ಕಾಂಗ್ರೆಸ್ ರಾಜ್ಯಕ್ಕೆ ವರವಾಗುವ ಬದಲು ಶಾಪವಾಗಿದೆ: ಸಿದ್ದು ಸರ್ಕಾರದ ವಿರುದ್ಧ ಹರಿಹಾಯ್ದ ಸಿ.ಟಿ.ರವಿ
ಈಗ ರಾಜ್ಯದಲ್ಲಿ 4 ಜನ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದು ಕಡೆ ಗುತ್ತಿಗೆದಾರರು ಸಾಯುತ್ತಿದ್ದಾರೆ. ಮತ್ತೊಂದು ಕಡೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ . ಇನ್ನೊಂದು ಕಡೆ ಬೆಲೆ ಏರಿಕೆಯ ಬರೆ. ರಾಜ್ಯದಲ್ಲಿ ಪ್ರೊಡಕ್ಷನ್ ಕಾಸ್ಟ್ ಜಾಸ್ತಿಯಾದ್ರೆ ಇಲ್ಲಿ ಇನ್ವೆಸ್ಟ್ ಮಾಡಲು ಯಾರು ಬರಲ್ಲ ಎಂದು ಸಚಿವ ಎಂ.ಬಿ. ಪಾಟೀಲ್ ಕಿಡಿ ಕಾರಿದ ಸಿ.ಟಿ.ರವಿ
ಚಿಕ್ಕಮಗಳೂರು(ಜೂ.16): ಕಾಂಗ್ರೆಸ್ ರಾಜ್ಯಕ್ಕೆ ವರವಾಗುವ ಬದಲು ಶಾಪವಾಗಿದೆ. ಕರ್ನಾಟಕದಲ್ಲಿ ಬಿಜೆಪಿ ಆಡಳಿತದಲ್ಲಿದ್ದಾಗ ಸೆಸ್ ಕಡಿಮೆ ಮಾಡಿದ್ದೆವು. ಈಗ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮಾಡಿದೆ. ಈಗಲೇ ಹೀಗಾದ್ರೆ ರಾಜ್ಯದ ಮುಂದಿನ ಗತಿ ಏನು..? ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ.
ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆಯನ್ನ ಸಚಿವ ಎಂ.ಬಿ.ಪಾಟೀಲ್ ಸಮರ್ಥನೆಗೆ ಸಂಬಂಧಿಸಿದಂತೆ ಇಂದು(ಭಾನುವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿ.ಟಿ.ರವಿ, ಈಗ ರಾಜ್ಯದಲ್ಲಿ 4 ಜನ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದು ಕಡೆ ಗುತ್ತಿಗೆದಾರರು ಸಾಯುತ್ತಿದ್ದಾರೆ. ಮತ್ತೊಂದು ಕಡೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ . ಇನ್ನೊಂದು ಕಡೆ ಬೆಲೆ ಏರಿಕೆಯ ಬರೆ. ರಾಜ್ಯದಲ್ಲಿ ಪ್ರೊಡಕ್ಷನ್ ಕಾಸ್ಟ್ ಜಾಸ್ತಿಯಾದ್ರೆ ಇಲ್ಲಿ ಇನ್ವೆಸ್ಟ್ ಮಾಡಲು ಯಾರು ಬರಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ವಿಜಯೋತ್ಸವ ವೇಳೆ ‘ಭಾರತ್ ಮಾತಾಕೀ ಜೈ’ ಅನ್ನೋದು ಅಪರಾಧವಾ?: ಸಿ.ಟಿ.ರವಿ
ನಮ್ಮ ರಾಜ್ಯ ಸದ್ಯದಲ್ಲೇ ರೋಗಗ್ರಸ್ತ ರಾಜ್ಯವಾಗಲಿದೆ. ರಾಜ್ಯಕ್ಕೆ ಬರುವ ಉದ್ದಿಮೆಗಳೆಲ್ಲಾ ನೆರೆ ರಾಜ್ಯಗಳ ಪಾಲಾಗುತ್ತಿವೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ವಿರುದ್ಧ ಸಿ.ಟಿ.ರವಿ ಕಿಡಿ ಕಾರಿದ್ದಾರೆ.