ರಾಜ್ಯ ಸರಕಾರಕ್ಕೆ ವರ್ಷ ಭರ್ತಿಯಾದ ಬೆನ್ನಲ್ಲೇ ಸಂಪುಟ ಸರ್ಜರಿಯ ಮಾತು ಕೇಳಿ ಬರುತ್ತಿವೆ. ಆದರೆ ಸದ್ಯ ವಿಸ್ತರಣೆಯನ್ನಷ್ಟೇ ಮಾಡಿ, ಮುಂದಿನ ವರ್ಷ ಪುನಾರಚಿಸುವ ಸಾಧ್ಯತೆ ಹೆಚ್ಚು ಎನ್ನಲಾಗುತ್ತಿದೆ. ಈ ಬಗ್ಗೆ ಪಕ್ಷ ಉನ್ನತ ಮಟ್ಟದಲ್ಲೂ ಚರ್ಚೆಯಾಗಿದೆ. ಇದರ ಮಧ್ಯೆ ಬಿಎಲ್ ಸಂತೋಷ್ ಅವರು ಸಿಎಂ ಭೇಟಿಯಾಗಿದ್ದಾರೆ.
ಬೆಂಗಳೂರು, (ಆ.22): ಕೋವಿಡ್ 19 ಸ್ಥಿತಿಗತಿ ಅವಲೋಕಿಸಿ ಜನವರಿ ಹೊತ್ತಿಗೆ ಸಂಪುಟ ಪುನಾರಚನೆ ಬಗ್ಗೆ ತೀರ್ಮಾನಿಸಬಹುದು ಎಂದು ಮೂಲಗಳು ತಿಳಿಸಿವೆ. ಹಾಗಾಗಿ ಹಾಲಿ ಸಚಿವರ ಕಾರ್ಯವೈಖರಿ ಮೇಲೆ ಪಕ್ಷ ನಿಗಾ ಇರಿಸಲಾರಂಭಿಸಿದೆ.
"
ಇದಕ್ಕೆ ಪೂರಕವೆಂಬಂತೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಇಂದು (ಶನಿವಾರ) ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.
ಬೊಮ್ಮಾಯಿ, ಸುಧಾಕರ್ ಜೊತೆ ಸಂತೋಷ್ ಚರ್ಚೆ: ಕುತೂಹಲ ಮೂಡಿಸಿದೆ ಬೆಳವಣಿಗೆ!
ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕಮಾರ್ ಜತೆ ಮುಖ್ಯಮಂತ್ರಿ ಅವರ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ ಸಂತೋಷ್, ಬಿಎಸ್‌ವೈ ಜೊತೆ ಉಪಹಾರ ಮಾಡುತ್ತಾ ಮಾತುಕತೆ ನಡೆಸಿದರು. ಸುಮಾರು ಮುಕ್ಕಾಲು ಗಂಟೆ ಚರ್ಚೆ ಪಕ್ಷದ ವಲಯದಲ್ಲಿ ಬಿಸಿ-ಬಿಸಿ ಚರ್ಚೆ ಹುಟ್ಟುಹಾಕಿದೆ.
ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಮತ್ತು ಆತ್ಮೀಯರೂ ಆಗಿರುವ ಬಿಲ್ ಸಂತೋಷ್ ಅವರನ್ನ ಮನೆಗೆ ಆಹ್ವಾನಿಸಿ ಹಬ್ಬದ ಶುಭಾಶ ಕೋರಿದೆ. ಅಲ್ಲದೇ ರಾಜ್ಯದ ಅಭಿವೃದ್ಧ ಹಾಗೂ ಪಕ್ಷಸಂಘಟನೆ ಕುರಿತಂತೆ ಮಾತುಕತೆ ನಡೆಸಿದೆ ಎಂದು ತಿಳಿಸಿದ್ದಾರೆ.
ನಿನ್ನೆ (ಶುಕ್ರವಾರ) ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದ ಬಿ.ಎಲ್. ಸಂತೋಷ್ ಅವರು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರನ್ನು ಕರೆಸಿ ಚರ್ಚೆ ನಡೆಸಿದ್ದರು
