Asianet Suvarna News Asianet Suvarna News

ತಾಕತ್ತಿದ್ರೆ ಮೈಸೂರಿಗೆ ಬಂದು ಗೆದ್ದು ತೋರಿಸಿ: ಸಿದ್ದರಾಮಯ್ಯಗೊಂದು ಬಹಿರಂಗ ಸವಾಲು

* ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡುಗಿದ ಸಂಸದ ಶ್ರೀನಿವಾಸ್ ಪ್ರಸಾದ್
* ಸಿದ್ದರಾಮಯ್ಯಗೊಂದು ಬಹಿರಂಗ ಸವಾಲು ಹಾಕಿದ ಮಾಜಿ ಗೆಳೆಯ
* ಕಾಂಗ್ರೆಸ್ ಪಕ್ಷದ ವಿರುದ್ಧವೂ ವಾಗ್ದಾಳಿ

BJP MP Srinivasa Prasad Political challenged to Congress Leader Siddaramaiah rbj
Author
Bengaluru, First Published Oct 2, 2021, 7:19 PM IST
  • Facebook
  • Twitter
  • Whatsapp

ಚಾಮರಾಜನಗರ, (ಅ.02): ತಾಕತ್ತಿದ್ರೆ ಮೈಸೂರಿನಲ್ಲಿ ಚುನಾವಣೆಗೆ ಬನ್ನಿ ಎಂದು ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಬಹಿರಂಗ ಸವಾಲು ಹಾಕಿದ್ದಾರೆ.

ಚಾಮರಾಜನಗರದಲ್ಲಿ ಇಂದು (ಅ.02) ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀನಿವಾಸ್ ಪ್ರಸಾದ್, ಸಿದ್ದರಾಮಯ್ಯ ಕ್ಷೇತ್ರಕ್ಕಾಗಿ ಅಲೆಯುತ್ತಿದ್ದು, ಜಮೀರ್ ಕಾಲಿಡಿದುಕೊಂಡು ಚಾಮರಾಜಪೇಟೆಗೆ ಹೋಗುತ್ತಿದ್ದಾರೆ. ನಿಮಗೆ ಧೈರ್ಯ ಇದ್ದರೆ ಮೈಸೂರಿಗೆ ಬಂದು ಪಕ್ಷವನ್ನ ಸಂಘಟನೆ ಮಾಡಿ ಚುನಾವಣೆ ಗೆಲ್ಲಿ ಸಿದ್ದರಾಮಯ್ಯ ವಿರುದ್ಧ ಗುಡುಗಿದರು. 

ಮೈಸೂರಿನಲ್ಲಿ ಸಿದ್ದುಗೆ ಬಿಗ್ ಶಾಕ್: ಜೆಡಿಎಸ್ ಸೇರಿದ ಕಾಂಗ್ರೆಸ್ ಘಟಾನುಘಟಿ ಮುಖಂಡರು

ನೀವು ಮುಖ್ಯಮಂತ್ರಿಯಾಗಿ ಎರಡೆರಡು ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲುತ್ತೀರ. ಬಿಜೆಪಿಯನ್ನ‌ ಎದುರಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷದ ಅಧ್ಯಕ್ಷರು ಅಮೇಥಿ ಕ್ಷೇತ್ರದಲ್ಲಿ ಸೋತು ಸುಣ್ಣವಾಗಿದ್ದಾರೆ. ಕೇವಲ ಸೋನಿಯಾ ಗಾಂಧಿ ಮಾತ್ರ ಉತ್ತರ ಪ್ರದೇಶದಲ್ಲಿ ಗೆದ್ದಿದ್ದಾರೆ ಎಂದು ವ್ಯಂಗ್ಯವಾಡಿದರು.

ರಾಹುಲ್ ಗಾಂಧಿ ಕೇರಳಕ್ಕೆ ಪಲಾಯಾನ ಮಾಡಿದ್ದು, ದೇಶದಲ್ಲಿ ನೆಲೆ ಇಲ್ಲದಂತಾಗಿದೆ. ಉತ್ತರ ಪ್ರದೇಶದಲ್ಲಿ ನಿಮ್ಮ ಪಾರ್ಟಿಯನ್ನ ಬಲಪಡಿಸಿ ಎಂದು ಟಾಂಗ್ ಕೊಟ್ಟರು.

Follow Us:
Download App:
  • android
  • ios