ಯಲಹಂಕ ಕ್ಷೇತ್ರದ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಅವರಿಗೆ ಮತ್ತೊಂದು ಮಹತ್ವದ ಹುದ್ದೆ ನೀಡಲಾಗಿದೆ.

ಬೆಂಗಳೂರು, (ನ.24): ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾಯ್ದೆ 1976 ಕಲಂ 3(4)ರ ಅಡಿ ಈ ನೇಮಕ ಮಾಡಲಾಗಿದೆ. ಅಧ್ಯಕ್ಷರಾಗಿದ್ದ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅವರ ನೇಮಕಾತಿ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ, ವಿಶ್ವನಾಥ್ ಅವರನ್ನು ನೇಮಕ ಮಾಡಲಾಗಿದೆ.

BJP ಸಭೆಯಲ್ಲಿ ಕಾಂಗ್ರೆಸ್ ನಾಯಕ, ಚಂಡಮಾರುತ ಭೀತಿಯಲ್ಲಿ ಕರ್ನಾಟಕ; ನ.24ರ ಟಾಪ್ 10 ಸುದ್ದಿ!

ಯಲಹಂಕ ಕ್ಷೇತ್ರದ ಶಾಸಕರಾಗಿರುವ ಎಸ್.ಆರ್.ವಿಶ್ವನಾಥ್ ಅವರು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಆಗಿದ್ದು, ಇದೀಗ ಬಿಡಿಎ ಅಧ್ಯಕ್ಷರಾಗಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ವಿಶ್ವನಾಥ್ ಅವರಿಗೆ ಸಂಪುಟ ವಿಸ್ತರಣೆಗೂ ಮುನ್ನವೇ ಬಿಡಿಎ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಸಮಧಾನ ಮಾಡುವ ಯತ್ನ ಇದಾಗಿದೆ ಎನ್ನಲಾಗಿದೆ.

ಯಲಹಂಕ ಕ್ಷೇತ್ರದ ಶಾಸಕನಾಗಿರುವ ನನ್ನನ್ನು ಅಧಿಕೃತವಾಗಿ ಇಂದು "ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ" ಕ್ಕೆ ಅಧ್ಯಕ್ಷರನ್ನಾಗಿ ( Chairman, BDA )...

Posted by SR Vishwanath on Tuesday, November 24, 2020