ಬಿಜೆಪಿ ಸರ್ಕಾರದಲ್ಲಿ ಸೋಮಶೇಖರ್‌ ದೊಡ್ಡ ಫಲಾನುಭವಿಯಾಗಿದ್ದರು: ಯೋಗೇಶ್ವರ್‌

ಮಾಜಿ ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಹಿಂದಿನ ಬಿಜೆಪಿ ಸರ್ಕಾರದಲ್ಲಿ ದೊಡ್ಡ ಫಲಾನುಭವಿಯಾಗಿದ್ದರು. ಈಗ ಅಧಿಕಾರ ಇಲ್ಲ ಎಂದು ಬಿಜೆಪಿ-ಜೆಡಿಎಸ್‌ ಮೈತ್ರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಆರೋಪಿಸಿದ್ದಾರೆ.
 

BJP MLC CP Yogeshwar Slams On ST Somashekhar At Channapatna gvd

ಚನ್ನಪಟ್ಟಣ (ಅ.09): ಮಾಜಿ ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಹಿಂದಿನ ಬಿಜೆಪಿ ಸರ್ಕಾರದಲ್ಲಿ ದೊಡ್ಡ ಫಲಾನುಭವಿಯಾಗಿದ್ದರು. ಈಗ ಅಧಿಕಾರ ಇಲ್ಲ ಎಂದು ಬಿಜೆಪಿ-ಜೆಡಿಎಸ್‌ ಮೈತ್ರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಆರೋಪಿಸಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿಗೆ ಶಾಸಕ ಎಸ್.ಟಿ.ಸೋಮಶೇಖರ್ ವಿರೋಧ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಬಿಜೆಪಿಯಲ್ಲಿ ದೊಡ್ಡ ಫಲಾನುಭವಿ. ಬಿಜೆಪಿಗೆ ಬಂದ ಮೇಲೆ ಬಿಡಿಎ ಅಧ್ಯಕ್ಷರಾದರು. ಮಂತ್ರಿ ಆಗಿ ಪ್ರಬಲ ಖಾತೆ ಪಡೆದು ಅಧಿಕಾರ ಅನುಭವಿಸಿದರು. 

ಇವತ್ತು ಅಧಿಕಾರ ಇಲ್ಲ ಅಂತ ಹೀಗೆ ಮಾತನಾಡುತ್ತಾರೆ. ಡಿ.ಕೆ.ಶಿವಕುಮಾರ್ ಜೊತೆಗೆ ಸಂಬಂಧ ಇಟ್ಕೊಂಡು ನಮ್ಮ ಪಕ್ಷವನ್ನು ಟೀಕಿಸುತ್ತಿದ್ದಾರೆ. ಮೈತ್ರಿ ವಿಚಾರ ಚರ್ಚೆಗೂ ಮೊದಲೂ ಟೀಕೆ ಮಾಡುತ್ತಿದ್ದರು. ಈಗಲೂ ಟೀಕೆ ಮಾಡುತ್ತಿದ್ದಾರೆ. ಅವರು ಪಕ್ಷದಿಂದ ಹೊರಹೋಗುವ ತೀರ್ಮಾನ ಮಾಡಿದರೆ ನಮ್ಮ ಅಭ್ಯಂತರವಿಲ್ಲ. ಬಹುಶಃ ಎಂಎಲ್‌ಎ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೆ ಮಾಜಿ ಶಾಸಕ ಆಗಬಹುದು. ಇನ್ನೇನು ಆಗಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದರು.

ಜಾತಿ ಆಧಾರದ ಮೇಲೆಯೇ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ: ಎಚ್.ಡಿ.ಕುಮಾರಸ್ವಾಮಿ

ರಾಜಕೀಯದಲ್ಲಿ ಈಗಷ್ಟೇ ಕಣ್ಣು ಬಿಟ್ಟಿರುವ ಇಕ್ಬಾಲ್: ಇಕ್ಬಾಲ್ ಹುಸೇನ್ ಈಗ ರಾಜಕೀಯವಾಗಿ ಕಣ್ಣುಬಿಟ್ಟಿದ್ದಾರೆ. ನಾನು ಕಾಂಗ್ರೆಸ್‌ಗೆ ಬಂದರೆ ಇನ್ನೊಂದು ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಬಹುದು ಎಂದು ಅವರು ಆ ರೀತಿ ಹೇಳಿಕೆ ನೀಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಯೋಗೇಶ್ವರ್ ಅವರು, ರಾಮನಗರರ ಶಾಸಕ ಇಕ್ಬಾಲ್ ಹುಸೇನ್‌ಗೆ ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರದು ಕುಚೋದ್ಯದ ಮಾತು. ಆ ರೀತಿ ಏನು ಆಗುವುದಿಲ್ಲ ಎಂದು ಶಾಸಕ ಇಕ್ಬಾಲ್ ಹುಸೇನ್ ಯೋಗೇಶ್ವರ್‌ ಕಾಂಗ್ರೆಸ್‌ಗೆ ಬರ್ತಾರೆಂಬ ಹೇಳಿಕೆಗೆ ಮೇಲಿನಂತೆ ಪ್ರತಿಕ್ರಿಯಿಸಿದರು.

