ಸಿಡಿ ಶಿವಕುಮಾರನಿಂದ ಸರ್ಕಾರ ಹಾಳಾಗಿದೆ; ರಾಜ್ಯ ದಿವಾಳಿಯಾಗಿದೆ: ಡಿಕೆಶಿ ವಿರುದ್ಧ ಮತ್ತೆ ಹರಿಹಾಯ್ದ ರಮೇಶ್ ಜಾರಕಿಹೊಳಿ
ಸಿಡಿ ಶಿವಕುಮಾರ್‌ನಿಂದಾಗಿ ಸರ್ಕಾರ ಹಾಳಾಗಿದೆ. ರಾಜ್ಯ ದಿವಾಳಿಯಾಗಿದೆ. ಮುಖ್ಯಮಂತ್ರಿ ರಾಜೀನಾಮೆ ನೀಡಿ ಚುನಾವಣೆಗೆ ಹೋಗಲಿ ಎಂದು ಡಿಕೆ ಶಿವಕುಮಾರ, ಸಿಎಂ ಸಿದ್ದರಾಮಯ್ಯ ವಿರುದ್ಧ ಶಾಸಕ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದರು.
ಚಿಕ್ಕೋಡಿ (ಜು.29):ಸಿಡಿ ಶಿವಕುಮಾರ್‌ನಿಂದಾಗಿ ಸರ್ಕಾರ ಹಾಳಾಗಿದೆ. ರಾಜ್ಯ ದಿವಾಳಿಯಾಗಿದೆ. ಮುಖ್ಯಮಂತ್ರಿ ರಾಜೀನಾಮೆ ನೀಡಿ ಚುನಾವಣೆಗೆ ಹೋಗಲಿ ಎಂದು ಡಿಕೆ ಶಿವಕುಮಾರ, ಸಿಎಂ ಸಿದ್ದರಾಮಯ್ಯ ವಿರುದ್ಧ ಶಾಸಕ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದರು.
ಇಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದರೂರ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ರಾಜ್ಯ ಸರ್ಕಾರ ಸಂಪೂರ್ಣವಾಗಿ ದಿವಾಳಿಯಾಗಿದೆ. ಸರ್ಕಾರ ಮುಂದುವರಿಯಲು ಯಾವುದೇ ನೈತಿಕತೆ ಉಳಿದಿಲ್ಲ. ವಾಲ್ಮೀಕಿ ನಿಗಮ ಹಗರಣ, ಮುಡಾ ಹಗರಣದಲ್ಲಿ ಸರ್ಕಾರ ಮುಳುಗಿದೆ. ಸಿದ್ದರಾಮಯ್ಯ ಹಿಂದಿನ ಸಿದ್ದರಾಮಯ್ಯನಾಗಿ ರಾಜೀನಾಮೆ ನೀಡಬೇಕು. ನೈತಿಕತೆ ಇದ್ದರೆ ರಾಜೀನಾಮೆ ಕೊಟ್ಟು ಚುನಾವಣೆಗೆ ಹೋಗಲಿ ಹರಿಹಾಯ್ದರು.
ನಿರ್ಮಲಾ ಸೀತಾರಾಮನ್ ಅವರನ್ನು ಸಂಪುಟದಿಂದ ಕೈಬಿಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ
ಸಿದ್ದರಾಮಯ್ಯ ಒಳ್ಳೆಯವರು ಆದ್ರೆ ಕಂಟ್ರೋಲ್ ತಪ್ಪಿದ್ದಾರೆ ಇನ್ನೂ ಸುಧಾರಿಸಲು ಆಗಿಲ್ಲ. ಸಿಡಿ ಶಿವಕುಮಾರನಿಂದಾಗಿ ಸಿದ್ದರಾಮಯ್ಯ ಕಂಟ್ರೋಲ್ ತಪ್ಪಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣವಾಗಿದೆ. ಸಾಮೂಹಿಕ ನಾಯಕತ್ವದಲ್ಲಿ ಬಳ್ಳಾರಿಗೆ ಪಾದಯಾತ್ರೆ ಮಾಡುತ್ತೇವೆ. ಬಳ್ಳಾರಿ ಮುಖ್ಯವಾದ ವಿಷಯ, ಮುಡಾ ಹಗರಣ ಕುರಿತು ಹೋರಾಟ ನಡೆಯಲಿ. ಆದರೆ ಮುಡಾಗಿಂತಲೂ ಎಸ್‌ಟಿ ಹಣ ದುರ್ಬಳಕೆ ಪ್ರಕರಣ ನಮಗೆ ಮುಖ್ಯವಾಗಿದೆ. ಅದರ ವಿರುದ್ಧ ಹೋರಾಟ ನಡೆಸುತ್ತೇವೆ ಎಂದರು. ಇದೇ ವೇಳೆ ಬಿಜೆಪಿ ಪಕ್ಷ ಅಪ್ಪ ಮಕ್ಕಳ ಕಪಿಮುಷ್ಟಿಯಿಂದ ಹೊರ ಬರಬೇಕು ಅಂದ್ರೆ ಐತಿಹಾಸಿಕ ನಿರ್ಣಯ ಮಾಡಬೇಕು. ಈ ಕುರಿತು ಹೈಕಮಾಂಡಗೆ ಮನವಿ ಮಾಡುತ್ತೇವೆ ಎಂದು ಬಿಎಸ್ ಯಡಿಯೂರಪ್ಪ, ವಿಜಯೇಂದ್ರ ವಿರುದ್ಧವೂ ಕೆಂಡ ಕಾರಿದ ರಮೇಶ ಜಾರಕಿಹೊಳಿ.