ನಾನು ಕಾಂಗ್ರೆಸ್ ವಿರೋಧಿಯಾಗಿಯೇ ಜನ್ಮತಾಳಿದ್ದೇನೆ. ಕಳೆದ 45 ವರ್ಷಗಳಿಂದ ಕಾಂಗ್ರೆಸ್ ವಿರೋಧಿಯಾಗಿಯೇ ರಾಜಕಾರಣ ಮಾಡಿದ್ದೇನೆ. ಈಗ ಪಕ್ಷ ಬದಲಾಯಿಸಿ ರಾಜಕಾರಣ ಮಾಡುವ ಔಚಿತ್ಯ ನನಗಿಲ್ಲ. ಕಾಂಗ್ರೆಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಹೇಳಿದರು.
ವಿಜಯಪುರ (ಸೆ.05): ನಾನು ಕಾಂಗ್ರೆಸ್ ವಿರೋಧಿಯಾಗಿಯೇ ಜನ್ಮತಾಳಿದ್ದೇನೆ. ಕಳೆದ 45 ವರ್ಷಗಳಿಂದ ಕಾಂಗ್ರೆಸ್ ವಿರೋಧಿಯಾಗಿಯೇ ರಾಜಕಾರಣ ಮಾಡಿದ್ದೇನೆ. ಈಗ ಪಕ್ಷ ಬದಲಾಯಿಸಿ ರಾಜಕಾರಣ ಮಾಡುವ ಔಚಿತ್ಯ ನನಗಿಲ್ಲ. ಕಾಂಗ್ರೆಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಹೇಳಿದರು. ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಟಿಕೆಟ್ ನನಗೇ ಸಿಗುವುದು ಖಾತ್ರಿಯಾಗಿದೆ. ನನಗೂ ಸಿದ್ಧತೆ ಮಾಡಿಕೊಳ್ಳುವಂತೆ ಪಕ್ಷದಿಂದ ಸೂಚನೆ ದೊರೆತಿದೆ. ಪಕ್ಷದ ಹೈಕಮಾಂಡ್ ಟಿಕೆಟ್ ನೀಡಿದರೆ ನಾನು ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ. ಇಲ್ಲವಾದರೆ ಮನೆಯಲ್ಲಿಯೇ ಇರುತ್ತೇನೆ ಎಂದು ಸ್ಪಷ್ಟಪಡಿಸಿದರು.
ಲೋಕಸಭೆ ಚುನಾವಣೆಯಲ್ಲಿ ರಮೇಶ ಜಿಗಜಿಣಗಿ ಅವರಿಗೆ ಟಿಕೆಟ್ ಸಿಗುವುದಿಲ್ಲ ಎಂದು ಎಂ.ಬಿ.ಪಾಟೀಲರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನನಗೆ ಟಿಕೆಟ್ ಸಿಗುವುದು ಬಿಡುವುದು ಎಂ.ಬಿ.ಪಾಟೀಲರಿಗೆ ಸಂಬಂಧಿಸಿದ ವಿಷಯವಲ್ಲ. ಅವರು ನಮ್ಮ ಪಕ್ಷದಲ್ಲಿಲ್ಲ. ಬೇಕಿದ್ದರೆ ನಮ್ಮ ಪಕ್ಷಕ್ಕೆ ಬಂದು ಈ ಮಾತು ಹೇಳಲಿ. ಆಗ ನೋಡೋಣ. ನಾನೇನು ಪಾಟೀಲರಿಗೆ ಬಿಜೆಪಿಗೆ ಆಹ್ವಾನ ನೀಡುತ್ತಿಲ್ಲ. ನಮ್ಮಲ್ಲೇನೂ ನಾಯಕರ ಕೊರತೆ ಇಲ್ಲ ಎಂದರು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನನಗೆ ಟಿಕೆಚ್ ಸಿಗುವ ಇಲ್ಲವೆ ಬಿಡುವ ಚಿಂತೆ ಸಚಿವ ಎಂ.ಬಿ.ಪಾಟೀಲರಿಗೆ ಏಕಿರಬೇಕು? ಅವರೇನು ನಮ್ಮ ಪಕ್ಷದವರಲ್ಲ ಎಂದೂ ಅವರು ಕಿಡಿಕಾರಿದರು.
