ಸಿಎಂ ಯಾರಿಗೂ ಬಗ್ಗಲ್ಲ, ಜಗ್ಗಲ್ಲ, ಹೆದರಲ್ಲ ಅಂತ ಹೇಳುತ್ತಿ ದ್ದಾರೆ. ಆದರೆ ಇದು ಪ್ರಜಾಪ್ರಭುತ್ವ. ಇಲ್ಲಿ ಇಂಥದ್ದೆಲ್ಲ ನಡೆಯುವುದಿಲ್ಲ. ಸಂವಿಧಾನಕ್ಕೆ ಪ್ರತಿಯೊಬ್ಬರೂ ತಲೆಬಾಗಬೇಕು. ಜನರಿಗೆ ಹೆದರಲೇಬೇಕು ಎಂದು ಹೇಳಿದ ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ 

ದಾವಣಗೆರೆ(ಅ.10):  ಕಾಂಗ್ರೆಸ್ ಸಚಿವರು, ಶಾಸಕರು, ಮುಖಂಡರು ಮೇಲಿಂದ ಮೇಲೆ ಡಿನ್ನರ್‌ಪಾರ್ಟಿ, ಬ್ರೇಕ್ ಫಾಸ್ಟ್ ಪಾರ್ಟಿ, ಟೀ ಪಾರ್ಟಿ ಅಂತ ಮೀಟಿಂಗ್ ಮೇಲೆ ಮೀಟಿಂಗ್ ಮಾಡುತ್ತಿದ್ದಾರೆ. ಇದು ಸಿದ್ದರಾ ಮಯ್ಯ ಅವರು ಆಲೋಚನೆ ಮಾಡಬೇಕಾದ ವಿಷಯ ಎಂದು ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ ಹೇಳಿದರು. 

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಯಾರಿಗೂ ಬಗ್ಗಲ್ಲ, ಜಗ್ಗಲ್ಲ, ಹೆದರಲ್ಲ ಅಂತ ಹೇಳುತ್ತಿ ದ್ದಾರೆ. ಆದರೆ ಇದು ಪ್ರಜಾಪ್ರಭುತ್ವ. ಇಲ್ಲಿ ಇಂಥದ್ದೆಲ್ಲ ನಡೆಯುವುದಿಲ್ಲ. ಸಂವಿಧಾನಕ್ಕೆ ಪ್ರತಿಯೊಬ್ಬರೂ ತಲೆಬಾಗಬೇಕು. ಜನರಿಗೆ ಹೆದರಲೇಬೇಕು ಎಂದು ಹೇಳಿದ್ದಾರೆ. 

ಮುಡಾ ಕೇಸಿಂದ ಹರ್ಯಾಣದಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ, ಸಿದ್ದು ರಾಜೀನಾಮೆ ನೀಡಲಿ: ಕೋಳಿವಾಡ

ಸಿಎಂ ಅವರನ್ನು ಕುರ್ಚಿಯಿಂದ ಕೆಳಗಿಳಿಸಬೇಕೆಂಬ ಆತುರವಾಗಲಿ, ಅವಸರವಾಗಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳಿಗೆ ಇಲ್ಲ. ಕಾಂಗ್ರೆಸ್ಸಿಗರಿಗೇ ಆ ಕುರಿತ ಆತುರ ಎಂದು ಕುಟುಕಿದರು.