ಮೈತ್ರಿ ನಂತರ ಕುಮಾರಸ್ವಾಮಿ- ಯೋಗೇಶ್ವರ್ ಭೇಟಿ ಕುರಿತು ಪ್ರತಿಕ್ರಿಯಿಸಿ, ಮೈತ್ರಿ ನಂತರ ವೈಯಕ್ತಿಕವಾಗಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿಲ್ಲ. ಒಂದು ಸಲ ಪೋನಲ್ಲಿ ಮಾತಾಡಿದ್ದೇನೆ. ಭಾನುವಾರ ಚನ್ನಪಟ್ಟಣ ತಾಲೂಕು ಬಿಜೆಪಿ ಮುಖಂಡರ ಸಭೆ ನಡೆಸಿದೆ. ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದ ಸಭೆ ನಡೆಸಲಾಗುವುದು. ಎರಡು ತಿಂಗಳ ನಂತರ ಎರಡು ಪಕ್ಷದ ನಾಯಕರು ಮುಖಂಡರು ಸೇರಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ನಡೆಸುತ್ತೇವೆ ಎಂದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾವ ಪಕ್ಷದ ಅಭ್ಯರ್ಥಿ ಸ್ಪರ್ಧೆ ಮಾಡಬೇಕು ಎಂದು ಎರಡು ಪಕ್ಷದ ನಾಯಕರು ಚರ್ಚೆ ಮಾಡುತ್ತಾರೆ. ಪಕ್ಷ ತೀರ್ಮಾನ ಮಾಡಿದರೆ ಸ್ಪರ್ಧಿಸುತ್ತೇನೆ. ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವುದೇ ನಮ್ಮ ಗುರಿ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ- ಜೆಡಿಎಸ್‌ಗೆ ತನ್ನದೇ ಆದ ಮತಗಳಿವೆ. ಎರಡು ಪಕ್ಷದ ಅಭ್ಯರ್ಥಿಗಳು ಒಟ್ಟಾಗಿ ಕೆಲಸ ಮಾಡಿದರೆ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಭೆಯಲ್ಲಿ ನಮ್ಮ ರಾಷ್ಟೀಯ ನಾಯಕರು ತೆಗೆದುಕೊಂಡಿರುವ ನಿರ್ಧಾರ ತಿಳಿಸಿ, ಮೈತ್ರಿ ಅನಿವಾರ್ಯತೆ ಕುರಿತು ಕಾರ್ಯಕರ್ತರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದರು.

ಶಿಕ್ಷಣ-ಆರೋಗ್ಯ ಕ್ಷೇತ್ರಕ್ಕೆ ಕ್ರೈಸ್ತರ ಕೊಡುಗೆ ಅನನ್ಯ: ಡಿ.ಕೆ.ಶಿವಕುಮಾರ್

ಜೆಡಿಎಸ್ ಜೊತೆ ನೇರಾನೇರಾ ಹೋರಾಟ ನಡೆಸಿದ ಕಾರ್ಯಕರ್ತರು ಒಪ್ಪುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿ, ನೂರಕ್ಕೆ ನೂರು ಪರ್ಸೆಂಟ್ ಕಾರ್ಯಕರ್ತರು ಒಪ್ಪಿದ್ದಾರೆ. ನಮ್ಮ ಹಾಗೂ ಜೆಡಿಎಸ್‌ ಜಗಳದ ಲಾಭವನ್ನು ಕಾಂಗ್ರೆಸ್ ಪಡೆದುಕೊಂಡಿದೆ. ಲೋಕಸಭೆ ಚುನಾವಣೆಯಲ್ಲಿ ಆ ತಪ್ಪು ಆಗಬಾರದು. ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಿ ಮಾಡಬೇಕು. ಹಾಗಾಗಿ ಹೊಂದಾಣಿಕೆ ಅನಿವಾರ್ಯ. ರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಎರಡು ಒಗ್ಗೂಡಿ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಲಿದೆ ಎಂದು ಹೇಳಿದರು.

Latest Videos
Follow Us:
Download App:
  • android
  • ios