ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಮಾಣವಚನ ಸಮಾರಂಭವನ್ನು ಒಂದೆರಡು ದಿನಗಳ ಕಾಲ ಮುಂದೂಡಿದರೆ ಏನಾಗುತ್ತಿತ್ತು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರು ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್‌ ನೀಡಿದ್ದಾರೆ. 

ಬೆಂಗಳೂರು (ಮೇ.20): ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಮಾಣವಚನ ಸಮಾರಂಭವನ್ನು ಒಂದೆರಡು ದಿನಗಳ ಕಾಲ ಮುಂದೂಡಿದರೆ ಏನಾಗುತ್ತಿತ್ತು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರು ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್‌ ನೀಡಿದ್ದಾರೆ. ಚುನಾವಣಾ ಪ್ರಚಾರ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್‌ ಶೋ ನಡೆಸುವ ದಿನ ನೀಟ್‌ ಪರೀಕ್ಷೆ ಇದ್ದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮೋದಿ ಅವರನ್ನು ಖಂಡಿಸಿ ಮಾಡಿದ್ದ ಟ್ವೀಟ್‌ ಅನ್ನು ಉಲ್ಲೇಖಿಸಿ ಸಂತೋಷ್‌ ಅವರು ಶುಕ್ರವಾರ ಟ್ವೀಟ್‌ ಮಾಡಿದ್ದಾರೆ.

‘ನಮ್ಮ ನಿಯೋಜಿತ ಮುಖ್ಯಮಂತ್ರಿಗಳು ಈ ಟ್ವೀಟ್‌ ಮಾಡಿ ಬಹಳ ದಿನ ಕಳೆದಿಲ್ಲ. ಶನಿವಾರ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ಇದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅವರೇ ನಿಮ್ಮ ಪ್ರಮಾಣವಚನ ಸಮಾರಂಭವನ್ನು ಒಂದೆರಡು ದಿನಗಳ ಕಾಲ ಮುಂದೂಡಿದರೆ ಏನಾಗುತ್ತಿತ್ತು’ ಎಂದು ಹೇಳಿದ್ದಾರೆ.

ಚುನಾವಣಾ ಫಲಿತಾಂಶ ದೇಶದ ರಾಜಕೀಯಕ್ಕೆ ದಿಕ್ಸೂಚಿ: ಬಿ.ಬಿ.ನಿಂಗಯ್ಯ

ಟ್ರೋಲ್‌ ಮಾಡಿದರೆ ಕಾನೂನಾಸ್ತ್ರ: ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಹಿರಿಯ ಮುಖಂಡರ ಬಗ್ಗೆ ಅವಹೇಳನಕಾರಿ ಟ್ರೋಲ್‌ ಮಾಡುವವರ ವಿರುದ್ಧ ಸೈಬರ್‌ ಠಾಣೆಗೆ ದೂರು ನೀಡಲಾಗುವುದು ಎಂದು ಬಿಜೆಪಿ ಜಿಲ್ಲಾ ವಕ್ತಾರೆ ಪುಷ್ಪಾ ಶಿವಶಂಕರ್‌ ಎಚ್ಚರಿಕೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನಸಭಾ ಚುನಾವಣೆಯ ನಂತರ, ರಾಷ್ಟ್ರೀಯ ಮುಖಂಡರಾದ ಸಿ.ಟಿ.ರವಿ, ಬಿ.ಎಲ್‌.ಸಂತೋಷ್‌, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ಕೇಂದ್ರ ಸಚಿವ ಪ್ರಲ್ಹಾದ್‌ ಜೋಷಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ನಿಕೃಷ್ಟಸಂದೇಶಗಳನ್ನು ಹಾಕುತ್ತಿದ್ದಾರೆ. 

ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರಿಗೆ ಉತ್ತಮ ಸಂಸ್ಕಾರ, ಆಚಾರ ವಿಚಾರಗಳಿವೆ. ಬಿಜೆಪಿ ಕಾರ್ಯಕರ್ತರ ಶ್ರಮದ ಮೇಲೆ ಬೆಳೆದು ಬಂದ ಪಕ್ಷ, ಪಕ್ಷದ ಬೆಳವಣಿಗೆಯಲ್ಲಿ ಅನೇಕ ನಾಯಕರ ಶ್ರಮ ಇದೆ. ಅಂತಹ ವ್ಯಕ್ತಿಗಳ ಬಗ್ಗೆ ಅವಹೇಳನಕಾರಿ ಟ್ರೋಲ್‌ಗಳನ್ನು ಸಹಿಸಲು ಸಾಧ್ಯವಿಲ್ಲ, ಅಂತಹ ಕಿಡಿಗೇಡಿಗಳ ವಿರುದ್ಧ ಸೈಬರ್‌ ಠಾಣೆಯಲ್ಲಿ ದೂರು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಲೋಕಸಭಾ ಕ್ಷೇತ್ರದಲ್ಲಿ 25 ವರ್ಷಗಳಿಂದ ಹಿಂದುಳಿದವರಿಗೆ ಅವಕಾಶ ಸಿಕ್ಕಿಲ್ಲ: ಆನಂದ್ ಆಸ್ನೋಟಿಕರ್

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಗೋಪಿ ಮಾತನಾಡಿ, ಬಿಜೆಪಿ ಕಳಪೆ ಸಾಧನೆ ಮಾಡಿಲ್ಲ, 66 ಕ್ಷೇತ್ರಗಳನ್ನು ಗೆದ್ದು ಎರಡನೇ ಸ್ಥಾನಕ್ಕೆ ಬಂದಿದ್ದೇವೆ. 2018ರಲ್ಲಿ ಕಾಂಗ್ರೆಸ್‌ ಪಕ್ಷವೂ ಸಹ ಎರಡನೇ ಸ್ಥಾನಕ್ಕೆ ಕುಸಿದಿತ್ತು. ರಾಜಕಾರಣದಲ್ಲಿ ಏರುಪೇರು ಸಹಜ, ಮತದಾರನ ಆದ್ಯತೆ ಮೇಲೆ ಎಲ್ಲವೂ ನಿರ್ಧಾರವಾಗುತ್ತದೆ. ಹಾಗೆಂದು ವ್ಯಕ್ತಿಗಳನ್ನು ದೂಷಣೆ ಮಾಡುವುದು ತರವಲ್ಲ ಎಂದರು. ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಬಿ.ಸಿ.ನಾರಾಯಣಸ್ವಾಮಿ, ಓಬಿಸಿ ಘಟಕದ ನಾರಾಯಣಸ್ವಾಮಿ, ಗ್ರಾಮಾಂತರ ಅಧ್ಯಕ್ಷ ನಾಗೇಶ್‌, ನಗರಾಧ್ಯಕ್ಷ ಮುದ್ದಪ್ಪ, ರಾಮಕಿಟ್ಟಿ, ವೆಂಕಟರಾಜು ಉಪಸ್ಥಿತರಿದ್ದರು.