ಲಕ್ಷ್ಮೀ ವೈದ್ಯರಲ್ಲ, ಗಾಯ ಜಗತ್ತೇ ನೋಡಿದೆ: ಸಿ.ಟಿ. ರವಿ

ತಲೆಗೆ ಗಾಯದ ಬಳಿಕವೂ 3-4 ಗಂಟೆ ಚಿಕಿತ್ಸೆ ಕೊಡಿಸಲಿಲ್ಲ. ಪಕ್ಕೆ, ಬೆನ್ನಿನಲ್ಲಿ 3-4 ಗುರುತುಗಳು ಇನ್ನೂ ಇವೆ. ಓರ್ವ ಶಾಸಕನಿಗೆ ಸುತ್ತಾಡಿಸಿದ್ದು, ಹಿಂಸೆ ಕೊಟ್ಟಿದ್ದನ್ನು ಆ ಮಹಾತಾಯಿ ಹೇಗೆ ಒಪ್ಪಿಕೊಳ್ತಾರೆ. ತಪ್ಪು ಮುಚ್ಚಿಕೊಳ್ಳಲು ಆ ತಾಯಿ ಸುಳ್ಳುಗಳ ಸರಮಾಲೆ ಹೆಣೆದಿದ್ದಾರೆ ಎಂದ ವಿಧಾನ ಪರಿಷತ್‌ ಸದಸ್ಯ ಸಿ. ಟಿ.ರವಿ
 

BJP MLC CT Ravi React to Minister Lakshmi Hebbalkar grg

ಚಿಕ್ಕಮಗಳೂರು(ಡಿ.24):  ಸಿ.ಟಿ. ರವಿ ಅವರಿಗೆ ಏನೂ ಆಗಿಲ್ಲ, ತಲೆಗೆ ಗಾಯವಾಗಿ ಎಷ್ಟು ಹೊಲಿಗೆ ಬಿದ್ದಿದೆ ಎಂದು ಲಕ್ಷ್ಮೀ ಹೆಬ್ಬಾಳರ್ ಕೇಳಿರುವುದಕ್ಕೆ ಪ್ರತಿಕ್ರಿಯಿಸಿರುವ ವಿಧಾನ ಪರಿಷತ್‌ ಸದಸ್ಯ ಸಿ. ಟಿ.ರವಿ, ಅವರೇನು ವೈದ್ಯರಲ್ಲ. ಗಾಯ, ರಕ್ತ ಜಗತ್ತೇ ನೋಡಿದೆ ಎಂದು ತಿರುಗೇಟು ನೀಡಿದ್ದಾರೆ. 

ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ತಲೆಗೆ ಗಾಯದ ಬಳಿಕವೂ 3-4 ಗಂಟೆ ಚಿಕಿತ್ಸೆ ಕೊಡಿಸಲಿಲ್ಲ. ಪಕ್ಕೆ, ಬೆನ್ನಿನಲ್ಲಿ 3-4 ಗುರುತುಗಳು ಇನ್ನೂ ಇವೆ. ಓರ್ವ ಶಾಸಕನಿಗೆ ಸುತ್ತಾಡಿಸಿದ್ದು, ಹಿಂಸೆ ಕೊಟ್ಟಿದ್ದನ್ನು ಆ ಮಹಾತಾಯಿ ಹೇಗೆ ಒಪ್ಪಿಕೊಳ್ತಾರೆ. ತಪ್ಪು ಮುಚ್ಚಿಕೊಳ್ಳಲು ಆ ತಾಯಿ ಸುಳ್ಳುಗಳ ಸರಮಾಲೆ ಹೆಣೆದಿದ್ದಾರೆ ಎಂದರು.

ಸಿ.ಟಿ.ರವಿ ಪ್ರಕರಣ ನೈತಿಕ ಸಮಿತಿಗೆ ವಹಿಸಿದ್ದರೆ ತಿಕ್ಕಾಟ ತಪ್ಪುತ್ತಿತ್ತೆ? ಕಾನೂನು ತಜ್ಞರು ಹೇಳಿದ್ದಿಷ್ಟು!

ಕಾಂಗ್ರೆಸ್ಸಿಗರು ತುರ್ತು ಪರಿಸ್ಥಿತಿ ಮನಸ್ಥಿತಿಯಿಂದ ಹೊರಗೆ ಬರಬೇಕು. ಬೆಳಗಾವಿ ರಿಪಬ್ಲಿಕ್ ಆಗಲು ಜನ ಒಪ್ಪಲ್ಲ. ನಾವು ಅವಕಾಶ ಕೊಡಲ್ಲ. ನನ್ನ ಮೇಲೆ ದೈಹಿಕ ಹಲ್ಲೆ ಸಂಬಂಧ ಪರಿಷತ್ ಸದಸ್ಯರಾದ ಕಿಶೋರ್, ಅರುಣ್ ದೂರು ನೀಡಿದ್ದಾರೆ. ಏನು ಕ್ರಮ ಕೈಗೊಳ್ಳು ತ್ತಾರೆ ನೋಡೋಣ. ಖಾನಾಪುರದಲ್ಲಿ ನಾನು ದೂರು ನೀಡಿದ್ದೇನೆ. ಈವರೆಗೂ ಎಫ್‌ಐಆ‌ರ್ ಪ್ರತಿ ಕೊಟ್ಟಿಲ್ಲ ಎಂದು ತಿಳಿಸಿದರು. ಅವಾಚ್ಯ ಶಬ್ದ ಬಳಕೆ ಬಗ್ಗೆ ಪ್ರಧಾನಿ ಮೋದಿಗೆ ದೂರು ನೀಡುವುದಾಗಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿರುವುದಕ್ಕೆ ಪ್ರತಿಕ್ರಿಯಿಸಿ ಬಿಜೆಪಿಯವರು ಎಲ್ಲರೂ ದುಷ್ಯಾಸನರಾದರೆ ಅವರ ಬಳಿ ಏಕೆ ನ್ಯಾಯ ಕೇಳುತ್ತಾರೆ ಎಂದು ಅವರು ಹೇಳಿದರು. ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ಬೇಲೂರು ಕ್ಷೇತ್ರದ ಶಾಸಕ ಸುರೇಶ್ ಇತರರು ಸಿ.ಟಿ. ರವಿ ಮನೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.

ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ತಲೆ ಕೆಟ್ಟಿಲ್ಲ: ರವಿ ಪತ್ನಿ ಪಲ್ಲವಿ 

ಚಿಕ್ಕಮಗಳೂರು:  ಸಿ.ಟಿ.ರವಿ ಒಳ್ಳೆ ಡ್ರಾಮಾ ಮಾಸ್ಟರ್ ಎಂಬ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗೆ ಸಿ.ಟಿ. ರವಿ ಅವರ ಪತ್ನಿ ಪಲ್ಲವಿ ರವಿ ಅವರು ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಹಾಳಾಗಿರಲ್ಲ ಎಂದು ತಿರುಗೇಟು ನೀಡಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೀಪ್ ಆಗಿ ಒಂದು ಹೋಲ್ ಆಗಿದೆ. 2 ದಿನ ಬ್ಯಾಂಡೇಜ್, ಆಮೇಲೆ ಒಯಿಂಟ್ಮೆಂಟ್‌ (ಮುಲಾಮು) ಹಾಕಬೇಕು. ಕೂದಲಿನ ಮೇಲೆ ಬ್ಯಾಂಡೇಜ್ ಸ್ಟಿಕ್ಕರ್ ನಿಲ್ಲಲ್ಲ ಅಂತ, ಬ್ಯಾಂಡೇಜ್ ಹಾಕಿದ್ದಾರೆ. ಗಾಯ ಆಗಿಲ್ಲ ಅಂದ್ರೆ ಎಷ್ಟು ದಿನಾ ಅಂತ ನಾಟಕ ಮಾಡಲು ಆಗುತ್ತೆ ಎಂದು ಹೇಳಿದ್ದಾರೆ.

ಸಿ.ಟಿ.ರವಿ ಅವಾಚ್ಯ ಪದ ಬಳಕೆ ಪ್ರಕರಣ ಮುಗಿದ ಅಧ್ಯಾಯ; ಸಭಾಪತಿ ಬಸವರಾಜ ಹೊರಟ್ಟಿ ತೀರ್ಪು!

ಮ್ಯಾನ್ ಹ್ಯಾಂಡ್ಲಿಂಗ್ ಮಾಡಿ ಸುತ್ತಾಡಿಸಿರೋದ್ರಿಂದ ಜ್ವರ ಬಂದಿದೆ. ದಿನ ನಾಟಕ ಮಾಡೋರು ಅದೇ ರೀತಿ ಇರ್ತಾರೆ, ಹೇಳೋರ್ಗೇನು ಏನ್ ಬೇಕಾದ್ರು ಹೇಳಬಹುದು ಎಂದರು.

ಸಿ.ಟಿ.ರವಿಗೆ ಸಂಸ್ಕಾರ ಇಲ್ಲ, ಅಕ್ಕ ತಂಗಿ, ಅಮ್ಮ ಹೆಂಡ್ತಿ ಇಲ್ವಾ ಎಂಬ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಪಲ್ಲವಿ ರವಿ, ಎಲ್ಲರೂ ಇದ್ದಾರೆ. ಅಮ್ಮ ಇಲ್ಲದಿದ್ರೆ ಭೂಮಿಗೆ ಬರೋದಾದ್ರು ಹೇಗೆ ?, ಸಿ.ಟಿ.ರವಿಗೆ ಅವರದ್ದೇ ಆದ ಸಂಸ್ಕಾರ ಇದೆ, ಅವರಿಗೆ (ಲಕ್ಷ್ಮಿ ಹೆಬ್ಬಾಳ್ಕರ್‌) ಹಾಗೇ ಹೇಳೋದು ರೂಢಿ ಆಗಿದೆ ಅನ್ಸತ್ತೆ. ಅವರ ಒರಟುತನದ ಮಾತು ಅವರಿಗೆ ಅಭ್ಯಾಸ ಆಗಿದೆ ಅನ್ಸತ್ತೆ. ಸದನದ ಒಳಗೆ ನಡೆದಿದ್ದನ್ನ ನಮ್ಮವರೆಗೂ ಏಕೆ ತಂದ್ರು ಅರ್ಥ ಆಗ್ತಿಲ್ಲ ಎಂದರು.
ರಾಜಕಾರಣಿ ಹೇಗಿರಬೇಕು ಅಂದ್ರೆ, ನಾನು ಸಿ.ಟಿ.ರವಿಯಿಂದ ಕಲೀತೀನಿ, ನಾನು ತುಂಬಾ ಜನಕ್ಕೆ ಹೇಳ್ತೀನಿ ಸಿ.ಟಿ.ರವಿ ಜೊತೆ ಇದ್ರೆ ಊಟ, ತಿಂಡಿ ಸಿಗಲ್ಲ ಅಂತ, ಬಿಪಿ, ಶುಗರ್ ಇರೋರು ಅವರ ಜೊತೆ ಹೋಗಬೇಡಿ ಅಂತ ನಾನೇ ಹೇಳಿದ್ದೇನೆ ಎಂದು ಹೇಳಿದರು.

Latest Videos
Follow Us:
Download App:
  • android
  • ios