Asianet Suvarna News Asianet Suvarna News

ದೇಶದ್ರೋಹಿಗೆ ಮೋದಿ ಭಸ್ಮಾಸುರ: ಕಾಂಗ್ರೆಸ್‌ಗೆ ಸಿ.ಟಿ. ರವಿ ಟಾಂಗ್‌

ರಾಮಮಂದಿರ ನಿರ್ಮಿಸುವವರು ರಾವಣ ಹೇಗೆ ಆಗುತ್ತಾರೆ? ದಿನಕ್ಕೊಂದು ಬಣ್ಣ ಬದಲಿಸುವವರು, ರಾಮನನ್ನು ಕಾಲ್ಪನಿಕ ವ್ಯಕ್ತಿ ಎಂದು ಅಫಿಡವಿಟ್‌ ನೀಡಿದ ಕಾಂಗ್ರೆಸ್‌ ಪಕ್ಷ ರಾವಣ ಮನಸ್ಥಿತಿ ಹೊಂದಿದೆ ಎಂದು ಕಿಡಿಕಾರಿದ ಸಿ.ಟಿ. ರವಿ 

BJP National General Secretary CT Ravi Slams Congress grg
Author
First Published Dec 4, 2022, 2:55 PM IST

ಬೆಂಗಳೂರು(ಡಿ.04): ಪ್ರಧಾನಿ ನರೇಂದ್ರ ಮೋದಿ ಅವರು ದೇಶದ್ರೋಹಿಗಳಿಗೆ ಭಸ್ಮಾಸುರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ.

ಶನಿವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶವನ್ನು ರಕ್ಷಿಸುವ ಮತ್ತು ಜನರನ್ನು ಬದುಕಿಸಿದ ವಿಚಾರದಲ್ಲಿ ನರೇಂದ್ರ ಮೋದಿ ಅವರು ಶ್ರೀಮನ್ನಾರಾಯಣ. ಜನರ ಪಾಲಿಗೆ ಅವರು ಕಲ್ಪವೃಕ್ಷ, ಕಾಮಧೇನು. ಗುಜರಾತ್‌ನಲ್ಲಿ ಟೀಕಿಸುವ ಯಾವುದೇ ಸರಕಿಲ್ಲದೆ ಕಾಂಗ್ರೆಸ್‌ ಜನರ ಹೃದಯ ಸಾಮ್ರಾಟರಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾವಣ ಎಂದಿದ್ದಾರೆ. ರಾಮಮಂದಿರ ನಿರ್ಮಿಸುವವರು ರಾವಣ ಹೇಗೆ ಆಗುತ್ತಾರೆ? ದಿನಕ್ಕೊಂದು ಬಣ್ಣ ಬದಲಿಸುವವರು, ರಾಮನನ್ನು ಕಾಲ್ಪನಿಕ ವ್ಯಕ್ತಿ ಎಂದು ಅಫಿಡವಿಟ್‌ ನೀಡಿದ ಕಾಂಗ್ರೆಸ್‌ ಪಕ್ಷ ರಾವಣ ಮನಸ್ಥಿತಿ ಹೊಂದಿದೆ ಎಂದು ಕಿಡಿಕಾರಿದರು.

ಬಿಜೆಪಿ ಸರಿಯಾಗಿ ಕೆಲಸ ಮಾಡಿದ್ದರೆ ಮೋದಿ ಏಕೆ ಇಷ್ಟು ಸುತ್ತಬೇಕು: ಖರ್ಗೆ

ಗುಜರಾತ್‌ನಲ್ಲಿ ಒಂದೂವರೆ ತಿಂಗಳ ಕಾಲ ತಾವು ಚುನಾವಣೆ ಕೆಲಸ ಮಾಡಿದ್ದು, ಅಲ್ಲಿ ಬಿಜೆಪಿ ಪರವಾದ ಅಲೆ ಇದೆ. ಪ್ರಧಾನಿ ನರೇಂದ್ರ ಮೋದಿಯವರು ಜನರ ಹೃದಯ ಗೆದ್ದಿದ್ದಾರೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಶತಃಸಿದ್ಧ. ಹಿಮಾಚಲ ಪ್ರದೇಶದಲ್ಲಿಯೂ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಸಕಾರಾತ್ಮಕ ಬದಲಾವಣೆ, ಅಭಿವೃದ್ಧಿಯ ವೇಗದ ವಿಚಾರದಲ್ಲಿ ಕಾಂಗ್ರೆಸ್‌-ಕಮ್ಯೂನಿಸ್ಟ್‌ ಪಕ್ಷದ ಸರ್ಕಾರಗಳು ಬಿಜೆಪಿ ಸರ್ಕಾರಗಳಿಗೆ ಸರಿಸಾಟಿಯಲ್ಲ. ಆರ್ಥಿಕ ಬೆಳವಣಿಗೆ, ಮೂಲಸೌಕರ್ಯ ಅಭಿವೃದ್ಧಿಗೆ ಬಿಜೆಪಿ ಬದ್ಧವಾಗಿದೆ. ಕಾಂಗ್ರೆಸ್‌-ಕಮ್ಯೂನಿಸ್ಟ್‌ ಪಕ್ಷಗಳು ತಮ್ಮ ನೀತಿಯ ಬಗ್ಗೆ ಅವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು.
 

Follow Us:
Download App:
  • android
  • ios