ಸಿಡಿಯಲ್ಲಿದ್ದ ಲೇಡಿ ಮಾತಾಡಿದ ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಸಿಎಂ ರಾಜಕೀಯ ‌ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು, (ಮಾ.26): ಸಿ.ಡಿ ಲೇಡಿ ಆಡಿಯೋ ಬಹಿರಂಗ ಬೆನ್ನಲ್ಲೇ ಸರಣಿ ಟ್ವೀಟ್​​ ಮಾಡಿರುವ ಬಿಜೆಪಿ, ಡಿಕೆ ಶಿವಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿದೆ.

ಮತ್ತೊಂದೆಡೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸಹ ಟ್ವೀಟ್ ಮೂಲಕ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ. 

'ಡಿಕೆಶಿಯನ್ನು CD ಪ್ರಕರಣದಲ್ಲೂ ತಿಹಾರ್ ಜೈಲಿಗೆ ಕಳುಹಿಸಬೇಕಿದೆ'

ಇಡೀ ಪ್ರಕರಣದ ಬಗ್ಗೆ ತಮ್ಮದೇ ವಿಭಿನ್ನ ರೀತಿಯಲ್ಲಿ ಟ್ವೀಟ್ ಮಾಡಿರುವ ರೇಣುಕಾಚಾರ್ಯ, ಲೇಡಿ + ಸಿಡಿ = ಮತ್ತೊಮ್ಮೆ ಬೇಡಿ..!! #ಮಹಾನಾಯಕ ಎಂದು ಟ್ವೀಟ್​ ಮಾಡುವ ಮೂಲಕ ಕಾಂಗ್ರೆಸ್​ ನಾಯಕರಿಗೆ ನಯವಾಗಿ ತಿರುಗೇಟು ಕೊಟ್ಟಿದ್ದಾರೆ.

 ರಾಸಲೀಲೆ ಸಿ.ಡಿ. ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಾಗಿದೆ. ಇದರ ನಡುವೆಯೇ ಯುವತಿಯದ್ದು ಎನ್ನಲಾದ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ಈ ಆಡಿಯೋನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಮವಾಗಿದೆ. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚನ ಮೂಡಿಸಿದೆ.