ನಾನು ಸಿದ್ದು ಶಿಷ್ಯ, ಅವರು ನಮ್ಮ ನೆಚ್ಚಿನ ನಾಯಕರು: ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್
ನಾನು ಸಿದ್ದರಾಮಯ್ಯ ಅವರ ಶಿಷ್ಯ. ಅವರು ನಮ್ಮ ನೆಚ್ಚಿನ ನಾಯಕರು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಬೆಂಗಳೂರು (ಜು.03): ನಾನು ಸಿದ್ದರಾಮಯ್ಯ ಅವರ ಶಿಷ್ಯ. ಅವರು ನಮ್ಮ ನೆಚ್ಚಿನ ನಾಯಕರು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಭಾನುವಾರ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿದ್ದ ಸಿದ್ದರಾಮಯ್ಯ ಅವರತ್ತ ನೋಡಿ ಮಾತನಾಡಿದ ಸೋಮಶೇಖರ್, ಸಿದ್ದರಾಮಯ್ಯ ಅವರ ಸರ್ಕಾರ ನೀಡಿದ ಅನುದಾನ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಂದ ನಾನು ಎರಡನೇ ಬಾರಿ ಶಾಸಕನಾಗಿ ಆಯ್ಕೆಯಾದೆ ಎಂದರು.
ಸಿದ್ದರಾಮಯ್ಯ ಅವರು ನಮ್ಮ ನೆಚ್ಚಿನ ನಾಯಕರು. 2013-18ರ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ನನ್ನ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸಾವಿರಾರು ಕೋಟಿ ರು. ಅನುದಾನ ನೀಡಿದರು. ನನ್ನ ಕ್ಷೇತ್ರದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಿದರು. ಅವರು ನೀಡಿದ ಅನುದಾನ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಂದ ನಾನು ಎರಡನೇ ಬಾರಿ ಶಾಸಕನಾಗಿ ಆಯ್ಕೆಯಾದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವತ್ತೂ ದ್ವೇಷ ರಾಜಕಾರಣ ಮಾಡಲಿಲ್ಲ. ಅವರ ಶಿಷ್ಯನಾಗಿ ಹಾಗೂ ಅಭಿಮಾನಿಯಾಗಿ ಶಾಖಾಮಠದ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನೂ ನೀಡುತ್ತೇನೆ ಎಂದು ಘೋಷಿಸಿದರು.
ಹಣ ಮಾಡಲು ರಾಜಕೀಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿಲ್ಲ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ವಿದ್ಯಾವಂತರಲ್ಲೇ ಜಾತಿ ತಾರತಮ್ಯ, ಮೌಢ್ಯ ಹೆಚ್ಚು: ವಚನಕಾರರ ಆಶಯ ಇಂದಿಗೂ ಈಡೇರಿಲ್ಲ. ವಿದ್ಯಾವಂತರಲ್ಲೇ ಜಾತಿ ತಾರತಮ್ಯ, ಮೌಢ್ಯಗಳು ಹೆಚ್ಚುತ್ತಿದೆ. ಜಾತಿ ವ್ಯವಸ್ಥೆ ತೊಡೆದುಹಾಕಿ ಸಮಸಮಾಜ ನಿರ್ಮಾಣಕ್ಕೆ ನಿರಂತರ ಪ್ರಯತ್ನಗಳು ನಡೆಯುತ್ತಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಭಾನುವಾರ ಸಾಣೇಹಳ್ಳಿಯ ತರಳಬಾಳು ಶಾಖಾಮಠದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರು ಆಯೋಜಿಸಿದ್ದ ‘ನೀನಲ್ಲದೆ ಮತ್ತಾರೂ ಇಲ್ಲವಯ್ಯಾ’ ಎಂಬ ದೇಶದ ಪ್ರಥಮ ವಚನ ಸಾಂಸ್ಕೃತಿಕ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ಬಸವಣ್ಣನವರು ಕನಸು ಕಂಡಿದ್ದ ಸಮ ಸಮಾಜ ನಿರ್ಮಾಣ ಆಗಬೇಕು.
ಕಾಯಕ ಮತ್ತು ದಾಸೋಹ ಮೌಲ್ಯಗಳು ಹೆಚ್ಚಬೇಕು. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ವಿತರಣೆ. ಹೀಗೆ ಸಮಾಜದ ಉತ್ಪಾದನೆ, ಸಮಾಜದ ಎಲ್ಲರಿಗೂ ವಿತರಣೆ ಆಗಬೇಕು ಎನ್ನುವುದು ಬಸವಣ್ಣನವರ ಆಶಯವಾಗಿತ್ತು. ಬಸವಾದಿ ಶರಣರ ಅನುಭವ ಮಂಟಪ ರಚಿಸಿದ್ದೇ ಈ ಕಾರಣಕ್ಕೆ. ವಚನಕಾರರ ಆಶಯ ನಮ್ಮ ಸರ್ಕಾರದ ಆಶಯವೂ ಆಗಿದೆ ಎಂದರು. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಮಾತನಾಡಿ, 14 ರಾಜ್ಯಗಳಲ್ಲಿ ಸಂಚರಿಸಿ ವಚನಗಳ ಸಾರವನ್ನು ಪಸರಿಸುವ ಪಂಡಿತಾರಾಧ್ಯ ಸ್ವಾಮೀಜಿ ಅವರ ಕೈಂಕರ್ಯಕ್ಕೆ ಸರ್ಕಾರ ಯಾವ ರೀತಿ ಸಹಕಾರ ನೀಡಬಹುದು ಎಂಬ ಬಗ್ಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಹೇಳಿದರು.
ಸೈಬರ್ ಕ್ರೈಂ ಹಾಗೂ ಫೇಕ್ ನ್ಯೂಸ್ ತಡೆಗಟ್ಟಲು ರೂಪುರೇಷೆಗೆ ಸಿದ್ಧತೆ: ಸಚಿವ ಪರಮೇಶ್ವರ್
ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮಾತನಾಡಿ, ಸಂಸ್ಕೃತದ ಪ್ರಾಬಲ್ಯದಿಂದ ಕೂಡಿದ್ದ 12ನೇ ಶತಮಾನದಲ್ಲಿ ಬಸವಣ್ಣನವರು ಕನ್ನಡವನ್ನು ಬಳಸುವ ಮೂಲಕ ಲಿಂಗಾಯತ ಧರ್ಮಕ್ಕೆ ಹೊಸ ಭಾಷ್ಯವನ್ನೇ ಬರೆದರು. ಆ ಆದರ್ಶ ಒಂಬೈನೂರು ವರ್ಷಗಳ ನಂತರವೂ ಕರ್ನಾಟಕವನ್ನು ಮುನ್ನಡೆಸುತ್ತಿದೆ. ಎಂ.ಎಂ.ಕಲಬುರ್ಗಿ ಅವರು ಬಸವಣ್ಣನವರು ದೇವರೊಂದಿಗೆ ಕನ್ನಡದಲ್ಲಿ ಮಾತನಾಡಿದ ಮಹಾನುಭಾವ ಎಂದು ಹೇಳುತ್ತಿದ್ದರು. ಇದರಂತೆ ಈ ನೃತ್ಯ ರೂಪಕವು ಕನ್ನಡೇತರ ಭಾಷೆಯಲ್ಲಿ ಮೈದಾಳಿರುವುದು ವಚನ ಸಾಹಿತ್ಯದ ಕಿರೀಟಕ್ಕೆ ಇನ್ನೊಂದು ಗರಿಯಾಗಿದೆ ಎಂದರು.