ಸಂಪುಟ ವಿಸ್ತರಣೆಯಾಗಿದ್ದು, ಏಳು ಜನರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಆದ್ರೆ, ಸಚವಾಕಾಂಕ್ಷಿಗಳ ಕಿಚ್ಚು ಇನ್ನೂ ತಣ್ಣಗಾಗಿಲ್ಲ.
ಬೆಳಗಾವಿ, (ಜ.13) : ಮಂತ್ರಿಗಿರಿ ಸಿಗದಿದ್ದಕ್ಕೆ ಅತೃಪ್ತ ಶಾಸಕರ ಆಕ್ರೋಶದ ಕಟ್ಟೆ ಹೊಡೆದಿದ್ದು, ತಮ್ಮ ನಾಯಕರುಗಳ ನಡೆಗೆ ಬಹಿರಂಗವಾಗಿಯೇ ಆಕ್ರೋಶ ವ್ಯಕ್ತಪಡಿಸಿಸುತ್ತಿದ್ದಾರೆ.
ಅದರಂತೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೇ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಸಾಮಾಜಿಕ ಜಾಲತಾಣ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ.
ನಾಗೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಿದ್ದಂತೆಯೇ ಸ್ವಕ್ಷೇತ್ರದಲ್ಲೇ ಸಂಭ್ರಮಾಚರಣೆ
ಸರಕಾರದಲ್ಲಿ ಸ್ಥಾನ ಮಾನ ಪಡೆಯಲು ಅನ್ಯ ಮಾರ್ಗಗಳನ್ನು ಅನುಸರಿಸದೆ ಪಕ್ಷಕ್ಕೆ ನಿಷ್ಠೆ, ವಿಚಾರಕ್ಕೆ ಬದ್ದತೆ ಇರುವ ಕಾರ್ಯಕರ್ತರಿಗೆ ಇಂದಿನ ದಿನಮಾನಗಳಲ್ಲಿ ಸ್ಥಾನವಿಲ್ಲ ಎನ್ನುವುದಕ್ಕೆ ಇಂದಿನ ಈ ನಡೆ ವಿಷಾಧಕರ ಸಂಗತಿ ಎಂದು ಎಂದು ಟ್ವೀಟ್ ಮಾಡುವ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.
ವಿಚಾರಕ್ಕೆ ಬದ್ದತೆ ಮತ್ತು ಪಕ್ಷಕ್ಕೆ ನಿಷ್ಠೆ ಇದು ದೌರ್ಬಲ್ಯ ಅಲ್ಲ ಎಂದು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಹಿರಿಯ ಶಾಸಕ ಅಭಯ ಪಾಟೀಲ ಪಕ್ಷದ ನಾಯಕರ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Jan 13, 2021, 6:33 PM IST