* ಮಾಜಿ ಸಚಿವ ಸಿ.ಎಂ. ಉದಾಸಿ ಆರೋಗ್ಯ ಸ್ಥಿತಿ ಗಂಭೀರ* ಬೆಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ* ಪುತ್ರ ಶಿವಕುಮಾರ್ ಉದಾಸಿ ಹೇಳಿಕೆ 

ಬೆಂಗಳೂರು, (ಮೇ.28): ಹಾನಗಲ್ ವಿಧಾನಸಭೆ ಕ್ಷೇತ್ರದ ಶಾಸಕ, ಬಿಜೆಪಿ ಹಿರಿಯ ನಾಯಕ ಸಿ.ಎಂ. ಉದಾಸಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. 

ಬೆಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ಅವರ ಆರೋಗ್ಯ ಗಂಭೀರವಾಗಿದೆ. ಈ ಬಗ್ಗೆ ಅವರ ಪುತ್ರ, ಸಂಸದ ಶಿವಕುಮಾರ್ ಉದಾಸಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಮಧುಮೇಹಿಗಳು ಕೊರೋನಾದಿಂದ ಬಚಾವಾಗೋದು ಹೇಗೆ? 

ಅನಾರೋಗ್ಯದ ಕಾರಣ ತಂದೆಯವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸುಧಾರಣೆಗಾಗಿ ನಮ್ಮೆಲ್ಲರ ಪ್ರಾರ್ಥನೆ ಅವರೊಂದಿಗೆ ಇರಲಿ ಎಂದಿದ್ದಾರೆ.

Scroll to load tweet…

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 77 ವರ್ಷದ ಉದಾಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.