ಬೆಂಗಳೂರು, (ಜ.08): ವಿಧಾನ ಪರಿಷತ್ ಗಲಾಟೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ರಚನೆಯಾಗಿದ್ದ ಸದನ ಸಮಿತಿಯ ಸದಸ್ಯ ಸ್ಥಾನಕ್ಕೆ ಬಿಜೆಪಿ ಸದಸ್ಯರಾದ ಎಚ್.ವಿಶ್ವನಾಥ್ ಮತ್ತು ಎಸ್.ವಿ ಸಂಕನೂರು ರಾಜೀನಾಮೆ ನೀಡಿದ್ದಾರೆ.

"

ಸಮಿತಿ ಅಧ್ಯಕ್ಷ ಮರಿತಿಬ್ಬೇ ಗೌಡರಿಗೆ ವಿಶ್ವನಾಥ್ ಮತ್ತು ಎಸ್. ವಿ ಸಂಕನೂರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸದನ ಸಮಿತಿಯ ಬಗ್ಗೆ ನಿಯಮಬಾಹಿರವಾಗಿ ಹಾಗೂ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇವತ್ತಿನ ಘಟನೆಗೆ ಬಿಜೆಪಿಯವರೇ ಕಾರಣ; ಕಾಂಗ್ರೆಸ್ ಎಂಎಲ್‌ಸಿ ನಾರಾಯಣ ಸ್ವಾಮಿ

 ಹೀಗಾಗಿ ಸಮಿತಿ ರದ್ದು ಮಾಡಿ ಈ ವಿಷಯವನ್ನು ನೀತಿ ನಿರೂಪಣಾ ಸಮಿತಿಗೆ ವಹಿಸಬೇಕು ಎಂದು ನಿನ್ನೆಯಷ್ಟೇ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಸಭಾಪತಿಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ವಿಶ್ವನಾಥ್ ಹಾಗೂ ಎಸ್.ವಿ ಸಂಕನೂರು ರಾಜೀನಾಮೆ ನೀಡಿದ್ದಾರೆ.

ಬಳಿಕ‌ ಮಾತನಾಡಿದ ವಿಶ್ವನಾಥ್, ಇದು ನಾವೆಲ್ಲಾ ತಲೆ ತಗ್ಗಿಸುವ ವಿಚಾರ. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಉನ್ನತ ಮಟ್ಟದ ತನಿಖೆ ಆಗಬೇಕು. ನಾವೇ ಆ ಗದ್ದಲ ಸಂದರ್ಭದಲ್ಲಿ ಅಲ್ಲಿ ಇದ್ದೆವು. ಹಾಗಾಗಿ ನಾನು ಇದನ್ನು ಧಿಕ್ಕರಿಸಿ ರಾಜೀನಾಮೆ ನೀಡಿ ಹೊರ ಬಂದಿದ್ದೇನೆ ಎಂದು ಸ್ಪಷ್ಟಪಡಿಸಿದರು.

ವಿಧಾನ ಪರಿಷತ್‌ ಉಪಸಭಾಪತಿ ಎಸ್. ‌ಎಲ್‌ ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ..!

ಲೋಕಸಭಾ ಅಧ್ಯಕ್ಷ ಓಂಬಿರ್ಲಾ ಕೂಡಾ ಇದರ ಬಗ್ಗೆ ತನಿಖೆ ಆಗಬೇಕು ಎಂದಿದ್ದಾರೆ. ಹಾಗಾಗಿ ಸರ್ಕಾರ ಇದರ ಬಗ್ಗೆ ಗಮನಹರಿಸಿ ಕ್ರಮ ಕೈಗೊಳ್ಳಬೇಕು ಎಂದು ವಿಶ್ವನಾಥ್ ಆಗ್ರಹಿಸಿದರು.