Asianet Suvarna News Asianet Suvarna News

ಬಿಜೆಪಿ, ನನ್ನ ಸಂಬಂಧ ಮುಗಿದಿದೆ, ವಾಪಸ್‌ ಪ್ರಶ್ನೆಯೇ ಇಲ್ಲ: ಜನಾರ್ದನ ರೆಡ್ಡಿ

ನನ್ನದು ಮತ್ತು ಬಿಜೆಪಿಯ ಸಂಬಂಧ ಮುಗಿದ ಅಧ್ಯಾಯ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮರಳಿ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ. 
 

BJP my relationship is over no question of return Says Janardhan Reddy gvd
Author
First Published Nov 28, 2023, 4:45 AM IST

ಬೆಂಗಳೂರು (ನ.28): ನನ್ನದು ಮತ್ತು ಬಿಜೆಪಿಯ ಸಂಬಂಧ ಮುಗಿದ ಅಧ್ಯಾಯ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮರಳಿ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ. ಬಿಜೆಪಿಯೊಂದಿಗೆ ನಮ್ಮ ಪಕ್ಷವನ್ನು ವಿಲೀನ ಮಾಡುವುದಿಲ್ಲ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿಯೇ ಸ್ಪರ್ಧೆ ಮಾಡ್ತೇವೆ. 

ಪಕ್ಷ ಸಂಘಟನೆಯ ಬಳಿಕ ಎಷ್ಟು ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂಬುದನ್ನು ಫೆಬ್ರವರಿಯಲ್ಲಿ ಹೇಳುತ್ತೇವೆ ಎಂದರು. ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುವ ಕುರಿತು ಯಾರೂ ಸಂಪರ್ಕ ಮಾಡಿಲ್ಲ. ಶಾಸಕ ಬಿ.ವೈ.ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಅವರಿಗೆ ಶುಭಾಶಯಗಳನ್ನು ಮಾತ್ರ ಹೇಳಿದ್ದೇನೆ. ಯಾವುದೇ ಹಂತದಲ್ಲೂ ರಾಜಕೀಯ ಚರ್ಚೆ ಮಾಡಿಲ್ಲ ಎಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಬಹುಮತ: ವೀರಪ್ಪ ಮೊಯ್ಲಿ ವಿಶ್ವಾಸ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಜನಾರ್ದನ ರೆಡ್ಡಿ: ಮುಂದಿನ ಲೋಕಸಭೆ ಚುನಾವಣೆಗೆ ಎಷ್ಟು ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎಂಬುದನ್ನು ಫೆಬ್ರವರಿ ತಿಂಗಳಲ್ಲಿ ಅಂತಿಮಗೊಳಿಸಲಾಗುವುದು ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ.  ನಗರದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಹಾಲಿ ಅಧ್ಯಕ್ಷ ಜೆ.ರಾಮಣ್ಣ ಅವರಿಂದ ಅಧ್ಯಕ್ಷ ಸ್ಥಾನವನ್ನು ಸ್ವೀಕರಿಸಿದರು. 

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಸದ್ಯಕ್ಕೆ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಇಲ್ಲದೆ ಸ್ವತಂತ್ರವಾಗಿ ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸಲಾಗುವುದು. ಲೋಕಸಭೆ ಚುನಾವಣೆಗೆ ಎಂಟು ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ. ಆದರೆ, ಎಷ್ಟು ಕ್ಷೇತ್ರದಿಂದ ಪಕ್ಷ ಸ್ಪರ್ಧಿಸಬೇಕು ಎಂಬುದರ ಬಗ್ಗೆ ಫೆಬ್ರವರಿಯಲ್ಲಿ ಪ್ರಕಟಿಸಲಾಗುವುದು ಎಂದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡಿ: ಸಚಿವ ಚಲುವರಾಯಸ್ವಾಮಿ

ಒಂದು, ಎರಡು ಸ್ಥಾನಗಳಿಂದ ಪ್ರಾದೇಶಿಕ ಪಕ್ಷಗಳು ಆರಂಭವಾಗುತ್ತವೆ. ಬಿಜೆಪಿ ಸಹ ಆರಂಭದಲ್ಲಿ ಎರಡು ಸ್ಥಾನಗಳನ್ನು ಗಳಿಸುವ ಮೂಲಕ ಪ್ರಾರಂಭವಾಯಿತು. ಹಿರಿಯ ಮುಖಂಡರಾದ ಎಲ್‌.ಕೆ.ಅಡ್ವಾನಿ, ಎ.ಬಿ.ವಾಜಪೇಯಿ ಇಬ್ಬರೇ ಇದ್ದರು. ಇಂದು ಬಿಜೆಪಿ ದೇಶದಲ್ಲಿ ಅಧಿಕಾರದಲ್ಲಿದೆ. ಅಂತೆಯೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಒಂದು ಸ್ಥಾನದಿಂದ ಆರಂಭವಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವ ಪ್ರಯತ್ನ ಮಾಡಲಾಗುವುದು. ಪ್ರತಿ ಬೂತ್‌ ಮಟ್ಟಕ್ಕೆ ನಾವು ತಲುಪುತ್ತೇವೆ ಎಂದು ಹೇಳಿದರು.

Latest Videos
Follow Us:
Download App:
  • android
  • ios