ಅಲ್ಪಸಂಖ್ಯಾತರ ವಿರುದ್ಧದ ಯತ್ನಾಳ್‌ ದ್ವೇಷ: ಸಿಎಂ ಸಿದ್ದರಾಮಯ್ಯ

ಹಾಶ್ಮೀ ಅವರೊಂದಿಗೆ ಬಹಳ ವರ್ಷಗಳಿಂದ ಸಂಬಂಧ ಇದೆ. ಯತ್ನಾಳ್ ಮಹಾ ಸುಳ್ಳುಗಾರ. ಹಾಶ್ಮೀ ಅವರ ಮೇಲಿನ ಆರೋಪ ಸಾಬೀತು ಮಾಡಲಿ. ಅವರದ್ದೇ ಸರ್ಕಾರ 10 ವರ್ಷಗಳಿಂದ ಇದೆ. ಇಷ್ಟು ವರ್ಷ ಏನು ಮಾಡುತ್ತಿದ್ದರು? ಬರೀ ಆರೋಪ ಮಾಡುವುದಲ್ಲ ಅದನ್ನು ಸಾಬೀತು ಮಾಡಲಿ ಎಂದು ಸವಾಲು ಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ

BJP MLA Basanagouda Patil Yatnal Hatred Against Minorities Says CM Siddaramaiah grg

ಬೆಳಗಾವಿ(ಡಿ.08):  ಯತ್ನಾಳ್ ದ್ವೇಷದ, ಅಲ್ಪಸಂಖ್ಯಾತರ ವಿರುದ್ಧದ ರಾಜಕಾರಣ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಹಾಶಿಮ್ ಪೀರಾ ದರ್ಗಾದ ಧರ್ಮಾಧಿಕಾರಿ ಸೈಯ್ಯದ್ ಮೊಹಮ್ಮದ್ ತನ್ವೀರ್ ಹಾಶ್ಮೀ ಮೌಲ್ವಿ ಜೊತೆಗೆ ವೇದಿಕೆ ಹಂಚಿಕೊಂಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಹಾಶ್ಮೀ ಅವರೊಂದಿಗೆ ಬಹಳ ವರ್ಷಗಳಿಂದ ಸಂಬಂಧ ಇದೆ. ಯತ್ನಾಳ್ ಮಹಾ ಸುಳ್ಳುಗಾರ. ಹಾಶ್ಮೀ ಅವರ ಮೇಲಿನ ಆರೋಪ ಸಾಬೀತು ಮಾಡಲಿ. ಅವರದ್ದೇ ಸರ್ಕಾರ 10 ವರ್ಷಗಳಿಂದ ಇದೆ. ಇಷ್ಟು ವರ್ಷ ಏನು ಮಾಡುತ್ತಿದ್ದರು? ಬರೀ ಆರೋಪ ಮಾಡುವುದಲ್ಲ ಅದನ್ನು ಸಾಬೀತು ಮಾಡಲಿ ಎಂದು ಸವಾಲು ಹಾಕಿದರು.

ವಿರೋಧ ಪಕ್ಷದ ನಾಯಕನ ಸ್ಥಾನ ಹಾಗೂ ಪಕ್ಷದ ಅಧ್ಯಕ್ಷರ ಸ್ಥಾನಕ್ಕೆ ಪ್ರಯತ್ನಿಸಿದ್ದರು. ಎರಡೂ ಸಿಕ್ಕದ ಕಾರಣ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು.

ಬೆಂಗಳೂರು ಸುತ್ತ 2500 ಎಕರೆ ಅರಣ್ಯ ಒತ್ತುವರಿ, ಇದರಿಂದಾಗಿ ಚಿರತೆ, ಆನೆ ದಾಳಿ, ಖಂಡ್ರೆ

ದಕ್ಷಿಣ ಭಾರತದಲ್ಲಿ ಬಿಜೆಪಿ ಇಲ್ಲ:

ದಕ್ಷಿಣ ಭಾರತದಲ್ಲಿ ಬಿಜೆಪಿ ವಿಸ್ತರಣೆಯಾಗುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ ದಕ್ಷಿಣ ಭಾರತದಲ್ಲಿ ಬಿಜೆಪಿ ವಿಸ್ತರಣೆ ಇರಲಿ, ಅದು ಇಲ್ಲವೇ ಇಲ್ಲ ಎಂದ ಅವರು, ಎಸ್ಸಿ ಎಸ್ಪಿ, ಟಿಎಸ್ಪಿ ಅನುದಾನ ಕಡಿಮೆ ಯಾಕಾಯಿತು. ಗೋವಿಂದ ಕಾರಜೋಳ ಅವರ ಎಸ್.ಸಿ.ಎಸ್.ಪಿ, ಟಿ. ಎಸ್.ಪಿ ಹಣ ಬೇರೆಡೆಗೆ ಉಪಯೋಗವಾಗುತ್ತಿರುವ ಆರೋಪಕ್ಕೆ ಉತ್ತರಿಸಿ, ಅವರು ಎಸ್.ಸಿ.ಎಸ್.ಪಿ, ಟಿ. ಎಸ್.ಪಿ ಅನುದಾನ ಅವರ ಕಾಲದಲ್ಲಿ ಯಾಕೆ ಕಡಿಮೆಯಾಯಿತು ಎಂದು ಉತ್ತರ ಕೊಡಬೇಕು. ನಾನು ಕಡೆ ಬಜೆಟ್ ಮಂಡಿಸಿದಾಗ ₹30 ಸಾವಿರ ಕೋಟಿ ಅನುದಾನವಿತ್ತು. ಇವರ ಕಾಲಕ್ಕೆ ₹25 ಸಾವಿರ ಕೋಟಿಯಾಗಿದೆ. ಯಾಕೆ ಆಯ್ತು ಎಂದು ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.

ಕಲಂ 7 ಡಿ ರದ್ದು ಮಾಡಿಲ್ಲವೆಂಬ ಆರೋಪಕ್ಕೆ ಉತ್ತರಿಸಿ ಬಜೆಟ್ ನಲ್ಲಿ ಘೋಷಣೆಯಾಗಿದೆ, ಇದನ್ನು ಮಾಡುತ್ತಿದ್ದೇವೆ ಎಂದರು. ಆದೇಶವನ್ನು ತಕ್ಷಣ ಹೊರಡಿಸಲಾಗುವುದು ಎಂದರು.

Latest Videos
Follow Us:
Download App:
  • android
  • ios