗಳಿಗೆ 50ಲಕ್ಷ ದುಡಿಮೆ ಮಾಡುತ್ತಿದ್ದಾರೆ. ಆದರೆ ಇದೀಗ ನನ್ನ ಅಭಿವೃದ್ಧಿ ಕೆಲಸಕ್ಕೆ ವಿರೋಧ ಮಾಡುತ್ತಿರುವುದು ಎಷ್ಟುಸರಿ ಎಂದು ಕಿಡಿಕಾರಿದ ಪ್ರೀತಮ್‌, ಗಾಜಿನ ಮನೆಯಲ್ಲಿ ಕೂತಿದ್ದೀರಾ ಸಮಾಧಾನವಾಗಿ ಇದ್ದರೆ ಒಳ್ಳೆಯದು. ಇಲ್ಲ ಎಂದರೆ ಎಲ್ಲಾ ಹಗರಣಗಳನ್ನು ಬಿಚ್ಚ ಬೇಕಾಗುತ್ತದೆ ಎಂದು ಎಚ್ಚರಿಸಿದರು.

ಹೆಚ್ಚೇನು ಓದದ ರೇವಣ್ಣಗೆ ಶಿಕ್ಷಣ ಅಂದ್ರೇನೆ ಗೊತ್ತಿಲ್ಲ: ಸಚಿವ ಅಶ್ವ​ತ್ಥ

ಟ್ರಕ್‌ ಟರ್ಮಿನಲ್‌ ನಿರ್ಮಾಣ ಮಾಡಬಾರದು ಅಂತ ಹೇಳಲು ರೇವಣ್ಣ ಯಾರು?: ಹಾಸನ ವಿಧಾನಸಭಾ ಕ್ಷೇತ್ರಕ್ಕೂ ರೇವಣ್ಣಂಗೂ ಏನು ಸಂಬಂಧ ಎಂದು ಪ್ರೀತಂ ಗೌಡ ಕಿಡಿಕಾರಿದರು. ಕಳೆದ ಕೆಲ ದಿನದಿಂದ ಟ್ರಕ್‌ ಟರ್ಮಿನಲ್‌ ನಿರ್ಮಾಣ ವಿಚಾರವಾಗಿ ಮಾಜಿ ಸಚಿವ ಎಚ್‌ ಡಿ ರೇವಣ್ಣ ಹಾಗೂ ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ ಪ್ರೀತಮ್‌ ಗೌಡ ನಡುವಿನ ವಾಕ್ಸಮರ ಮುಂದುವರಿದಿದ್ದು, ರೇವಣ್ಣ ಅವರ ವಿರುದ್ಧ ಪ್ರೀತಮ್‌ ಗೌಡ ಇಂದು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು. ಎಲ್ಲವನ್ನು ಪರಿಶೀಲನೆ ಮಾಡಿ ಟ್ರಕ್‌ ಟರ್ಮಿನಲ್‌ ನಿರ್ಮಾಣ ಮಾಡಲಾಗುತ್ತಿದೆ. ಆದರೆ ಜೆಡಿಎಸ್‌ನವರು ಅಭಿವೃದ್ಧಿ ಕಾಮಗಾರಿಗಳಲ್ಲಿ ರಾಜಕೀಯವನ್ನು ಬೆರೆಸುತ್ತಿದ್ದಾರೆ ನಾನು ಯಾವುದಕ್ಕೂ ಜಗ್ಗುವುದಿಲ್ಲ, ಕುಗ್ಗುವುದಿಲ್ಲ ಎಂದು ಸವಾಲು ಹಾಕಿದರು.

Follow Us:
Download App:
  • android
  • ios