* ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣ* ಮತ್ತೊಂದು ಮಹತ್ವದ ನಿರ್ಧಾರ ಪ್ರಕಟಿಸಿದ ಬಿಜೆಪಿ ಶಾಸಕ ಅರವಿಂದ್* ಟ್ವಿಟ್ಟರ್‌ ಮೂಲಕ ಸ್ಪಷ್ಟನೆ

ಬೆಂಗಳೂರು, (ಜೂನ್.23): ನಾಯಕತ್ವ ಬದಲಾವಣೆ ಕೂಗಿನ ಮಧ್ಯೆ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರು ಫೋನ್ ಕದ್ದಾಲಿಕೆ ಬಾಂಬ್ ಸಿಡಿಸಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ.

ಇನ್ನು ಈ ಫೋನ್ ಕದ್ದಾಲಿಕೆ ಬಗ್ಗೆ ನೀಡಿರುವ ದೂರನ್ನ ವಾಪಸ್ ಪಡೆಯುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿರುವುದಕ್ಕೆ ಇದೀಗ ಸ್ವತಃ ಅರವಿಂದ ಬೆಲ್ಲದ್ ಸ್ಪಷ್ಟನೆ ಕೊಟ್ಟಿದ್ದಾರೆ. 

ಫೋನ್‌ ಕದ್ದಾಲಿಕೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಬೆಲ್ಲದ್‌ಗೆ ಕರೆ ಮಾಡಿದ್ದು ಯುವರಾಜ್‌ ಅಲ್ಲ!

ನನ್ನ ಫೋನ್ ಟ್ಯಾಪ್ ಆಗಿರುವುದರ ಬಗ್ಗೆ ಗೃಹ ಇಲಾಖೆಗೆ ಸಲ್ಲಿಸಿದ್ದ ದೂರಿನನ್ವಯ ತನಿಖೆ ನಡೆಯುತ್ತಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇನೆ ಎಂದಿದ್ದಾರೆ.

ಅಲ್ಲದೇ ಕೆಲವು ಮಾಧ್ಯಮಗಳಲ್ಲಿ ನಾನು ಕೊಟ್ಟಿದ್ದ ದೂರನ್ನು ಹಿಂದಕ್ಕೆ ಪಡೆಯುತ್ತಿದ್ದೇನೆ ಎಂಬ ಸುದ್ದಿಗಳು ಪ್ರಕಟವಾಗುತ್ತಿವೆ. ಅಂತಹ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ. ನನ್ನ ದೂರವಾಣಿ ಟ್ಯಾಪ್ ಆಗಿರುವ ಕುರಿತು ಸಂಪೂರ್ಣ ತನಿಖೆಯಾಗಿ ಸತ್ಯ ಹೊರಬರಬೇಕಿದೆ. ಹೀಗಾಗಿ ದೂರು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಟ್ವೀಟ್ ಮಾಡಿದ್ದಾರೆ.

Scroll to load tweet…

ನನ್ನ ದೂರವಾಣಿ ಕದ್ದಾಲಿಕೆ ಆಗುತ್ತಿದೆ. ದೂರವಾಣಿ ಕರೆ ಆಧರಿಸಿ ನನ್ನನ್ನು ಗಮನಿಸಲಾಗುತ್ತಿದೆ ಎಂದು ಗಂಭೀರ ಆರೋಪವನ್ನು ಮಾಡಿದ್ದರು. ಬಗ್ಗೆ ಶಾಸಕ ಬೆಲ್ಲದ್ ಗೃಹ ಇಲಾಖೆ, ಸ್ಪೀಕರ್‌ಗೆ ಅವರು ದೂರು ನೀಡಿದ್ದರು.