ರಾಜ್ಯವನ್ನು ಕೇರಳ, ಪ.ಬಂಗಾಳ ಮಾಡಲು ಬಿಡುವುದಿಲ್ಲ: ಕೋಟ ಶ್ರೀನಿವಾಸ ಪೂಜಾರಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಆರಂಭವಾಗಿರುವ ವಿದ್ಯಮಾನಗಳು ಆತಂಕ ಹುಟ್ಟಿಸುತ್ತಿವೆ. ಕರ್ನಾಟಕವನ್ನು ಪಶ್ಚಿಮ ಬಂಗಾಳ, ಕೇರಳ ಮಾಡುವ ಪ್ರಯತ್ನವನ್ನು ಬಿಜೆಪಿ ಸಹಿಸುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.
ಉಡುಪಿ (ಮೇ.20): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಆರಂಭವಾಗಿರುವ ವಿದ್ಯಮಾನಗಳು ಆತಂಕ ಹುಟ್ಟಿಸುತ್ತಿವೆ. ಕರ್ನಾಟಕವನ್ನು ಪಶ್ಚಿಮ ಬಂಗಾಳ, ಕೇರಳ ಮಾಡುವ ಪ್ರಯತ್ನವನ್ನು ಬಿಜೆಪಿ ಸಹಿಸುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ. ಗುರುವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಟ್ಕಳ ಶಿರಸಿಯಲ್ಲಿ ಪಾಕಿಸ್ತಾನ ಮಾದರಿಯ ಧ್ವಜಗಳು ಹಾರಿಸಿ ಕೇಕೆ ಹಾಕಲಾಗಿದೆ. ಬೆಳಗಾವಿಯ ಸಂಭ್ರಮೋತ್ಸವದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ.
ಶಿವಮೊಗ್ಗದಲ್ಲಿ ಬಿಜೆಪಿ ಮತದಾರರು, ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ. ರಾಜ್ಯದಲ್ಲಿದೀಗ ರಾಷ್ಟ್ರ ವಿರೋಧಿ ಕೃತ್ಯ ಮಾಡುವವರಿಗೆ ಸಿಗುತ್ತಿರುವ ಪ್ರೋತ್ಸಾಹ ಆತಂಕಕಾರಿ ಬೆಳವಣಿಗೆಯಾಗಿದೆ. ವಿಪಕ್ಷ ಸ್ಥಾನದಲ್ಲಿ ನಿಂತು ಬಿಜೆಪಿ ಇದನ್ನು ಗಂಭೀರವಾಗಿ ನೋಡುತ್ತಿದ್ದು, ಇದರ ವಿರುದ್ಧ ಹೋರಾಟ ಮಾಡುತ್ತೇವೆ ಎಂದವರು ಹೇಳಿದ್ದಾರೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಜಾರಿಗೆ ತರಬೇಕು. ರಾಷ್ಟ್ರ ವಿರೋಧಿಗಳ ವಿರುದ್ಧ ಕ್ರಮ ಆಗಬೇಕು. ಕಾಂಗ್ರೆಸ್ ಸರ್ಕಾರದ ನೂತನ ಮುಖ್ಯಮಂತ್ರಿ ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ನಾರಾಯಣ ನೇತ್ರಾಲಯದ ಪ್ರಖ್ಯಾತ ನೇತ್ರ ತಜ್ಞ ಡಾ.ಭುಜಂಗ ಶೆಟ್ಟಿ ಹೃದಯಾಘಾತದಿಂದ ನಿಧನ!
ಪೊಲೀಸ್ ಹಲ್ಲೆ ಖಂಡನೀಯ: ಸಂಸದರಾದ ನಳಿನ್ ಕುಮಾರ್ ಕಟೀಲು, ಸದಾನಂದ ಗೌಡ ಅವರಿಗೆ ಶ್ರದ್ಧಾಂಜಲಿ ಕೋರಿ ಬ್ಯಾನರ್ ಕಟ್ಟಿ, ಚಪ್ಪಲಿ ಹಾರ ಹಾಕಿದವರ ವಿರುದ್ದ ಪೊಲೀಸರು ಕಾನೂನು ಕ್ರಮ ತೆಗೆದುಕೊಳ್ಳಬೇಕೆ ವಿನಃ ಹಲ್ಲೆ ಮಾಡಲು ಯಾರಿಗೂ ಅಧಿಕಾರವಿಲ್ಲ. ಬಿಜೆಪಿ ಇದನ್ನು ಖಂಡಿಸಿದ್ದು, ಈ ಬಗ್ಗೆ ಸಮಗ್ರ ತನಿಖೆ ಮಾಡಲು ಆಗ್ರಹಿಸಿದೆ, ಜಿಲ್ಲಾ ಮಟ್ಟದಲ್ಲಿ ತನಿಖೆ ಮಾಡುವುದಾಗಿ ಎಸ್ಪಿ ತಿಳಿಸಿದ್ದಾರೆ ಎಂದು ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.
ಯಾವುದೇ ಸರ್ಕಾರವಿದ್ದರೂ ಅಭಿವೃದ್ಧಿಗೆ ತೊಡಕಾಗದು: ಶಾಸಕ ಶಿವರಾಮ ಹೆಬ್ಬಾರ್
ಗ್ಯಾರಂಟಿಗಳ ಮಾತು ಉಳಿಸಿಕೊಳ್ಳಿ: ನಾವು ಗೆದ್ದರೆ ಕರೆಂಟ್ ಬಿಲ್ಲನ್ನೇ ಕಟ್ಟಬೇಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಎಲ್ಲಿಂದ ಎಲ್ಲಿಗೆ ಯಾವ ಬಸ್ಸಲ್ಲಿ ಬೇಕಾದರೂ ಹೋಗಿ ಎಂದು ಖರ್ಗೆ ಹೇಳಿದ್ದಾರೆ. ಬಡವರು, ದುರ್ಬಲ ವರ್ಗದವರು ಕಾಂಗ್ರೆಸ್ಸಿಗೆ ವೋಟ್ ಹಾಕಿರಬಹುದು. ಆದ್ದರಿಂದ ಕಾಂಗ್ರೆಸ್ ಎಲ್ಲಾ ಗ್ಯಾರಂಟಿಗಳನ್ನು ನಡೆಸಬೇಕು. ಮಾತಿಗೆ ತಪ್ಪಿದರೆ ಬಿಜೆಪಿ ಜನರ ಪರವಾಗಿ ನಿಲ್ಲುತ್ತದೆ. ಸರ್ಕಾರ ಜನಕ್ಕೆ ಕೊಟ್ಟು ಆಶ್ವಾಸನೆ ಗ್ಯಾರಂಟಿ ಉಳಿಸಿಕೊಳ್ಳಲಿ ಎಂದು ಕೋಟ ಹೇಳಿದರು.