ಕಾವೇರಿ ನೀರು ಬಿಡುವುದು ಕೇಂದ್ರ ಸರ್ಕಾರದ ಕೈಯಲ್ಲಿ ಇದೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ
ವಿಜಯಪುರ ಎಂಪಿಗೆ ಕಾರಜೋಳ ಸ್ಪರ್ಧಿಸಲ್ಲ: ಮಾಜಿ ಸಚಿವ ಗೋವಿಂದ ಕಾರಜೋಳ ವಿಜಯಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿಲ್ಲ. ಒಂದು ವೇಳೆ ಹಾಗೇನಾದರೂ ಇದ್ದರೇ ನಾನು ಅವರು ಕುಳಿತು ಮಾತನಾಡುತ್ತೇವೆ ಎಂದು ಸಂಸದ ರಮೇಶ ಜಿಗಜಿಣಗಿ ಸ್ಪಷ್ಟಪಡಿಸಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ಲೋಕಸಭಾ ಕ್ಷೇತ್ರದಿಂದ ಗೋವಿಂದ ಕಾರಜೋಳ ಸ್ಪರ್ಧೆ ಮಾಡುತ್ತಾರೆ ಎಂದು ಎಲ್ಲೂ ಹೇಳಿಲ್ಲ. ಅವರು ಹಾಗೂ ನಾನು ಬೇರೆ ಅಲ್ಲ. ಒಂದು ವೇಳೆ ನಿಲ್ಲುತ್ತಾರೆಂದರೆ ನಿಲ್ಲಲಿ. ಹಾಗೇನಿದ್ದರೂ ನಾವಿಬ್ಬರು ಕುಳಿತು ಮಾತನಾಡುತ್ತೇವೆ. ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಯಾರೇ ಬಂದು ನಿಲ್ಲಲಿ ಎಂದು ಸವಾಲ ಹಾಕಿದರು.
ಕಾವೇರಿ ನೀರನ್ನು ನೀಡದಂತೆ ಡಿಕೆಶಿ ಅಧಿಕಾರಿಗಳ ಬಾಯಿ ಮುಚ್ಚಿಸಿದ್ದಾರೆ: ದೇವೇಗೌಡ ಆರೋಪ
ವಿಜಯಪುರದ ವಜ್ರಹನುಮಾನ ಬಳಿ ಅಂಡರ್‌ಪಾಸ್ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಅಗತ್ಯ ನಿರ್ಣಯ ಕೈಗೊಳ್ಳಲಾಗಿದೆ. ಆದರೆ, ಇಲಾಖಾ ಅಧಿಕಾರಿಗಳು ಆರ್‌ಒಬಿ ಮಾಡುವ ನಿಟ್ಟಿನಲ್ಲಿ ಕ್ರಮವಹಿಸುತ್ತಿದ್ದಾರೆ. ಈ ಬಗ್ಗೆ ನಾನು ಪತ್ರವೇ ನೀಡಿಲ್ಲ. ಆದರೂ ಸಹ ಪತ್ರ ಸೃಷ್ಟಿಯಾಗಿದೆ. ಆ ಪತ್ರ ನಕಲಿಯೋ ಅಸಲಿಯೋ ಗೊತ್ತಿಲ್ಲ. ನಾನಂತೂ ಪತ್ರ ಕೊಟ್ಟಿಲ್ಲ. ಈ ಬಗ್ಗೆ ಮುಂದೆ ನೋಡೋಣ. ವಜ್ರಹನುಮಾನದಲ್ಲಿ ಅಂಡರ್‌ಪಾಸ್ ನಿರ್ಮಿಸಿದರೇ ಸೂಕ್ತ. ಹೀಗಾಗಿ ಅಂಡರ್‌ಪಾಸ್ ನಿರ್ಮಾಣಕ್ಕೆ ಕ್ರಮ ಜರುಗಿಸಲಾಗುವುದು ಹೊರತು ಆರ್‌ಒಬಿ ಅಲ್ಲ ಎಂದು ತಿಳಿಸಿದರು.
