ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ 136 ಶಾಸಕರು ಇದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾ‌ರ್ ಅವರಂತಹ ಪ್ರಬಲ ನಾಯಕರು ಇದ್ದಾರೆ. ಈಗ ಯೋಗೇಶ್ವರ್ ಕಾಂಗ್ರೆಸ್‌ಗೆ ಹೋಗಿರುವುದನ್ನು ನೋಡಿದರೆ, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ದುರ್ಬಲ ಎಂಬುದನ್ನು ಕಾಂಗ್ರೆಸ್‌ ನಾಯಕರೇ ಒಪ್ಪಿಕೊಂಡಂತಾಗಿದೆ ಎಂದ ಬಿಜೆಪಿ ನಾಯಕ ಸಿ.ಟಿ.ರವಿ 

ಬೆಂಗಳೂರು(ಅ.24): ಸಿ.ಪಿ.ಯೋಗೇಶ್ವರ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷ ದುರ್ಬಲ ಎಂಬುದನ್ನು ಒಪ್ಪಿಕೊಂಡಿದೆ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ 136 ಶಾಸಕರು ಇದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾ‌ರ್ ಅವರಂತಹ ಪ್ರಬಲ ನಾಯಕರು ಇದ್ದಾರೆ. ಈಗ ಯೋಗೇಶ್ವರ್ ಕಾಂಗ್ರೆಸ್‌ಗೆ ಹೋಗಿರುವುದನ್ನು ನೋಡಿದರೆ, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ದುರ್ಬಲ ಎಂಬುದನ್ನು ಕಾಂಗ್ರೆಸ್‌ ನಾಯಕರೇ ಒಪ್ಪಿಕೊಂಡಂತಾಗಿದೆ ಎಂದರು. 

ನಿನ್ನೆ-ಮೊನ್ನೆಯವರೆಗೂ ನಾನೇ ಅಭ್ಯರ್ಥಿ ಎಂದು ಶಿವಕುಮಾ‌ರ್ ಹೇಳುತ್ತಿದ್ದರು. ಡಿ.ಕೆ.ಸುರೇಶ್ ಅಭ್ಯರ್ಥಿ ಎಂದು ಬಹಳ ಜನ ಅಂದು ಕೊಂಡಿದ್ದರು ಎಂದರು.