ಲೋಕಸಭೆಗೆ ಸ್ಪರ್ಧಿಸುವ ಹುಚ್ಚಿಲ್ಲ: ಶಾಸಕ ಎಸ್‌.ಟಿ.ಸೋಮಶೇಖರ್‌

ನಾನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಮಗನನ್ನು ರಾಜಕೀಯಕ್ಕೆ ಕರೆತರುವ ಇಚ್ಛೆಯೂ ಇಲ್ಲ ಎಂದು ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್‌.ಟಿ.ಸೋಮಶೇಖರ್‌ ಸ್ಪಷ್ಟಪಡಿಸಿದ್ದಾರೆ. 

BJP Mla ST Somashekhar Talks Over Lok Sabha Election gvd

ಬೆಂಗಳೂರು (ಆ.25): ನಾನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಮಗನನ್ನು ರಾಜಕೀಯಕ್ಕೆ ಕರೆತರುವ ಇಚ್ಛೆಯೂ ಇಲ್ಲ ಎಂದು ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್‌.ಟಿ.ಸೋಮಶೇಖರ್‌ ಸ್ಪಷ್ಟಪಡಿಸಿದ್ದಾರೆ. ದೆಹಲಿಗೆ ಬರುವಂತೆ ಸೂಚನೆ ಬಂದ ತಕ್ಷಣ ವರಿಷ್ಠರ ಭೇಟಿಗೆ ತೆರಳುತ್ತೇನೆ ಎಂದೂ ಅವರು ತಿಳಿಸಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಹುಚ್ಚು ಇಲ್ಲ. ನನ್ನ ಮಗನನ್ನು ರಾಜಕೀಯಕ್ಕೆ ತರುವ ಇಚ್ಛೆ ಇಲ್ಲ. ಒಂದು ವೇಳೆ ನಾನು ಹಾಗೆ ಮಾಡಿದಾಗ ನೀವೇ ಪ್ರಶ್ನಿಸಿ ಎಂದರು.

ನನ್ನ ಕ್ಷೇತ್ರದಲ್ಲಿ ಈಗ ಉಚ್ಚಾಟನೆ ಮಾಡಿದ ಮುಖಂಡರ ತಂಡವು ಚುನಾವಣೆ ಪೂರ್ವದಲ್ಲಿ ನನಗೆ ಟಿಕೆಟ್‌ ತಪ್ಪಿಸಲು ಸಂಚು ಮಾಡಿತ್ತು. ಈಗ ಚುನಾವಣೆ ಮುಗಿದ ಬಳಿಕವೂ ನನ್ನ ವಿರುದ್ಧ ಕೆಲಸ ಮುಂದುವರೆಸಿದೆ. ನಾವು ಬಿಜೆಪಿಗೆ ಬಂದಾಗ ತಿಳಿ ವಾತಾವರಣವಿತ್ತು. ಬಿಜೆಪಿಗೆ ಬಂದ ಬಳಿಕ ನಾವು ಪಕ್ಷ ಹಾಗೂ ಸರ್ಕಾರದ ಕೆಲಸ ಮಾಡಿದ್ದೇವೆ. ಎಲ್ಲ ಕೆಲಸಗಳಲ್ಲೂ ಸಂಶಯಪಟ್ಟರೆ ಹೇಗೆ? ನನ್ನ ವಿರುದ್ಧ ಸಂಶಯಪಡುವುದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.

ಇಸ್ರೋ ವಿಜ್ಞಾನಿಗಳ ಭೇಟಿಗೆ ಶನಿವಾರ ಬೆಂಗಳೂರಿಗೆ ಪ್ರಧಾನಿ ಮೋದಿ: 1 ಕಿಮೀ ರೋಡ್​ ಶೋ

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕೇವಲ ನನ್ನ ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ಗೆ ಹೋಗಿಲ್ಲ. ರಾಜರಾಜೇಶ್ವರಿನಗರ ಕ್ಷೇತ್ರ, ಕೆ.ಆರ್‌.ಪುರ ಕ್ಷೇತ್ರಗಳಲ್ಲಿಯೂ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್‌ಗೆ ಹೋಗಿದ್ದಾರೆ. ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಗೆಲ್ಲುವ ದೃಷ್ಟಿಯಿಂದ ಕಾಂಗ್ರೆಸ್‌ನವರು ಆಪರೇಟ್‌ ಮಾಡುತ್ತಿದ್ದಾರೆ. ಇದು ಎಲ್ಲ ಕ್ಷೇತ್ರಗಳಲ್ಲಿಯೂ ನಡೆಯುತ್ತಿದೆ ಎಂದು ಹೇಳಿದರು. ಕ್ಷೇತ್ರದಲ್ಲಿ ಸಾವಿರಾರು ಕಾರ್ಯಕರ್ತರು ಇರುತ್ತಾರೆ. 10-15 ಜನ ಬೇರೆ ಪಕ್ಷಕ್ಕೆ ಹೋದರೆ ಯಾವುದೇ ಸಮಸ್ಯೆಯಿಲ್ಲ. 

ಗೊಲ್ಲರಹಟ್ಟಿಯಲ್ಲಿ ಮರುಕಳಿಸಿದ ಮೌಢ್ಯಾಚರಣೆ: ಊರಿಂದ ಹೊರಗಿಟ್ಟಿದ್ದ ಬಾಣಂತಿ, ಹಸುಗೂಸು ರಕ್ಷಿಸಿದ ಜಡ್ಜ್‌

ಬೇರೆ ಪಕ್ಷದವರು ಕ್ಷೇತ್ರದಲ್ಲಿ ಏನು ಬೇಕಾದರೂ ಮಾಡಲಿ. ಯಾವುದೇ ಸಭೆ ಮಾಡಿದರೂ ತೊಂದರೆ ಇಲ್ಲ. ನಾನು ಸಹ ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಕಾರ್ಯಕರ್ತರ ಸಭೆ ಮಾಡುತ್ತಿದ್ದೇನೆ. ಗ್ರಾಮ ಪಂಚಾಯಿತಿ, ವಾರ್ಡ್‌ವಾರು ಸಭೆ ಮಾಡುತ್ತಿದ್ದೇನೆ. ಕಾರ್ಯಕರ್ತರಲ್ಲಿ ಧೈರ್ಯ ತುಂಬುತ್ತಿದ್ದೇನೆ ಎಂದು ಪ್ರತಿಕ್ರಿಯಿಸಿದರು. ಎರಡು ದಿನದ ಹಿಂದೆ ದೆಹಲಿಗೆ ಬರುವಂತೆ ಸಂದೇಶ ಬಂದಿತ್ತು. ಈಗ ಅದಕ್ಕಾಗಿ ಕಾಯುತ್ತಿದ್ದೇನೆ. ಮತ್ತೆ ಸಂದೇಶ ಬಂದರೆ, ದೆಹಲಿಗೆ ಹೋಗುತ್ತೇನೆ ಎಂದು ಸೋಮಶೇಖರ್‌ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Latest Videos
Follow Us:
Download App:
  • android
  • ios