Asianet Suvarna News Asianet Suvarna News

ನನ್ನ ಬಂಡಾಯಕ್ಕೆ ಸತೀಶ್‌ ಮೂಲಕ ಉತ್ತರ ಸಿಕ್ಕಿದೆ: ರಮೇಶ್‌ ಜಾರಕಿಹೊಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆದುಕೊಳ್ಳುವ ರೀತಿ ನೋಡಿದರೆ ಅವರು ಮೊದಲಿನಂತಿಲ್ಲ. ಹಾಗಾಗಿ, ಸಿದ್ದರಾಮಯ್ಯನವರಿಗೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಅವರ ಮಾತಿನ ದರ್ಪ, ಗಂಭೀರತೆ ಈಗ ಕಾಣುತ್ತಿಲ್ಲ. ಏಕೆ ಹೀಗೆ ಮಾಡುತ್ತಿದ್ದಾರೋ ಎಂಬುದು ನನಗೆ ಗೊತ್ತಿಲ್ಲ. ಸಿದ್ದರಾಮಯ್ಯ ಒಳ್ಳೆಯ ಮುಖ್ಯಮಂತ್ರಿ, ಅವರ ಬಗ್ಗೆ ಅಪಾರ ಗೌರವವಿದೆ. ಬಹುಶಃ ಹೈಕಮಾಂಡ್‌ ಹಾಗೂ ಕೆಲವರು ಅವರನ್ನು ಮುಕ್ತವಾಗಿ ಬಿಟ್ಟಿಲ್ಲ ಎಂದು ದೂರಿದ ರಮೇಶ್‌ ಜಾರಕಿಹೊಳಿ 

BJP MLA Ramesh Jarkiholi Talks over Minister Satish Jarkiholi Rebellion in Congress grg
Author
First Published Oct 25, 2023, 8:00 AM IST

ಬೆಳಗಾವಿ(ಅ.25):  ಈ ಹಿಂದೆ ನಾನು ಕಾಂಗ್ರೆಸ್‌ನಲ್ಲಿ ಬಂಡಾಯವೆದ್ದಾಗ ಜನ ನನ್ನನ್ನು ಬೈಯ್ದಿದ್ದರು. ನನ್ನನ್ನು ಬೈಯ್ದಿದ್ದವರಿಗೆ ಈಗ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಮೂಲಕ ಉತ್ತರ ಸಿಕ್ಕಿದೆ. ನಾನು ಏಕೆ ಬಂಡಾಯವೆದ್ದಿದ್ದೆ ಎಂಬುದು ಗೊತ್ತಾಗಿದೆ ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದರು.

ಅಥಣಿ ತಾಲೂಕಿನ ನಂದಗಾಂವದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವ ವೇಳೆಯೇ ಸತೀಶ್‌ ಜಾರಕಿಹೊಳಿ ಪರಿಸ್ಥಿತಿ ಈ ರೀತಿಯಾಗಿದೆ. ಇನ್ನು ಬೇರೆಯವರು ಮುಖ್ಯಮಂತ್ರಿಯಾದರೆ ಅವರ ಪರಿಸ್ಥಿತಿ ಏನು ಪ್ರಶ್ನಿಸಿದರು.

ಬೆಳಗಾವಿ ಪಾಲಿಕೆಯಲ್ಲಿ ಫೈಲ್‌ ಕಾಣೆ: ಪ್ರಕರಣ ದಾಖಲಿಸಲು ಸತೀಶ ಜಾರಕಿಹೊಳಿ ಸೂಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆದುಕೊಳ್ಳುವ ರೀತಿ ನೋಡಿದರೆ ಅವರು ಮೊದಲಿನಂತಿಲ್ಲ. ಹಾಗಾಗಿ, ಸಿದ್ದರಾಮಯ್ಯನವರಿಗೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಅವರ ಮಾತಿನ ದರ್ಪ, ಗಂಭೀರತೆ ಈಗ ಕಾಣುತ್ತಿಲ್ಲ. ಏಕೆ ಹೀಗೆ ಮಾಡುತ್ತಿದ್ದಾರೋ ಎಂಬುದು ನನಗೆ ಗೊತ್ತಿಲ್ಲ. ಸಿದ್ದರಾಮಯ್ಯ ಒಳ್ಳೆಯ ಮುಖ್ಯಮಂತ್ರಿ, ಅವರ ಬಗ್ಗೆ ಅಪಾರ ಗೌರವವಿದೆ. ಬಹುಶಃ ಹೈಕಮಾಂಡ್‌ ಹಾಗೂ ಕೆಲವರು ಅವರನ್ನು ಮುಕ್ತವಾಗಿ ಬಿಟ್ಟಿಲ್ಲ ಎಂದು ದೂರಿದರು. ಡಿಸಿಎಂ ಡಿ.ಕೆ.ಶಿವಕುಮಾರ ಇರುವವರೆಗೂ ನಮಗೆ ಪ್ರತಿಪಕ್ಷವಾಗಿ ವರದಾನ ಎಂದು ಇದೇ ವೇಳೆ ತಿಳಿಸಿದರು.

ಶೆಟ್ಟರ್‌ ಭೇಟಿಯಾಗಿದ್ದು ನಿಜ: 

ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್‌ ಅವರನ್ನು ಭೇಟಿಯಾಗಿದ್ದು ನಿಜ. ಅವರು ಎಲ್ಲೇ ಇದ್ದರೂ ನಮ್ಮ ಹಿರಿಯರು. ಅವರ ಬಗ್ಗೆ ಗೌರವ ಇದೆ. ಜಗದೀಶ್ ಶೆಟ್ಟರ್ ಭೇಟಿ ಹಿಂದೆ ರಾಜಕಾರಣ ಇಲ್ಲ ಎಂದು ಈ ಸಂದರ್ಭದಲ್ಲಿ ರಮೇಶ್‌ ಜಾರಕಿಹೊಳಿ ಸ್ಪಷ್ಟಪಡಿಸಿದರು.

Follow Us:
Download App:
  • android
  • ios