ಗೋಪಾಲಕೃಷ್ಣ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗುವ ಬಗ್ಗೆ ಕಾಂಗ್ರೆಸ್‌ ನಾಯಕರೊಂದಿಗೆ ಚರ್ಚಿಸಿದ್ದು, ಶೀಘ್ರವೇ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗುವ ಸಾಧ್ಯತೆಯಿದೆ.

ಬೆಂಗಳೂರು(ಮಾ.28):  ಹಿರಿಯ ರಾಜಕಾರಣಿ, ಕೂಡ್ಲಗಿಯ ಬಿಜೆಪಿ ಹಾಲಿ ಶಾಸಕ ಎನ್‌.ವೈ. ಗೋಪಾಲಕೃಷ್ಣ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗುವ ಬಗ್ಗೆ ಕಾಂಗ್ರೆಸ್‌ ನಾಯಕರೊಂದಿಗೆ ಚರ್ಚಿಸಿದ್ದು, ಶೀಘ್ರವೇ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗುವ ಸಾಧ್ಯತೆಯಿದೆ.

ಮೊಳಕಾಲ್ಮೂರು, ಬಳ್ಳಾರಿ ಹಾಗೂ ಕೂಡ್ಲಗಿಯಿಂದ ಆರು ಬಾರಿ ವಿಧಾನಸಭೆ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು ಪ್ರಸ್ತುತ ಕೂಡ್ಲಗಿಯಿಂದ ಶಾಸಕರಾಗಿದ್ದಾರೆ. ಗೋಪಾಲಕೃಷ್ಣ ಅವರು ಸೋಮವಾರ ರಾತ್ರಿ ರಾಜಾನುಕುಂಟೆ ಸಮೀಪದ ರೆಸಾರ್ಚ್‌ ಒಂದರಲ್ಲಿ ಕಾಂಗ್ರೆಸ್‌ ನಾಯಕರನ್ನು ಭೇಟಿ ಮಾಡಿದ್ದರು.

ಟಿಪ್ಪು ಕುರಿತ ಬಿಜೆಪಿ ಸುಳ್ಳು ಇತಿಹಾಸಕಾರರಿಂದ ಬಯಲು: ಡಿಕೆಶಿ

ಎಐಸಿಸಿ ಪರಿಶೀಲನಾ ಸಮಿತಿ ಸಭೆ ವೇಳೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುರ್ಮಾ, ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ವಿಸ್ತೃತ ಚರ್ಚೆ ನಡೆಸಿದ್ದಾರೆ. ಈ ವೇಳೆ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನೂ ಚರ್ಚಿಸಿದ್ದು ಸದ್ಯದಲ್ಲೇ ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಬಳಿಕ ಕಾಂಗ್ರೆಸ್‌ ಸೇರ್ಪಡೆ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗೋಪಾಲಕೃಷ್ಣ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗುವ ಬಗ್ಗೆ ಕಾಂಗ್ರೆಸ್‌ ನಾಯಕರೊಂದಿಗೆ ಚರ್ಚಿಸಿದ್ದು, ಶೀಘ್ರವೇ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗುವ ಸಾಧ್ಯತೆಯಿದೆ.